ETV Bharat / state

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ಸುರೇಶ್ ಬಾಬು ನೇಮಕ - LEADER OF JDS LEGISLATURE PARTY - LEADER OF JDS LEGISLATURE PARTY

ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ.

Monsoon Assembly Session
ವಿಧಾನಸಭೆ ಅಧಿವೇಶನ (ETV Bharat)
author img

By ETV Bharat Karnataka Team

Published : Jul 15, 2024, 4:46 PM IST

ಸ್ಪೀಕರ್ ಯು.ಟಿ.ಖಾದರ್ (ETV Bharat)

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್ ಬಾಬು ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಶಿಫಾರಸ್ಸು ಆಧರಿಸಿ ಜೆಡಿಎಸ್ ಪಕ್ಷದ ಶಾಸಕಾಂಗಪಕ್ಷದ ನಾಯಕರನ್ನಾಗಿ ಸುರೇಶ್ ಬಾಬು ಅವರನ್ನು ನೇಮಿಸಿರುವುದಾಗಿ ಸ್ಪೀಕರ್ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು.

ಕುರುಬ ಸಮುದಾಯಕ್ಕೆ ಸೇರಿರುವ ಸುರೇಶ್ ಬಾಬು ಅವರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ನಾಲ್ಕನೇ ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಿದ್ದರು. ಅಧಿಕೃತ ಬಿಜೆಪಿ ಪ್ರತಿಪಕ್ಷವಾಗಿದ್ದರೂ ಕೂಡ ಜೆಡಿಎಸ್ ಕುಮಾರಸ್ವಾಮಿಯವರ ಚರ್ಚೆಗಳು, ಹೇಳಿಕೆಗಳು ಹೆಚ್ಚು ಮಹತ್ವ ಪಡೆದುಕೊಂಡಿದ್ದವು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ರಾಜಕಾರಣ ನಡೆಯುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸುರೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ.

ಶಾಸಕ ನಾಗೇಂದ್ರ ಅವರನ್ನು ಇಡಿ ಬಂಧಿಸಿರುವ ಬಗ್ಗೆ ಸದನಕ್ಕೆ ಮಾಹಿತಿ: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವ ಮಾಹಿತಿಯನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಸದನಕ್ಕೆ ತಿಳಿಸಿದರು.

ಸಂತಾಪ ಸೂಚನೆ ನಂತರ ಅಧಿಕೃತ ಮಾಹಿತಿಯನ್ನು ಘೋಷಿಸಿದ ಯು.ಟಿ.ಖಾದರ್ ಅವರು ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಸಹಾಯಕ ಆಯುಕ್ತ ದಿಲೀಪ್ ಮೇಘವಾಲ ಅವರು, ನಾಗೇಂದ್ರ ಅವರನ್ನು ಜು.12 ರಂದು 10.50ಕ್ಕೆ ದಸ್ತಗಿರಿ ಮಾಡಲಾಗಿದ್ದು, ಇ.ಡಿ ವಶದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ: ವಿಧಾನಸೌಧಕ್ಕೆ ಬಿಜೆಪಿ ನಾಯಕರ ಪಾದಯಾತ್ರೆ - BJP Leaders Protest

ETV Bharat Logo

Copyright © 2024 Ushodaya Enterprises Pvt. Ltd., All Rights Reserved.