ETV Bharat / state

ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂದಿಲ್ಲ, ಬಾಯಿ ತಪ್ಪಿ ಬಂದಿದೆ : ಸಚಿವ ಜಮೀರ್ ಅಹಮದ್ ಖಾನ್ - Minister Zameer Ahmed Khan

author img

By ETV Bharat Karnataka Team

Published : 6 hours ago

ಸಚಿವ ಜಮೀರ್ ಅಹಮದ್ ಖಾನ್ ಅವರು ಹೈಕೋರ್ಟ್​ ತೀರ್ಪಿನ ಕುರಿತು ಹೇಳಿಕೆ ನೀಡಿದ್ದರ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್​ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ, ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಹೇಳಿದ್ದೇನೆ ಎಂದಿದ್ದಾರೆ.

minister-zameer-ahmed-khan
ಸಚಿವ ಜಮೀರ್ ಅಹಮದ್ ಖಾನ್ (ETV Bharat)

ಬೆಂಗಳೂರು : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಅವರು, ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವ ಇದ್ದು, ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಿದ್ದೇವೆ. ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬುದು ನನ್ನ ಅಭಿಪ್ರಾಯ ಆಗಿತ್ತು ಎಂದು ಹೇಳಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ (ETV Bharat)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ತನಿಖೆ ನಡೆಯಲಿ, ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್, ಶಾಸಕರು, ಸಚಿವರು ಮುಖ್ಯಮಂತ್ರಿ ಜತೆ ಇದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ಪ್ರಶ್ನೆ ಇಲ್ಲ ಎಂದು ನಿನ್ನೆ ಮಾಧ್ಯಮ ಮಿತ್ರರ ಜತೆ ಮಾತನಾಡುತ್ತಾ ಹೇಳಿದ್ದೆ. ಅದು ಹೊರತು ಪಡಿಸಿ ನ್ಯಾಯಾಲಯದ ತೀರ್ಪಿನ ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಲಿಲ್ಲ. ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದ ಆಗಿತ್ತು. ನನಗೆ ಎಂದಿಗೂ ನ್ಯಾಯಾಲಯದ ಬಗ್ಗೆ ಅತ್ಯಂತ ಹೆಚ್ಚಿನ ಗೌರವ ಇದೆ ಎಂಬುದನ್ನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ಒಂದೊಮ್ಮೆ ಬಾಯಿ ತಪ್ಪಿ ಹೇಳಿದ್ದರೆ ಕ್ಷಮೆ ಯಾಚಿಸಲು ಸಿದ್ದ ಎಂದು ಹೇಳಿದ್ದಾರೆ.

ಕೋಳಿವಾಡ ಯಾರು?: ಸಿಎಂ ರಾಜೀನಾಮೆಗೆ ಕೋಳಿವಾಡ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸುತ್ತಾ, ನಮ್ಮದು ಹೈಕಮಾಂಡ್ ಪಕ್ಷ. ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಹೀಗಿದ್ದಾಗ ಕೋಳಿವಾಡ್ ಯಾರು?. ನಮ್ಮ ಹೈಕಮಾಂಡ್ ನಾಯಕರು ಹೇಳಬೇಕು. ಎಲ್ಲ ಶಾಸಕರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಹೈಕಮಾಂಡ್ ಬೆನ್ನಿಗೆ ನಿಂತಿದೆ ಎಂದರು.

ನಾನೇ ಕಳ್ಳ, ಇನ್ನೊಬ್ಬರ ಬಗ್ಗೆ ಹೇಳಬಹುದಾ?: ಕೇಂದ್ರ ಸಚಿವ ಹೆಚ್.​ ಡಿ ಕುಮಾರಸ್ವಾಮಿ ಬಗ್ಗೆ ಪ್ರತಿಕ್ರಿಯಿಸುತ್ತಾ, ಕುಮಾರಸ್ವಾಮಿ ಬೇಲ್​ನಲ್ಲಿ ಇದ್ದಾರೆ. ಅವರು ರಾಜೀನಾಮೆ ಕೊಡಬೇಕು. ಸಿದ್ದರಾಮಯ್ಯ ಬೇಲ್​ ಮೇಲೆ ಇಲ್ಲ‌‌. ಕುಮಾರಸ್ವಾಮಿ ಬೇಲ್​ನಲ್ಲಿ ಇದ್ದಾರೆ. ಅವರು ರಾಜೀನಾಮೆ ಕೊಡಬೇಕು. ನಾನೇ ಕಳ್ಳ, ಅಂದಾಗ ಬೇರೆಯವರ ಬಗ್ಗೆ ಹೇಳಬಹುದಾ?. ಕುಮಾರಸ್ವಾಮಿಗೆ ಈ ತರಹ ಮಾತನಾಡಲು ಯಾವ ನೈತಿಕತೆ ಇದೆ?. ಮೊದಲು ಅವರು ರಾಜೀನಾಮೆ ಕೊಡಲು ಹೇಳಿ. ಆಮೇಲೆ ಮಾತನಾಡಲಿ. ಬಹಳ ದೊಡ್ಡ ಸತ್ಯ ಹರಿಶ್ಚಂದ್ರನ ತರ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ಜಮೀ‌ರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ : ಟಿ ಜೆ ಅಬ್ರಹಾಂ ಎಚ್ಚರಿಕೆ - T J Abraham

ETV Bharat Logo

Copyright © 2024 Ushodaya Enterprises Pvt. Ltd., All Rights Reserved.