ETV Bharat / state

ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣ: ತನಿಖೆ ನಡೆಸಿ ವರದಿ ನೀಡಲು ಡಿಸಿಗೆ ಸಚಿವ ಜಮೀರ್ ಸೂಚನೆ - MINISTER ZAMEER

ವಿಮ್ಸ್‌ನಲ್ಲಿ ಬಾಣಂತಿ ಸಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ZAMEER AHMED KHAN ORDERS
ಸಚಿವ ಜಮೀರ್ ಅಹಮದ್ ಖಾನ್ (ETV Bharat)
author img

By ETV Bharat Karnataka Team

Published : Nov 29, 2024, 7:11 AM IST

Updated : Nov 29, 2024, 8:51 AM IST

ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿಯ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಮಾಹಿತಿ ಪಡೆದ ಸಚಿವರು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಹಿಂದಿನ ಪ್ರಕರಣಗಳು: ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧವಿಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಮಹಾಲಕ್ಷ್ಮಿ ಎಂಬವರು ವಿಮ್ಸ್​ಗೆ ನ.24ರಂದು ದಾಖಲಾಗಿ 26ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಕುರಿತು ಆರೋಗ್ಯಾಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯ ಬಿಮ್ಸ್​​ನಲ್ಲಿ​ ಬಾಣಂತಿ ಸಾವು: ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ನಿರ್ಲಕ್ಷ್ಯ ಆರೋಪ

ವೈದ್ಯರ ನಿರ್ಲಕ್ಷ್ಯ- ಕುಟುಂಬಸ್ಥರ ಆರೋಪ: ಸಹಜ ಹೆರಿಗೆಯಾದ ಮಹಾಲಕ್ಷ್ಮಿಗೆ ಗಂಡು ಮಗು ಜನಿಸಿತ್ತು. ಹೆರಿಗೆಯ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಐಸಿಯುನಲ್ಲಿ ದಾಖಲಿಸಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ನಿರ್ಲಕ್ಷ್ಯದಿಂದ ಮಹಾಲಕ್ಷ್ಮಿ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಬಿಮ್ಸ್ ನಿರ್ದೇಶಕರ ಹೇಳಿಕೆ: ಈ ಕುರಿತು ಬಿಮ್ಸ್ ವೈದ್ಯ ಹಾಗೂ ನಿರ್ದೇಶಕ ಗಂಗಾಧರ ಗೌಡ ಪ್ರತಿಕ್ರಿಯೆ ನೀಡಿ, "ಮಹಾಲಕ್ಷ್ಮಿ ಅವರಿಗೆ ರಕ್ತಹೀನತೆ ಇತ್ತು. ಮೊದಲು ಅವರನ್ನು ಕೂಡ್ಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಅಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಈ ಬಗ್ಗೆ ನಾವು ಮೊದಲೇ ತಿಳಿಸಿದ್ದೆವು. ಅಲ್ಲದೇ ನಮ್ಮ ಪ್ರಯತ್ನವನ್ನು ನಾವು ಮಾಡಿದ್ದೇವೆ" ಎಂದು ಹೇಳಿದರು.

ಸಿಸೇರಿಯನ್‌ ಬಳಿಕ ಬಾಣಂತಿಯರ ಸಾವು: ಸೋಮವಾರ (ನ.25) ರಾತ್ರಿ ಹೊಸಪೇಟೆ ಮೂಲದ ಮುಸ್ಕಾನ್ (22) ಎಂಬ ಬಾಣಂತಿ ಮೃತಪಟ್ಟಿದ್ದರು. ಅದಕ್ಕೂ ಮುನ್ನ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರು ಸಾವು: ತನಿಖಾ ತಂಡ ರಚಿಸಿದ ಸರ್ಕಾರ, ಶಾಸಕರು ಹೇಳಿದ್ದಿಷ್ಟು!

Last Updated : Nov 29, 2024, 8:51 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.