ETV Bharat / state

ಚಿಕ್ಕಬಳ್ಳಾಪುರ: ಅರಣ್ಯದಲ್ಲಿ ಅಪ್ರಾಪ್ತೆ - ಯುವಕ ಆತ್ಮಹತ್ಯೆ - suicide - SUICIDE

ಬಾಲಕಿ ಮತ್ತು ಯುವಕ ನಿನ್ನೆ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್​​ ತನಿಖೆಯಿಂದ ನಿಖರ ಕಾರಣ ತಿಳಿದುಬರಬೇಕಿದೆ.

ಗ್ರಾಮಾಂತರ ಪೊಲೀಸ್​ ಠಾಣೆ
ಗ್ರಾಮಾಂತರ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Sep 14, 2024, 2:34 PM IST

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಅಪ್ರಾಪ್ತೆ ಮತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಡನೆ ವರದಿಯಾಗಿದೆ.

ಮೃತರನ್ನು ಚಿಂತಾಮಣಿ ತಾಲೂಕಿನ ಸೀತಾರಾಮಪುರದ ಯುವಕ (22) ಮತ್ತು 16 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಯುವಕ ತಮ್ಮದೇ ಸಮುದಾಯದ ಬಾಲಕಿಯನ್ನು ಪ್ರೀತಿಸುತ್ತಿದ್ದು, ಈ ಸಂಬಂಧವು ಪೋಷಕರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಬಾಲಕಿಯ ಪೋಷಕರು ಮಾರ್ಚ್ 30 ರಂದು ಬಟ್ಲಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಾದ ನಂತರ, ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಂಡು, ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.

ಆದರೆ, ಸೆ.​ 13ರಂದು, ಇಬ್ಬರೂ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಗ್ರಾಮಸ್ಥರ ಗಮನಕ್ಕೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಶವ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಆತ್ಮಹತ್ಯೆಯ ಹಿಂದಿರುವ ನಿಖರವಾದ ಕಾರಣ ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಹಾಗೂ ಯುವಕನ ಪೋಷಕರು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ: ದಂಪತಿ ಸಹಿತ ಮೂವರು ದೋಷಿ, ಸೆ.17ಕ್ಕೆ ಶಿಕ್ಷೆ ಪ್ರಕಟ - Srimati Shetty Murder Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.