ETV Bharat / state

ರಾಜ್ಯದಲ್ಲಿನ 50 ಗ್ರಾಪಂ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೆ: ಸಚಿವ ಭೈರತಿ ಸುರೇಶ್ - GOKARNA GRAM PANCHAYAT

ಆದ್ಯತೆ ಮೇರೆಗೆ ಗೋಕರ್ಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸುವಂತೆ ಪೌರಾಡಳಿತ ಸಚಿವರಿಗೆ ಶಾಸಕರು ಮನವಿ ಮಾಡಿದರು.

MLAs Request for upgradation of Gokarna Gram Panchayat to Town Panchayat in Belgaum Assembly
ಭೈರತಿ ಸುರೇಶ್​ (ETV Bharat)
author img

By ETV Bharat Karnataka Team

Published : Dec 13, 2024, 2:00 PM IST

ಬೆಂಗಳೂರು/ ಬೆಳಗಾವಿ : ರಾಜ್ಯದಲ್ಲಿ 50 ಗ್ರಾಮ ಪಂಚಾಯ್ತಿ ಹಾಗೂ ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ (ಭೈರತಿ) ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದಿನಕರ್ ಕೇಶವ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಮದ್ಯಪ್ರವೇಶಿಸಿದ ಸಚಿವ ಸುರೇಶ್, 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಲು ರಾಜ್ಯಾದ್ಯಂತ ಒಂದೇ ಮಾನದಂಡವಿದೆ. 2011ರ ಜನಗಣತಿಯ ಪ್ರಕಾರ 13539 ಜನಸಂಖ್ಯೆ ಇದೆ. 2015, ಮಾರ್ಚ್ 19ರ ಸಚಿವ ಸಂಪುಟದಲ್ಲಿ, 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಅರ್ಹ ಗ್ರಾಮಪಂಚಾಯ್ತಿಗಳನ್ನು ಮಾತ್ರ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ವಿವರ ನೀಡಿದರು

ಗೋಕರ್ಣ ಪಂಚಾಯ್ತಿ ಮೇಲ್ಡರ್ಜೆಗೆ ಏರಿಸಲು ಮನವಿ: ಗೋಕರ್ಣ ಪಂಚಾಯ್ತಿ ಮೇಲ್ದರ್ಜೆಗೆ ಏರಿಸುವ ಕುರಿತು ಮಾತನಾಡಿದ ಅವರು, ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದು ನಿಜ. ಗೋಕರ್ಣದ ಬಗ್ಗೆ ನಮಗೂ ವಿಶೇಷವಾದ ಪ್ರೀತಿ ಇದೆ. ಗೋಕರ್ಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೊದಲ ಆದ್ಯತೆಯಲ್ಲೇ ಮೇಲ್ದರ್ಜೆಗೇರಿಸಲು ಗಮನ ನೀಡುತ್ತೇವೆ. ಆದರೆ, ಅದು ಮಾನದಂಡ ಪೂರೈಸುತ್ತಿಲ್ಲ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಜಯೇಂದ್ರ, ಜನಗಣತಿ ಮಾನದಂಡ ಎಂದು ಪರಿಗಣಿಸಿದರೆ ಗೋಕರ್ಣವನ್ನು ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ. ಲಕ್ಷಾಂತರ ಜನರು ಇಲ್ಲಿಗೆ ಬರುತ್ತಾರೆ. ಆದ್ಯತೆ ಮೇಲೆ ಪರಿಗಣಿಸಿ ಎಂದು ತಿಳಿಸಿದರು. ಬಿಜೆಪಿ ಶಾಸಕ ಸುನೀಲ್‍ ಕುಮಾರ್ ಮಾತನಾಡಿ, ಪ್ರವಾಸಿಗರು ಹೆಚ್ಚು ಆಗಮಿಸುವ ಪ್ರವಾಸಿ ತಾಣಗಳನ್ನು ಮೇಲ್ದರ್ಜೆಗೇರಿಸಲು ಮೊದಲ ಆದ್ಯತೆ ನೀಡಿ ಪರಿಗಣಿಸಿದರೆ ಸರ್ಕಾರಕ್ಕೂ ಗೌರವ ಬರುತ್ತದೆ ಎಂಬ ಮಾತಿಗೆ ಬಿಜೆಪಿ ಶಾಸಕರಾದ ಪ್ರಭು ಚವ್ಹಾಣ್, ಭೈರತಿ ಬಸವರಾಜ್ ಮೊದಲಾದವರು ಧ್ವನಿಗೂಡಿಸಿದರು.

ದಿನಕರ್ ಶೆಟ್ಟಿ ಮಾತನಾಡಿ, ಆರ್ಥಿಕ ಸಂಪನ್ಮೂಲ ಲಭ್ಯತೆ ಆಧರಿಸಿ ಮಾಡುತ್ತೇವೆ ಎಂದು ಹೇಳಿದ ಮೇಲೆ ಸರ್ಕಾರದಲ್ಲಿ ಹಣದ ಸಮಸ್ಯೆ ಇದೆ ಎಂಬುದನ್ನು ಒಪ್ಪಿಕೊಂಡಂತಾಯಿತಲ್ಲವೇ ಎಂದು ಸಚಿವ ಸುರೇಶ್ ಅವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, 2011 ಜನಸಂಖ್ಯೆ ಆಧರಿಸುವ ಮಾನದಂಡ ಸರಿಯಲ್ಲ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನಸಂಖ್ಯೆ 10 ಪಟ್ಟು ಹೆಚ್ಚಾಗಿದೆ. ಇದನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಎಂದು ಹೇಳಿದರು.

ಇದನ್ನೂ ಓದಿ: ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ನೆರವು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.