ETV Bharat / state

ರಾಜಕೀಯ ಪುನರ್​ಜನ್ಮ ಕೊಟ್ಟ ಗಂಗಾವತಿಗೆ ಮೊದಲು ಭೇಟಿ, ಅ.3ರಂದು ಬಳ್ಳಾರಿಗೆ ತೆರಳುವೆ: ಜನಾರ್ದನ ರೆಡ್ಡಿ - Gali Janardhan Reddy

author img

By ETV Bharat Karnataka Team

Published : 3 hours ago

ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ವಿಧಿಸಲಾಗಿದ್ದ ಬಳ್ಳಾರಿ ಜಿಲ್ಲೆಗೆ ಪ್ರವೇಶ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವು ಮಾಡಿದೆ. ಈ ಹಿನ್ನೆಲೆಯಲ್ಲಿ ರೆಡ್ಡಿಗೆ ತಮ್ಮ ಜಿಲ್ಲೆಗೆ ತೆರಳಲು ಇದ್ದ ತಡೆ ನಿವಾರಣೆಯಾಗಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

janardhan reddy
ಜನಾರ್ದನ ರೆಡ್ಡಿ (IANS)

ಬೆಂಗಳೂರು: ''ನವರಾತ್ರಿ ಅಕ್ಟೋಬರ್ 3ರಂದು ಆರಂಭವಾಗಲಿದೆ. ಇದೇ ಗುರುವಾರ ಬೆಳಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ'' ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ''14 ವರ್ಷಗಳ ನಂತರ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಬಳ್ಳಾರಿಯಲ್ಲಿ ವಿವಿಧ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತೇನೆ. ಕೊನೆಯ ಉಸಿರು ಇರುವವರೆಗೂ ಬಳ್ಳಾರಿಯಲ್ಲಿ ಇರುತ್ತೇನೆ'' ಎಂದು ಭಾವುಕರಾಗಿ ನುಡಿದರು.

ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ: ''ಜನ್ಮ ಸ್ಥಳ ಪ್ರತಿಯೊಬ್ಬನಿಗೂ ಮುಖ್ಯವಾಗುತ್ತದೆ. ಯಾವುದೇ ಊರಿಗಿಂತ ನಮ್ಮ ಹುಟ್ಟೂರು ನಮಗೆ ಮೇಲು ಎಂಬುದು ಹಿರಿಯರ ಮಾತು. ಮೊದಲು ಗಂಗಾವತಿಗೆ ತೆರಳಿ, ಹನುಮಂತನ ದರ್ಶನ ಪಡೆದು ರಾಜಕೀಯ ಪುನರ್​ಜನ್ಮ ನೀಡಿದ ಜನರ ಜೊತೆ ಮಾತನಾಡುವೆ'' ಎಂದು ತಿಳಿಸಿದರು.

''ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಮುಂದೆ ನಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ. ಅದರಂತೆ ನಡೆದುಕೊಳ್ಳುವೆ. ಕಷ್ಟಗಳು ಬಂದಾಗ, ಶ್ರೀಮನ್ನಾರಾಯಣ, ಶ್ರೀ ರಾಮಚಂದ್ರನನ್ನು ನಾವು ನೆನೆಸಿಕೊಳ್ಳುತ್ತೇವೆ. ಅವರಿಗೇ ಸಂಕಷ್ಟಗಳು ತಪ್ಪಿಲ್ಲ ಎಂದ ಮೇಲೆ ನಾವು ಯಾವ ಲೆಕ್ಕಕ್ಕೆ ಅಂದುಕೊಳ್ಳುತ್ತೇವೆ'' ಎಂದು ವಿಶ್ಲೇಷಿಸಿದರು.

''ಬಳ್ಳಾರಿಗೆ ಅನೇಕ ಒಳ್ಳೆಯ ಕೆಲಸ ಮಾಡಿದ್ದು, ಅದು ಜನರಿಗೂ ಗೊತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ದೊಡ್ಡ ಪ್ರಮಾಣದ ಅಭಿವೃದ್ಧಿ ಕೆಲಸಗಳು ಆಗಿದ್ದವು. ಬಳ್ಳಾರಿಯ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಕನಸುಗಳಿವೆ. ಮುಂದಿನ ದಿನಗಳಲ್ಲಿ ಬಳ್ಳಾರಿ ಜನರ ಕನಸುಗಳನ್ನು ಈಡೇರಿಸಲು ಶ್ರಮಿಸುವೆ'' ಎಂದು ತಿಳಿಸಿದರು.

ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶಿಸಲು ಕೊನೆಗೂ ಸುಪ್ರೀಂ ಕೋರ್ಟ್ ಅನುಮತಿ - Janardhana Reddy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.