ETV Bharat / state

ಪರಶುರಾಮ ಥೀಮ್ ಪಾರ್ಕ್ ಯೋಜನೆಗೆ ಬಿಡುಗಡೆಯಾಗಿದ್ದೇ 6 ಕೋಟಿ: ಸಿಎಂಗೆ ಸುನಿಲ್ ಕುಮಾರ್ ಟಾಂಗ್​ - V Sunil kumar - V SUNIL KUMAR

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್​ನಲ್ಲಿ 11 ಕೋಟಿ ಹಗರಣ ಆಗಿದೆ ಎಂದು ಸಿಎಂ ಅವರ ಸದನದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ತಾಕತ್​ ಇದ್ದರೆ ನ್ಯಾಯ ಸಮ್ಮತವಾದ ತನಿಖೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಸಿಎಂ ವಿರುದ್ದ ಸುನಿಲ್ ಕುಮಾರ್ ವಾಗ್ದಾಳಿ
ಸಿಎಂ ವಿರುದ್ದ ಸುನಿಲ್ ಕುಮಾರ್ ವಾಗ್ದಾಳಿ (ETV Bharat)
author img

By ETV Bharat Karnataka Team

Published : Jul 21, 2024, 7:36 PM IST

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಯೋಜನೆಗೆ ಇದುವರೆಗು ಬಿಡುಗಡೆಯಾಗಿದ್ದು 11 ಕೋಟಿ ಅಲ್ಲ ಬರೀ 6 ಕೋಟಿ ರೂ. ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಹರಿಹಾಯ್ದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, 'ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್​ನಲ್ಲಿ 11 ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭಾ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6 ಕೋಟಿ ರೂ. ಎಂದು ಬರೆದುಕೊಂಡಿದ್ದಾರೆ.

'ಪರಶುರಾಮ ಥೀಮ್ ಪಾರ್ಕ್​ನಲ್ಲಿ ಅವ್ಯವಹಾರ ನಡೆದಿದೆ ಎಂದು ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ನಾಯಕರು ಸುಳ್ಳು ನರೇಟಿವ್ ಕಟ್ಟುತ್ತಲೇ ಇದ್ದಾರೆ. ಇವರಿಗೆ ಸತ್ಯ ಬಹಿರಂಗವಾಗುವುದು ಬೇಕಿಲ್ಲ, ಪ್ರವಾಸೋದ್ಯಮ ಅಭಿವೃದ್ಧಿಯಾಗುವುದು ಬೇಕಿಲ್ಲ. ನಿರಂತರ ಆರೋಪ ನಡೆಸಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಮಾತ್ರ ಅವರ ಉದ್ದೇಶ' ಎಂದು ಹರಿಹಾಯ್ದಿದ್ದಾರೆ.

'ಪ್ರತಿ ಬಾರಿಯೂ ಅಧಿವೇಶನ ಸಂದರ್ಭದಲ್ಲಿ ಥೀಮ್ ಪಾರ್ಕ್ ಬಗ್ಗೆ ಅಪಪ್ರಚಾರ ನಡೆಸುವುದು ಈ ಸರ್ಕಾರಕ್ಕೆ ಹಾಗೂ ಕಾರ್ಕಳ ಕಾಂಗ್ರೆಸ್ ಮುಖಂಡರಿಗೆ ಚಟವಾಗಿಬಿಟ್ಟಿದೆ. ಕಳೆದ ಅಧಿವೇಶನದ ಸಮಯದಲ್ಲಿ ತನಿಖೆ ನಡೆಸುತ್ತೇವೆ ಎಂದರು. ಸಿಐಡಿ ತನಿಖೆಗೂ ಸೂಚಿಸಿದರು, ಆದರೆ ಇದುವರೆಗೆ ತನಿಖೆ ಪ್ರಗತಿಯಾಗಿಲ್ಲ. ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಚುನಾವಣೆ ನೀತಿ ಸಂಹಿತೆಯ ನೆಪ ಹೇಳಿ ತಪ್ಪಿಸಿಕೊಂಡರು'.

'ಈಗ ಮುಡಾದಲ್ಲಿ ಭೂಮಿ ನುಂಗಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಹೈಕಮಾಂಡ್ ಭಂಡಾರ ತುಂಬಿ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಮತ್ತೆ ಪರಶುರಾಮ ಥೀಮ್ ಪಾರ್ಕ್ ನೆನಪಾಗಿದೆ. ನಿಮ್ಮನ್ನೆಲ್ಲ ಬಲಿ ಹಾಕುತ್ತೇನೆ ಎಂದು ಸದನದಲ್ಲಿ ತೊಡೆ ತಟ್ಟಿದಷ್ಟೇ ದಮ್ಮು- ತಾಕತ್ತು ನಿಜಕ್ಕೂ ಇದ್ದರೆ ಮೊದಲು ನ್ಯಾಯಸಮ್ಮತ ತನಿಖೆ ನಡೆಸಿ. ಬೇಕಾದರೆ ಸಿಬಿಐ ತನಿಖೆಗೂ ಆದೇಶಿಸಿ, ಎಸ್ಐಟಿ ರಚನೆ ಮಾಡಿದರೂ ನೋ ಪ್ರಾಬ್ಲಮ್!. ಅದನ್ನು ಬಿಟ್ಟು ಅಪಪ್ರಚಾರದ ತುತ್ತೂರಿ ಊದುತ್ತಾ ಹೋದರೆ ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ಧರಾಗಿ' ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಎಂ ಬ್ಲಾಕ್​ಮೇಲ್ ತಂತ್ರದ ಮೊರೆ ಹೋಗಿರುವುದು ಆಶ್ಚರ್ಯ, ಹಾಸ್ಯಾಸ್ಪದ: ಶಾಸಕ ಸುನೀಲ್ ಕುಮಾರ್ - Sunil Kumar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.