ETV Bharat / state

ಬಿಜೆಪಿ, ಸಂಘ ಪರಿವಾರದವರು ವ್ಯಸನಿಗಳು, ವಿಕೃತ ಮನಸ್ಸಿನವರು: ಬಿ.ಕೆ. ಹರಿಪ್ರಸಾದ್ - MLC HARIPRASAD

ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇನ್ನು ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಸೋಮವಾರದಿಂದ ರಾಜ್ಯಾದ್ಯಂತ ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (ETV Bharat)
author img

By ETV Bharat Karnataka Team

Published : 4 hours ago

ಬೆಂಗಳೂರು: ಬಿಜೆಪಿ, ಸಂಘ ಪರಿವಾರದವರು ವ್ಯಸನಿಗಳು, ವಿಕೃತ ಮನಸ್ಸಿನವರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗಾಧೀಜಿಯಿಂದ ಹಿಡಿದು ರಾಹುಲ್ ಗಾಂಧಿವರೆಗೆ ಬಿಜೆಪಿಯವರು ಸಂಘ ಪರಿವಾರದವರು ಅಪಪ್ರಚಾರ ಮಾಡಿಕೊಂಡು ಬರ್ತಾರೆ. ಅಮಿತ್ ಶಾ ಲೆಕ್ಕಾಚಾರ ಹಾಕಿಯೇ ಅಂಬೇಡ್ಕರ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅವರಿಗೆ ಬಡವರು, ಹಿಂದುಳಿದವರು, ದಲಿತರು ಸೇರಿ ಕೆಳಹಂತದ ಜನ ಬೇಕಾಗಿಲ್ಲ. ತಮ್ಮ ಅಡಿಯಾಳಾಗಿಯೇ ನೋಡುವ ಹುನ್ನಾರ ಇದು ಎಂದು ಆರೋಪಿಸಿದರು.

ಇದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ. ಬಿಜೆಪಿಯನ್ನು ಬೇರೆ ಅರ್ಥದ ಪಾರ್ಟಿ ಮಾಡೋದಕ್ಕೆ ಇವರು ಹೊರಟಿದ್ದಾರೆ. ರಾಹುಲ್ ಗಾಂಧಿ ಇವರು ಹೇಳಿದ ತರ ಅಡಿಕ್ಟ್ ಆಗಿದ್ದರೆ 10 ಸಾವಿರ ಕಿಲೋ ಮೀಟರ್ ನಡೆಯೋದಕ್ಕೆ ಆಗುತ್ತಿರಲಿಲ್ಲ. ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅಪಪ್ರಚಾರ ಮಾಡಿದ್ದಾರೆ. ಈಗ ಅಂಬೇಡ್ಕರ್ ಬಗ್ಗೆಯೂ ಅಪಪ್ರಚಾರ. ಇದು ಉದ್ದೇಶಪೂರ್ವಕವಾಗಿ ಲೆಕ್ಕಾಚಾರ ಹಾಕಿಕೊಂಡೇ ಹೇಳಿದ ಮಾತು ಎಂದು ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (ETV Bharat)

ಇವರಿಗೆ ದಲಿತರು, ಕೆಳವರ್ಗದವರು, ಶೂದ್ರರು ಯಾರೂ ಬೇಕಾಗಿಲ್ಲ. ಅವರಿಗೆ ಕೆಳವರ್ಗದ ಉದ್ಧಾರ ಮಾಡುವುದು ಬೇಕಾಗಿಯೂ ಇಲ್ಲ. ಸುಮ್ಮನೆ ಅಮಿತ್ ಶಾ ಈ ಮಾತು ಹೇಳಿದ್ದಾರೆ ಅಂದುಕೊಳ್ಳಬೇಡಿ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡನೀಯ. ಅವರ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆಯಿಂದ ಪ್ರತಿಭಟನೆ ಮಾಡಲಾಗುವುದು. ಅಮಿತ್ ಶಾ ಹೇಳಿಕೆ ಬಗ್ಗೆ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೆ. ಆದರೆ ಬಿಜೆಪಿಯವರ ಗದ್ದಲದಿಂದ ಅದು ಸಾಧ್ಯವಾಗಿಲ್ಲ ಎಂದರು.‌

ಲೋಕಸಭೆ ಸ್ಪೀಕರ್, ರಾಜ್ಯಸಭೆ ಅಧ್ಯಕ್ಷರಿಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಪತ್ರ ಬರೆದು ಸಂವಿಧಾನವನ್ನ ಚರ್ಚೆ ಮಾಡಬೇಕೆಂದು ಮನವಿ ಮಾಡಿದ್ರು. ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನತೆ ಹಕ್ಕು, ದೀನದಲಿತರ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ಮಾಡೋದಕ್ಕೆ ಅವಕಾಶ ಇತ್ತು. ರಕ್ಷಣೆ ಅವಕಾಶಗಳನ್ನು ಕೊಟ್ಟಿರುವ ಸಂವಿಧಾನದ ಬಗ್ಗೆ ಚರ್ಚೆ ಮಾಡುವ ಬದಲು ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಪಮಾನ ಮಾಡಿದ್ದಾರೆ ಎಂದು ದೂರಿದರು.

ಅಂಬೇಡ್ಕರ್ ಅನ್ನುವ ಹೆಸರು ಬದಲು ದೇವರ ಹೆಸರು ಹೇಳಿದ್ರೆ ಸ್ವರ್ಗದಲ್ಲಿ ಜಾಗ ಸಿಗ್ತಿತ್ತು ಅಂತಾ ಅಮಿತ್ ಶಾ ಹೇಳಿದ್ದಾರೆ. ಇದಕ್ಕಾಗಿ ದೇಶದ ಜನರ ಕ್ಷಮೆ ಕೇಳಬೇಕು. ಸಾವರ್ಕರ್, ಗೋವಲ್ಕರ್ ಅವರು ರಾಷ್ಟ್ರಧ್ವಜ, ಸಂವಿಧಾನವನ್ನ ಒಪ್ಪಿರಲಿಲ್ಲ. ಇವರ ಕಚೇರಿಗಳಲ್ಲಿ 52 ವರ್ಷಗಳ ಕಾಲ ರಾಷ್ಟ್ರಧ್ವಜ ಹಾರಿಸಿರಲಿಲ್ಲ. ಇದು ಇವರ ಹಿಡನ್ ಅಜೆಂಡಾವಾಗಿದೆ. ಆರ್​ಎಸ್​​ಎಸ್​​ಗೆ 100 ವರ್ಷ ತುಂಬ್ತಿದೆ, ಹಾಗಾಗಿ ಹೀಗೆಲ್ಲಾ ಮಾಡ್ತಿದ್ದಾರೆ. ಜಾತಿ ಜನಗಣತಿಗೆ ಪ್ರಧಾನಿ ಮೋದಿ ವಿರೋಧ ಮಾಡ್ತಿದ್ದಾರೆ. ಜಾತಿ ವ್ಯವಸ್ಥೆಯಲ್ಲಿ ಆರ್​ಎಸ್​ಎಸ್​ ನಂಬಿಕೆ ಇಟ್ಟಿದೆ ಎಂದರು.

ಸಿ.ಟಿ.ರವಿ ಅವರನ್ನು ಎನ್​​ಕೌಂಟರ್ ಮಾಡ್ತಿದ್ರು ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಲ್ಹಾದ್ ಜೋಶಿ ಅವರು ಅಮಿತ್ ಶಾ ಸಂತತಿಯವರು. ಫೇಕ್ ಎನ್​​ಕೌಂಟರ್​​ನಲ್ಲಿ ಅಮಿತ್ ಶಾ ಅವರನ್ನ ಗಡಿಪಾರು ಮಾಡಿದ್ರು. ಅವರು ಮಾಡಿದ್ದನ್ನ ಜೋಶಿ ಹೇಳಿದ್ದಾರೆ ಎಂದು ಲೇವಡಿ ಮಾಡಿದರು.

ಸಿ. ಟಿ. ರವಿ ಪದ ಬಳಕೆ ಬಗ್ಗೆ ಯಾವುದೇ ದಾಖಲಾತಿಗಳು ಇಲ್ಲ ಎಂಬ ಸಭಾಪತಿ ಹೇಳಿಕೆ ವಿಚಾರ‌‌ವಾಗಿ ಪ್ರತಿಕ್ರಿಯಿಸುತ್ತಾ, ಈ ರೀತಿ ಆಗಬಾರದಿತ್ತು. ಮೇಲ್ಮನೆಯಲ್ಲಿ ಇಂತಹ ಘಟನೆ ಮರುಕಳಿಸಬಾರದು. ಸಭಾಪತಿಗಳ ಹೇಳಿಕೆಗೆ ನಾವು ಏನು ಹೇಳುವುದಕ್ಕೆ ಆಗುವುದಿಲ್ಲ. ಸಭಾಪತಿಗಳು ಸಾಂವಿಧಾನಿಕ ಸ್ಥಾನದಲ್ಲಿದ್ದಾರೆ ಎಂದರು.

ಇದನ್ನೂ ಓದಿ: ನನ್ನ ತಾಯಿಗಲ್ಲ, ಇಡೀ ಮಹಿಳಾ ಕುಲಕ್ಕೆ ಸಿ ಟಿ ರವಿ ಅಪಮಾನ ಮಾಡಿದ್ದಾರೆ : ಮೃಣಾಲ್ ಹೆಬ್ಬಾಳ್ಕರ್

ಇದನ್ನೂ ಓದಿ: ತನ್ನ ಬಂಧನ, ಪೊಲೀಸರ ದೂರವಾಣಿ ಕರೆಗಳ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು: ಸಿ.ಟಿ. ರವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.