ETV Bharat / state

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ - LAKSHMI HEBBALKAR CAR ACCIDENT

ಸಚಿವ ಸತೀಶ್ ಜಾರಿಕಿಹೊಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು.

ಸಚಿವ ಸತೀಶ ಜಾರಕಿಹೊಳಿ
ಸಚಿವ ಸತೀಶ ಜಾರಕಿಹೊಳಿ (ETV Bharat)
author img

By ETV Bharat Karnataka Team

Published : Jan 17, 2025, 9:25 AM IST

ಬೆಳಗಾವಿ: ಸದ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವಾಗಿದ್ದಾರೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾವು ಬಯಸುತ್ತೇವೆ. ವೈದ್ಯರು ಕೂಡ ಹೆಬ್ಬಾಳ್ಕರ್ ಅವರು ಶೀಘ್ರವೇ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗುರುವಾರ ರಾತ್ರಿ ಸತೀಶ್ ಜಾರಕಿಹೊಳಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ. ಚೇತರಿಸಿಕೊಳ್ಳಲು ಇನ್ನೂ ನಾಲ್ಕೈದು ದಿನ ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಸಚಿವ ಸತೀಶ ಜಾರಕಿಹೊಳಿ (ETV Bharat)

ನಾವು ಕೂಡ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಆಸ್ಪತ್ರೆಯಲ್ಲೆ ಇರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದೇವೆ. ಯಾಕೆಂದರೆ ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ದೊರೆಯುತ್ತದೆ. ಅವರು ಚೇತರಿಸಿಕೊಳ್ಳಲು ಇನ್ನೂ‌ ಒಂದು ವಾರ ಅಥವಾ ಹತ್ತು ದಿನ ಸಮಯಾವಕಾಶ ಬೇಕಾಗುತ್ತದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ರವಿ ಪಾಟೀಲ ಮಾತನಾಡಿ, ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮೊದಲ‌ ದಿನದ ಎಂಆರ್​ಐ ಸ್ಕ್ಯಾನ್, ಅಲ್ಟ್ರಾ ಸೌಂಡ್ ಸ್ಕ್ಯಾನ್ ವರದಿಗೂ‌ ಇಂದು ಮಾಡಿದ ಪರೀಕ್ಷೆಯಲ್ಲಿ ಬಹಳಷ್ಟು ಸುಧಾರಣೆ ಕಾಣಿಸಿದೆ. ಯಾವುದೇ ತೀವ್ರತರವಾದ ಗಾಯ ಕಂಡುಬಂದಿಲ್ಲ ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ. ಬೆನ್ನು ಹುರಿಗೆ ಪೆಟ್ಟಾಗಿದ್ದರಿಂದ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಹೇಳಿದ್ದೇವೆ. ಸರಿಯಾಗಿ ಊಟ ತೆಗೆದುಕೊಳ್ಳುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ಆದಷ್ಟು ಬೇಗನೇ ಅವರು ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯ ಚಟುವಟಿಕೆ ಶುರು ಮಾಡಲಿದ್ದಾರೆ ಅಂತಾ ಅನಿಸುತ್ತದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲು ನಿರ್ಧರಿಸಿದ್ದೇವೆ. ಅದೇ ರೀತಿ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಹಾಗೂ ಕಾರು ಚಾಲಕ ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡಿದ್ದು, ಅವರೆಲ್ಲಾ ಮನೆಗೆ ಹೋಗಿದ್ದಾರೆ ಎಂದು ಹೇಳಿದರು.

ಸೋಮವಾರ ಸಚಿವರ ಕಾರಿಗೆ ಅಪಘಾತ: ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸೋಮವಾರ ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರಿದ್ದ ಕಾರು ಅಪಘಾತಕ್ಕೀಡಾತ್ತು. ಕಾರು ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ ಮತ್ತು ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಗಾಯಗೊಂಡಿದ್ದರು.

ಇದನ್ನೂ ಓದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಟ್ವಿಸ್ಟ್​ - ಹಿಟ್ ಅಂಡ್​ ರನ್ ಕೇಸ್ ದಾಖಲು: ಎಸ್ಪಿ ಡಾ.ಭೀಮಾಶಂಕರ ಗುಳೇದ

ಇದನ್ನೂ ಓದಿ: ಕಿತ್ತೂರು ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.