ETV Bharat / state

ನಮ್ಮ ತಂದೆಗೆ ವಯಸ್ಸಾಗಿದೆ, ಅವರು ಪ್ರಸ್ತುತ ರಾಜಕಾರಣದಲ್ಲಿಲ್ಲ; ಶಾಸಕ ಪ್ರಕಾಶ್ ಕೋಳಿವಾಡ

ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿಕೆಗೆ ಸಿಎಂ ತೀವ್ರ ಅಸಮಾಧಾನಗೊಂಡಿರುವ ಹಿನ್ನೆಲೆ ತಂದೆಯ ಪರವಾಗಿ ಪುತ್ರ ಪ್ರಕಾಶ್ ಕೋಳಿವಾಡ ಅವರು ಸಿದ್ದರಾಮಯ್ಯ ಅವರಲ್ಲಿ ಕ್ಷಮೆ ಕೋರಿದ್ದಾರೆ.

author img

By ETV Bharat Karnataka Team

Published : 3 hours ago

PRAKASH KOLIWADA APOLOGIZED
(ಎಡದಿಂದ) ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹಾಗೂ ಪುತ್ರ ರಕಾಶ್ ಕೋಳಿವಾಡ (ETV Bharat)

ಬೆಂಗಳೂರು : ನಮ್ಮ ತಂದೆಗೆ ವಯಸ್ಸಾಗಿದೆ. ಅವರು ಪ್ರಸ್ತುತ ರಾಜಕಾರಣದಲ್ಲಿಲ್ಲ. ಅವರು ಯಾವುದೇ ರೀತಿಯ ಹೇಳಿಕೆ ನೀಡಬಾರದೆಂದು ನಾನು‌ ಅವರಿಗೆ ಮನವಿ ಮಾಡುವೆ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೇಳಿಕೆಗೆ ಅವರ ಪುತ್ರ, ಶಾಸಕ ಪ್ರಕಾಶ್ ಕೋಳಿವಾಡ ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ರಾಜಕಾರಣಕ್ಕೆ ಬರಲು ಸಿಎಂ ಸಿದ್ದರಾಮಯ್ಯನವವರೇ ಕಾರಣ. ನಾನು ಸಿದ್ದರಾಮಯ್ಯ ಬೆಂಬಲಿಗ. ನಾನು ಬುದ್ಧ ಬಸವ ಅಂಬೇಡ್ಕರ್ ವಾದಿ ಎನ್ನುವ ಮೂಲಕ ತಂದೆಯ ಹೇಳಿಕೆಗೆ ಭಿನ್ನವಾದ ಹೇಳಿಕೆ ನೀಡಿದ್ದಾರೆ.

ನಮ್ಮ ತಂದೆಗೆ ನಾಲ್ಕು ಆಪರೇಷನ್ ಆಗಿವೆ. ಹಾಗಾಗಿ ಇದರ ಬಗ್ಗೆ ಮಾತನಾಡುವುದು ಬೇಡ. ನಾನು ಅವರಿಗೆ ಹೇಳುವಷ್ಟು ದೊಡ್ಡವನೂ ಅಲ್ಲ. ಆದರೆ, ಇಂತಹ ಹೇಳಿಕೆಗಳನ್ನು ಕೊಡಬೇಡಿ ಎಂದು ನಾನು ಅವರಿಗೆ ಮನವಿ ಮಾಡ್ತೇನೆ ಎಂದರು.

ಮೊದಲಿನಿಂದಲೂ ನಾನು ನಿಮ್ಮ ಅನುಯಾಯಿ. ನಿಮ್ಮ ಕಾರಣದಿಂದಲೇ ರಾಜಕಾರಣಕ್ಕೆ ಬರಲು ಸಾಧ್ಯವಾಗಿದೆ. ನಮ್ಮ ತಂದೆಯವರು ನಿಮ್ಮ ಬಗ್ಗೆ ಹೇಳಿಕೆ ನೀಡಿದ್ದು ನನಗೂ ಬೇಸರವಾಯಿತು. ಹಾಗಾಗಿ ಇದರ ಬಗ್ಗೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:

ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕಾಂಗ್ರೆಸ್ ಹಿರಿಯ ಮುಖಂಡ ಕೋಳಿವಾಡ

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಕೆ.ಬಿ.ಕೋಳಿವಾಡ - Muda Scam

ಮುಡಾ ಪ್ರಕರಣ ನೋಡಿ ಇವತ್ತು ಹರಿಯಾಣ ಚುನಾವಣೆಯಲ್ಲಿ ಎಫೆಕ್ಟ್ ಮಾಡಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಬಿ.ಕೋಳಿವಾಡ ಕಿಡಿ ಕಾರಿದ್ದರು. ಅದಕ್ಕೂ ಮುನ್ನ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.