ETV Bharat / state

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲಾಗುತ್ತಿಲ್ಲ, ತಕ್ಷಣ ಕೆಳಗಿಳಿಸಬೇಕು: ರಮೇಶ್​ ಜಾರಕಿಹೊಳಿ - RAMESH JARKIHOLI

ವಿಜಯೇಂದ್ರ ಅವರದ್ದು ಜೀನ್ಸ್ ಪ್ಯಾಂಟ್-ಟೀ ಶರ್ಟ್ ಹಾಕಿಕೊಂಡು ಓಡಾಡುವ ವಯಸ್ಸು ಎಂದು ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಟೀಕಿಸಿದ್ದಾರೆ.

ರಮೇಶ್​ ಜಾರಕಿಹೊಳಿ
ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ (ETV Bharat)
author img

By ETV Bharat Karnataka Team

Published : Dec 2, 2024, 3:56 PM IST

ಬೆಳಗಾವಿ: "ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ. ಅಧ್ಯಕ್ಷ ಸ್ಥಾನದಿಂದ ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕು" ಎಂದು ಶಾಸಕ ರಮೇಶ್​ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಯಡಿಯೂರಪ್ಪ ಹುಟ್ಟು ಹೋರಾಟಗಾರ. ಆದರೆ ವಿಜಯೇಂದ್ರ ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ಸಮನಲ್ಲ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿಕೊಂಡು ಓಡಾಡುವ ವಯಸ್ಸು ಅವರದ್ದು. ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು" ಎಂದು ವಾಗ್ದಾಳಿ ನಡೆಸಿದರು.

ರಮೇಶ್​ ಜಾರಕಿಹೊಳಿ (ETV Bharat)

ಸಮರ್ಥರಿಗೆ ಅಧ್ಯಕ್ಷ ಸ್ಥಾನ ಕೊಡಿ: "ಬಸನಗೌಡ ಪಾಟೀಲ ಯತ್ನಾಳ್​ ಅಥವಾ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ. ಒಂದೇ ಸಮುದಾಯಕ್ಕೆ ಸೀಮಿತವಾದವರಿಗೆ ಅಧ್ಯಕ್ಷ ನಮಗೆ ಬೇಡ. ಎಲ್ಲರನ್ನೂ ಸಮಾನವಾಗಿ ಕಾಣಲು ಸಮರ್ಥರಿದ್ದವರಿಗೆ ಮಾತ್ರ ಅಧ್ಯಕ್ಷ ಸ್ಥಾನ ಕೊಡಿ" ಎಂದ ಅವರು, ಯತ್ನಾಳ್​ಗೆ ಬಿಜೆಪಿ ಕೇಂದ್ರ ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರದ ಕುರಿತು ಮಾತನಾಡಿ, "ಯತ್ನಾಳ್​ಗೆ ಶೋಕಾಸ್ ನೋಟಿಸ್ ಇಂದು ಬಂದಿದ್ದಲ್ಲ. ಎರಡು ದಿನಗಳ ಹಿಂದೆಯೇ ಬಂದಿದೆ. ಆದರೆ, ಮಾಧ್ಯಮಗಳಲ್ಲಿ ಇಂದು ತೋರಿಸುತ್ತಿದ್ದಾರೆ. ನಾವು ಯತ್ನಾಳ್​ ಬೆನ್ನಿಗೆ ನಿಲ್ಲುತ್ತೇವೆ. ಕೇಂದ್ರ ‌ನಾಯಕರ ಮನವೊಲಿಸುತ್ತೇವೆ" ಎಂದು ತಿಳಿಸಿದರು.

ಬಿವೈವಿ ಜೊತೆ ಲಿಂಗಾಯತ, ಒಕ್ಕಲಿಗರು ಇಲ್ಲ: "ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರಿಗೆ ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ‌ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ‌ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಆದರೆ, ಆಂತರಿಕ ಸಭೆ ಮಾಡಿ ಕೇಳಲಿ, ಆಗ ನನ್ನ ಅಭಿಪ್ರಾಯ ತಿಳಿಸುತ್ತೇನೆ" ಎಂದರು.

"ದೆಹಲಿಯಲ್ಲಿ ನಾವು ಬಿಜೆಪಿ ನಾಯಕರನ್ನು ಭೇಟಿ ಆಗುವುದಿಲ್ಲ. ಅದೇ ರೀತಿ ದೂರು ಕೊಡಲು ಹೋಗುತ್ತಿಲ್ಲ. ವಕ್ಫ್ ಬೋರ್ಡ್ ವಿರುದ್ಧ ಜೆಪಿಎಸ್ ಕಮಿಟಿಗೆ ವರದಿ ಸಲ್ಲಿಸಲು ಹೋಗುತ್ತಿದ್ದೇವೆ. ಬಿಜೆಪಿ ಹೈಕಮಾಂಡ್ ಭೇಟಿ ಆಗಲ್ಲ" ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪಕ್ಷದ ಚೌಕಟ್ಟಿನಲ್ಲಿ ಇರಬೇಕು, ಒಗ್ಗಟ್ಟು ಶಿಸ್ತು ಕಾಪಾಡಿಕೊಳ್ಳುವುದು ಎಲ್ಲರಿಗೂ ಅನ್ವಯ: ಡಾ.ಸಿ.ಎನ್.ಅಶ್ವತ್ಥನಾರಾಯಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.