ETV Bharat / state

'ಅಥಣಿಯಲ್ಲಿ ನಮ್ಮ ನಂಬಿಕೆಗೆ ಮೋಸ': ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಅಸಮಾಧಾನ - MINISTER SATISH JARKIHOLI - MINISTER SATISH JARKIHOLI

ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು.

minister-satish-jarkiholi
ಸಚಿವ ಸತೀಶ್ ಜಾರಕಿಹೊಳಿ (ETV Bharat)
author img

By ETV Bharat Karnataka Team

Published : Jun 6, 2024, 7:57 PM IST

Updated : Jun 6, 2024, 8:29 PM IST

ಸಚಿವ ಸತೀಶ್ ಜಾರಕಿಹೊಳಿ (ETV Bharat)

ಚಿಕ್ಕೋಡಿ (ಬೆಳಗಾವಿ): ಅಥಣಿ ಕ್ಷೇತ್ರದಲ್ಲಿ ನಮ್ಮ ನಂಬಿಕೆಗೆ ಮೋಸವಾಗಿದೆ. ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಂತಾಗಿದೆ. ಮೂಲ‌ ಕಾಂಗ್ರೆಸ್ ಮತದಾರರು ಕೈ ಹಿಡಿದ ಕಾರಣಕ್ಕೆ ನಮಗೆ ಜಯ ಸಿಕ್ಕಿದೆ ಎಂದು ಲಕ್ಷ್ಮಣ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಅಥಣಿ ಪಟ್ಟಣದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸಿತ್ತು. ಆದರೆ ಕೆಲವು ಕ್ಷೇತ್ರಗಳಲ್ಲಿ ನಮ್ಮವರಿಂದಲೇ ಮೋಸವಾಗಿದೆ. ಕ್ಷೇತ್ರದ ಅನೇಕ ಕಡೆ ಗೆಲುವಿನ ಗುಲಾಲ್ ಹರಿದಿದ್ದರೂ ಅಥಣಿಯಲ್ಲಿ ಇದು ಸಾಧ್ಯವಾಗಲಿಲ್ಲ ಎಂದರು.

ನಮ್ಮ ನಂಬಿಕೆಗೆ ಅಥಣಿಯಲ್ಲಿ ಮೋಸವಾಗಿದೆ. ಚುನಾವಣೆಪೂರ್ವದಲ್ಲಿ ಇಲ್ಲಿನ ನಾಯಕರು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಲ್ಲ. ಪ್ರಚಾರ ಕಾರ್ಯದಲ್ಲೂ ಉತ್ಸಾಹ ತೋರಿಸಲಿಲ್ಲ. ಕೊನೆಯ ಪಕ್ಷ ನಮಗೆ ತಿಳಿಸಿದ್ದರೆ ನಾವಾದರೂ ಕೆಲಸ ಮಾಡಿ ಹೆಚ್ಚಿನ ಮತಗಳನ್ನು ಪಡೆಯಲು ಶ್ರಮವಹಿಸಿ ಕೆಲಸ ಮಾಡುತ್ತಿದ್ದೆವು. ಇದರಿಂದ ನಮ್ಮ ಮತ್ತು ಅವರ ಮಧ್ಯೆ ಅಂತರ ಹೆಚ್ಚಾಗಿದೆ ಎಂದು ಸವದಿ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದರು.

ಕಾಗವಾಡದಲ್ಲಿ ಶಾಸಕ ರಾಜು ಕಾಗೆ ಮತದಾನಪೂರ್ವದಲ್ಲಿ ಕ್ಷೇತ್ರದ ಸ್ಥಿತಿಗತಿ ಕುರಿತು ತಿಳಿಸಿದ್ದರು. ಸ್ವಲ್ಪ ಸವಾಲು ಎದುರಾಗುತ್ತಿದ್ದಂತೆ ನಮಗೂ ಕ್ಷೇತ್ರವನ್ನು ನೋಡಿಕೊಳ್ಳಲು ತಿಳಿಸಿರುವ ಪರಿಣಾಮ ನಾವು ಚುನಾವಣೆಯಲ್ಲಿ ಹೆಚ್ಚಿನ ಕಾರ್ಯ ಮಾಡಲು ಸಹಕಾರಿಯಾಯಿತು. ಇದರಿಂದ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಹೆಚ್ಚಿನ ಮತ ಪಡೆಯಲು ಸಾಧ್ಯವಾಗಿದೆ. ಆದರೆ ಅಥಣಿಯಲ್ಲಿ ಪರಿಸ್ಥಿತಿ ಭಿನ್ನವಾಗಿತ್ತು. ಮುಂದಿನ ದಿನಗಳಲ್ಲಿ ಮೂಲ ಕಾಂಗ್ರೆಸ್ಸಿಗರ ರಕ್ಷಣೆಯ ಜೊತೆಗೆ ಪಕ್ಷ ಬಲಪಡಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಶಾಸಕ ಮಹೇಶ್ ತಮ್ಮಣ್ಣವರ್ ಕಾಂಗ್ರೆಸ್‌ಗೆ ಮೋಸ ಮಾಡಿದ್ದಾರೆ: ನಾನು ಯಾರನ್ನೂ ತುಳಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಚುನಾವಣೆಗೆ ಮೂರು ದಿನ ಇರುವಾಗಲೇ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ್​ ಯಾರ ಕೈಗೂ ಸಿಕ್ಕಿಲ್ಲ. ಅವರು ಸರಿಯಾಗಿ ಚುನಾವಣೆ ಮಾಡಲಿಲ್ಲ ಎಂದು ಜಾರಕಿಹೊಳಿ ತಿಳಿಸಿದರು.

ಸಚಿವ ಸತೀಶ್ ಜಾರಕಿಹೊಳಿ (ETV Bharat)

ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ್​ಗೆ ನಾವೇ ಟಿಕೆಟ್ ನೀಡಿದ್ದೇವೆ. ಆದರೆ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಮಾವನ ಪರ ಕೆಲಸ ಮಾಡಿದರು ಎಂದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೂ ಸಹ ಕಾಂಗ್ರೆಸ್ ಕಾರ್ಯಕರ್ತರು ಮಾತ್ರ ಪಕ್ಷ ಬಿಡಲಿಲ್ಲ. ಅವನ ಬಗ್ಗೆ ಹೆಚ್ಚು ಮಾತಾಡುವ ಅವಶ್ಯಕತೆ ಇಲ್ಲ. ಅದೊಂದು ಮುಗಿದು ಹೋದ ಅಧ್ಯಾಯ ಎಂದು ಕುಡಚಿ ಶಾಸಕರ ವಿರುದ್ಧ ಸತೀಶ್ ಏಕವಚನದಲ್ಲಿಯೇ ಗುಡುಗಿದರು ಎಂದು ಹರಿಹಾಯ್ದರು.

ಶಾಸಕ ಮಹೇಂದ್ರ ತಮ್ಮಣ್ಣವರ್ ಆರೋಪವೇನು?: ಸತೀಶ್ ಜಾರಕಿಹೊಳಿ ರಾಜ್ಯದಲ್ಲಿಯೇ ಪ್ರಭಾವಿ ನಾಯಕರು. ಅವರು ನಮ್ಮನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ್ ಗಂಭೀರ ಆರೋಪ ಮಾಡಿದ್ದರು.

ಶಾಸಕ ಮಹೇಂದ್ರ ತಮ್ಮಣ್ಣವರ್ (ETV Bharat)

ಚಿಕ್ಕೋಡಿ ಪಟ್ಟಣದ ಹೊರವಲಯದ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ್ದ ಅವರು, ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಹೆಚ್ಚಿನ ಮತ ನೀಡಿದ್ದಾರೆ. ಆದರೆ, ಸಚಿವರು ನನ್ನ ಮೇಲೆ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ. ನಾನು ವಿಧಾನಸಭಾ ಚುನಾವಣೆಯಲ್ಲಿ 23 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೆ. ಅದೇ ರೀತಿ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದರಿಗೆ ಕುಡಚಿ ವಿಧಾನಸಭಾ ಕ್ಷೇತ್ರದಿಂದ 22 ಸಾವಿರ ಮತಗಳ ಲೀಡ್​ ನೀಡಲಾಗಿದೆ. ಆದರೂ ಸಚಿವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಮ್ಮ ಸಮುದಾಯದ ಹಲವು ನಾಯಕರನ್ನು ಈ ರೀತಿ ಟಾರ್ಗೆಟ್ ಮಾಡಿ ತುಳಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಲೋಕ ಸಮರ: 14-16 ಕ್ಷೇತ್ರ ಕಾಂಗ್ರೆಸ್ ಗೆಲ್ಲಲಿದೆ - ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ - Minister Satish Jarkiholi

Last Updated : Jun 6, 2024, 8:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.