ETV Bharat / state

ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಇಬ್ಬರು ಪೊಲೀಸರಿಗೆ ಗಾಯ - Stone Pelting In Nagamangala - STONE PELTING IN NAGAMANGALA

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ರಾತ್ರಿ ಗಣೇಶ ಮೂರ್ತಿ ನಿಮಜ್ಜನೆ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ
ಮಂಡ್ಯದ ನಾಗಮಂಗಲ ಉದ್ನಿಗ್ನ (ETV Bharat)
author img

By ETV Bharat Karnataka Team

Published : Sep 12, 2024, 7:19 AM IST

Updated : Sep 12, 2024, 7:28 AM IST

ಎಸ್​ಪಿ, ಐಜಿಪಿ ಪ್ರತಿಕ್ರಿಯೆ (ETV Bharat)

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಘಟನೆಯ ಸಂಪೂರ್ಣ ವಿವರ: ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ (ನಿನ್ನೆ) ರಾತ್ರಿ ಮೂರ್ತಿಯ ನಿಮಜ್ಜನಾ ಮೆರವಣಿಗೆ ಅನ್ಯಕೋಮಿನ ಪ್ರಾರ್ಥನಾ ಮಂದಿರದ ಬಳಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

3 ದಿನ 144 ಸೆಕ್ಷನ್ ಜಾರಿ- ಐಜಿಪಿ: "ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಕೆಲವು ಅಂಗಡಿ ಮತ್ತು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಎಲ್ಲೆಡೆ ಭದ್ರತೆ ನೀಡಿದ್ದೇವೆ. ಪರಿಸ್ಥಿತಿ ಹತೋಟಿಗೆ ಬಂದಿದೆ. ಮೂರು ದಿನಗಳವರೆಗೆ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಗಲಾಟೆಯ ವೇಳೆ ಮಚ್ಚು, ಲಾಂಗು, ಪೆಟ್ರೋಲ್ ಬಾಂಬ್ ಬಳಸಿರುವ ಬಗ್ಗೆ ಮಾಹಿತಿ ಇಲ್ಲ. ಕೆಲವರನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ" ಎಂದು ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ತಿಳಿಸಿದರು.

ಎಸ್​ಪಿ ಪ್ರತಿಕ್ರಿಯೆ: "ಗಣೇಶ ಮೂರ್ತಿಯ ಮೆರವಣಿಗೆ ಹೆಚ್ಚು ಹೊತ್ತು ಮಸೀದಿಯ ಮುಂದೆ ನಿಂತಿರುವುದಕ್ಕೆ ಎರಡು ಕೋಮುಗಳ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ಮಾಡಿದರು. ಬಳಿಕ ಪೊಲೀಸರು ಹೊಡೆದರೆಂದು ಠಾಣೆ ಮುಂದೆ ಒಂದು ಗುಂಪಿನ ಯುವಕರು ಬಂದು ಪ್ರತಿಭಟನೆ ಮಾಡಿದ್ದಾರೆ. ಇನ್ನೊಂದೆಡೆ ಇನ್ನೊಂದು ಕೋಮಿನವರು ಕಲ್ಲು ತೂರಾಟ ಮಾಡಿದರು. ಎರಡು ಬೈಕ್​ ಮತ್ತು ನಾಲ್ಕೈದು ಅಂಗಡಿಗಳಿಗೂ ಬೆಂಕಿ ಹಚ್ಚಿದ್ದಾರೆ. ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ. ಪ್ರಕರಣದ ಬಗ್ಗೆ ತನಿಖೆ ಮಾಡುತ್ತಿದ್ದೇವೆ" ಎಂದು ಎಸ್​ಪಿ ಮಲ್ಲಿಕಾರ್ಜುನ್ ಬಾಲದಂಡಿ ಪ್ರತಿಕ್ರಿಯಿಸಿದರು.

ಕಳೆದ ವರ್ಷವೂ ಗಲಾಟೆ: ನಾಗಮಂಗಲದಲ್ಲಿ ಗಣೇಶೋತ್ಸವ ವೇಳೆ ಈ ರೀತಿಯ ಸಂಘರ್ಷ ಇದು ಮೊದಲಲ್ಲ. ಕಳೆದ ವರ್ಷವೂ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.

ಇದನ್ನೂ ಓದಿ: ಗಣೇಶ ನಿಮಜ್ಜನ ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಭಾಗಿ: ಬಿಗಿ ಪೊಲೀಸ್ ಬಂದೋಬಸ್ತ್ - Ganesha procession

Last Updated : Sep 12, 2024, 7:28 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.