ETV Bharat / state

ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ - MLC BYELECTION

ವಿಧಾನ ಪರಿಷತ್​ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ವಿಧಾನ ಪರಿಷತ್ ಉಪಚುನಾವಣೆ : ಮತ ಎಣಿಕೆ ಆರಂಭ
ವಿಧಾನ ಪರಿಷತ್ ಉಪಚುನಾವಣೆ : ಮತ ಎಣಿಕೆ ಆರಂಭ (ETV Bharat)
author img

By ETV Bharat Karnataka Team

Published : Oct 24, 2024, 9:51 AM IST

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್​ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು 'ಡಿ' ಗ್ರೂಪ್ ಸಿಬ್ಬಂದಿ ಇದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್​ಗೆ 33 ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ.

ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುತ್ತದೆ. ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ: ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.