ಹುಬ್ಬಳ್ಳಿ: ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಯುವಕ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.
ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಪ್ರತಿಕ್ರಿಯಿಸಿ, ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನವನಗರ ಎಪಿಎಂಸಿ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ ಆರೋಪ; ಪೋಕ್ಸೋ ಪ್ರಕರಣ ದಾಖಲು - Rape on Minor Girl