ETV Bharat / state

ಹರಕೆ ಗೂಳಿಯ ಬಾಲ ಕತ್ತರಿಸಿದ ಕಿಡಿಗೇಡಿಗಳು; ಪೊಲೀಸರಿಂದ ಪರಿಶೀಲನೆ - ATTACK ON BULL

ನಂಜನಗೂಡಿನಲ್ಲಿ ಯಾರೋ ಕಿಡಿಗೇಡಿಗಳು ಹರಕೆ ಗೂಳಿಯ ಬಾಲ ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ATTACK ON BULL
ಪೊಲೀಸರಿಂದ ಪರಿಶೀಲನೆ (ETV Bharat)
author img

By ETV Bharat Karnataka Team

Published : Jan 16, 2025, 5:58 PM IST

ಮೈಸೂರು: ದೇವರಿಗೆ ಹರಕೆ ಬಿಟ್ಟಿದ ಗೂಳಿಯ ಬಾಲವನ್ನು ಯಾರೋ ಕಿಡಿಗೇಡಿಗಳು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಬಳಿ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ದೇವಾಲಯದ ಸಮೀಪ ಇರುವ ಹಳ್ಳದ ಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಶ್ರೀಕಂಠೇಶ್ವರನಿಗೆ ಹರಕೆಗೆ ಬಿಟ್ಟಿದ್ದ ಗೂಳಿಯನ್ನ ಕಿಡಿಗೇಡಿಗಳು ಬಾಲವನ್ನು ಕತ್ತರಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಹಾಗೂ ಪಶು ವೈದ್ಯರು ಆಗಮಿಸಿ ಗೂಳಿಗೆ ಚಿಕಿತ್ಸೆ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಂದ ಮಾಹಿತಿ (ETV Bharat)

ಎಸ್​ಪಿ ವಿಷ್ಣುವರ್ಧನ್ ಭೇಟಿ: ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಳ್ಳದ ಕೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಘಟನೆ ಗೊತ್ತಾಗುತ್ತಿದ್ದಂತೆ ನಮ್ಮ ಪೊಲೀಸ್ ಇಲಾಖೆಯ ಸಿಬ್ಬಂದಿ ಸಹ ಭೇಟಿ ನೀಡಿ ಸುಮೊಟೊ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಿಡಿಗೇಡಿಗಳ ಪತ್ತೆಗೆ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಬಂಧನ - COWS UDDERS CUT CASE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.