ETV Bharat / state

ತುಮಕೂರು ರೈಲು ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡುವಂತೆ ಪ್ರಧಾನಿಗೆ ಸೋಮಣ್ಣ ಮನವಿ - SIDDAGANGA SEER

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಚಿವ ವಿ.ಸೋಮಣ್ಣ, ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿಡುವಂತೆ ಮನವಿ ಮಾಡಿದರು.

ಪ್ರಧಾನಿ ಮೋದಿ ಭೇಟಿಯಾದ ವಿ ಸೋಮಣ್ಣ
ಪ್ರಧಾನಿ ಮೋದಿ ಭೇಟಿಯಾದ ವಿ.ಸೋಮಣ್ಣ (ETV Bharat)
author img

By ETV Bharat Karnataka Team

Published : Oct 8, 2024, 5:52 PM IST

ಬೆಂಗಳೂರು: ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸೋಮಣ್ಣ, 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿಗೆ ವಿವರಿಸಿದ್ದಾರೆ.

ಬೆಂಗಳೂರು ಸಬ್ ಅರ್ಬನ್ ರೈಲ್ವೆ, ವರ್ತುಲ ರೈಲ್ವೆ ಇತ್ಯಾದಿಗಳ ಬಗ್ಗೆ ಎರಡು ಸುತ್ತಿನ ಸಭೆ ನಡೆಸಿರುವ ಬಗ್ಗೆ ವಿ.ಸೋಮಣ್ಣ ವಿವರಿಸಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು-ರಾಯದುರ್ಗ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ ಶೇ 90ಕ್ಕಿಂತಲೂ ಮಿಗಿಲಾಗಿ ಮುಗಿಸಿರುವ ಬಗ್ಗೆ ಸೋಮಣ್ಣ ಮಾಹಿತಿ ನೀಡಿದ್ದಾರೆ.

ರೈಲ್ವೆ ಅಧಿಕಾರಿ ಮತ್ತು ಜಿಲ್ಲಾಡಳಿತದ ಉತ್ತಮ ಕಾರ್ಯವೈಖರಿಯ ಬಗ್ಗೆ ಪ್ರಧಾನಿಗಳು ಅತ್ಯಂತ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಳೆದ 3 ತಿಂಗಳಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕಾರ್ಯವೈಖರಿಯನ್ನೂ ಪ್ರಧಾನಮಂತ್ರಿಗಳು ಶ್ಲಾಘಿಸಿದ್ದಾರೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ತುಮಕೂರು– ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆಯೂ ಮೋದಿ ಅವರಿಗೆ ಸೋಮಣ್ಣ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕಾಂಗ್ರೆಸ್ ಹಿರಿಯ ಮುಖಂಡ ಕೋಳಿವಾಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.