ETV Bharat / state

ಹಿಂದೂ, ಮುಸ್ಲಿಂ ಸಂಪ್ರದಾಯದಂತೆ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ದಂಪತಿ - Bhadra Reservoir

ಭದ್ರಾ ಜಲಾಶಯಕ್ಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ದಂಪತಿ ಇಂದು ಬಾಗಿನ ಅರ್ಪಿಸಿದರು.

Minister Mallikarjuna couple offer Bagina to bhadra reserviour
ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಲ್ಲಿಕಾರ್ಜುನ ದಂಪತಿ (ETV Bharat)
author img

By ETV Bharat Karnataka Team

Published : Aug 18, 2024, 10:16 PM IST

ಭಾವೈಕ್ಯತೆಯಂತೆ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಮಲ್ಲಿಕಾರ್ಜುನ ದಂಪತಿ (ETV BHARAT)

ಶಿವಮೊಗ್ಗ: ರಾಜ್ಯದ ಜೀವನಾಡಿಯಾದ ಭದ್ರಾ ಜಲಾಶಯಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಮ್ಮ ಧರ್ಮಪತ್ನಿ, ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಹಿಂದೂ ಮತ್ತು ಮುಸ್ಲಿಂ ಸಂಪ್ರದಾಯದಂತೆ ಇಂದು ಬಾಗಿನ ಅರ್ಪಿಸಿದರು.

ಇದಕ್ಕೂ ಮುನ್ನ, ಜಲಾಶಯದಲ್ಲಿನ ಶಿವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಮುಸ್ಲಿಂ ಸಂಪ್ರದಾಯದಂತೆ ಮೌಲ್ವಿಗಳು ಕುರಾನ್ ಪಠಿಸಿದರು. ಈ ವೇಳೆ ಸಚಿವ ಮಲ್ಲಿಕಾರ್ಜುನ್ ಹಾಗೂ ಇತರೆ ಶಾಸಕರು ತಲೆ ಮೇಲೆ ಟವಲ್ ಹಾಕಿಕೊಂಡು ಮೌಲ್ವಿ ಅವರು ಹೇಳಿದ ಕುರಾನ್ ಉಚ್ಛರಿಸಿದರು. ನಂತರ ಜಲಾಶಯಕ್ಕೆ ಸಿಹಿ ಅರ್ಪಿಸಿದರು.

ಬಳಿಕ ಮಾತನಾಡಿದ ಸಚಿವ ಮಲ್ಲಿಕಾರ್ಜುನ್, "ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದೆ. ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ" ಎಂದು ಹೇಳಿದರು.

"ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮ ರೈತರಲ್ಲಿ ಆತಂಕದ ಛಾಯೆ ಮೂಡಿತ್ತು. ಈ ಸಲ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿ ರೈತರ ನೆಮ್ಮದಿಯ ಬದುಕಿಗೆ ಆಸರೆಯಾಗಲಿ" ಎಂದು ಆಶಿಸಿದರು.

ಇದೇ ವೇಳೆ, ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಅಧಿಕಾರಿಗಳು ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ - Bagina To Kabini Dam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.