ETV Bharat / state

ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಶಾಸಕ - Muda Scam - MUDA SCAM

ಮುಡಾ ಹಗರಣ ಸಂಬಂಧ ಮಾಜಿ ಆಯುಕ್ತರು ಮತ್ತು ಅಧಿಕಾರಿಗಳ ವಿರುದ್ಧ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಶಾಸಕ ಶ್ರೀವತ್ಸ
ಶಾಸಕ ಶ್ರೀವತ್ಸ (ETV Bharat)
author img

By ETV Bharat Karnataka Team

Published : Sep 1, 2024, 4:17 PM IST

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕೆಂದು ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶ್‌ ಕುಮಾರ್‌, ನಟೇಶ್‌ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿಯ ವಿರುದ್ಧ ತನಿಖೆ ನಡೆಸಬೇಕೆಂದು ಮೈಸೂರು ನಗರದ ಬಿಜೆಪಿ ಶಾಸಕ ಟಿ.ಎಸ್.‌ ಶ್ರೀವತ್ಸ ಅವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಮುಡಾದಲ್ಲಿ ನಡೆದ ಅಕ್ರಮಗಳಿಂದ ಸರ್ಕಾರಕ್ಕೆ 5 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂಬ ವರದಿಗಳು ಬರುತ್ತಿದ್ದು, ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ, ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಶಾಸಕರು ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಈಟಿವಿ ಭಾರತ ಜೊತೆ ದೂರವಾಣಿಯಲ್ಲಿ ಮಾಹಿತಿ ನೀಡಿದ ಶಾಸಕರು, ಮುಡಾದಲ್ಲಿ ನಡೆದಿರುವ ಆಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ, ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೇನೆ. ಮುಡಾದಲ್ಲಿ ನಡೆದ ಅಕ್ರಮದಲ್ಲಿ ಹಿಂದಿನ ಇಬ್ಬರು ಆಯುಕ್ತರಾದ ನಟೇಶ್‌ ಹಾಗೂ ದಿನೇಶ್‌ ಕುಮಾರ್‌ ಹಾಗೂ ಪ್ರಾಧಿಕಾರದ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಲೋಕಾಯುಕ್ತಕ್ಕೆ ತಿಳಿಸಿದ್ದೇನೆ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ಮಾಹಿತಿ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಕಾನೂನು ಬಾಹಿರವಾಗಿ ಮುಡಾದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು, ಪ್ರಕರಣದಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಹೈಕೋರ್ಟ್​ನಲ್ಲಿ ಮುಂದುವರಿಯಲಿದೆ. ಇದರಿಂದ ಹೈಕೋರ್ಟ್ ಆದೇಶದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಈ ಮೊದಲು ಸಿಎಂ ಸಿದ್ದರಾಮಯ್ಯ ದೂರಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Prosecution against Siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.