ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಆಡಿಯೋ ವೈರಲ್ ಮಾಡುವ ಮೂಲಕ ತಮ್ಮ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿರುವುದಾಗಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಶಾಸಕರ ದೂರಿನ ಅನ್ವಯ ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವಂತೆ ತಾವು ಹೇಳಿರುವಂತೆ ನಕಲಿ ಆಡಿಯೋವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಆರೋಪಿಸಿರುವ ಶಾಸಕರು, ತಮ್ಮ ಧ್ವನಿಯನ್ನು ನಕಲಿ ಮಾಡಿ ಬಿತ್ತರಿಸುತ್ತಿರುವುದರಿಂದ ಘನತೆಗೆ ಧಕ್ಕೆಯುಂಟಾಗುತ್ತಿದೆ. ಆದ್ದರಿಂದ ನಕಲಿ ಆಡಿಯೋ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಶಿವಲಿಂಗೇಗೌಡ ಅವರು, ಅರಸೀಕೆರೆ ಕ್ಷೇತ್ರದಿಂದ ಮತ್ತೊಮ್ಮೆ ಶಾಸಕರಾಗಿ ಚುನಾಯಿತರಾಗಿದ್ದಾರೆ. ಸದ್ಯ, ರಾಜ್ಯ ಗೃಹಮಂಡಳಿ ಅಧ್ಯಕ್ಷರಾಗಿದ್ದಾರೆ.
ಇದನ್ನೂ ಓದಿ: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ