ETV Bharat / state

ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು: ಸಿ ಪಿ ಯೋಗೇಶ್ವರ್​ - C P Yogeshwar - C P YOGESHWAR

ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಒತ್ತಡವಿದೆ. ಅದಕ್ಕಾಗಿ ಪಕ್ಷಾಂತರ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಟಿಕೆಟ್​ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್​ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದ್ದಾರೆ.

MLC C P Yogeshwar
ವಿಧಾನ ಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್​ (ETV Bharat)
author img

By ETV Bharat Karnataka Team

Published : Sep 29, 2024, 5:17 PM IST

Updated : Sep 29, 2024, 5:24 PM IST

ಮಂಡ್ಯ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಪಕ್ಷದ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್ ಪಕ್ಷ ಸೇರುತ್ತಿರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ವಿಧಾನ ಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದರು. "ಆ ಬಗ್ಗೆ ನಾನು ಯೋಚನೆ ಮಾಡಿಲ್ಲ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು" ಎಂದು ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ರವಾನಿಸಿದರು.

"ಕಾಂಗ್ರೆಸ್​ನಿಂದ ಯಾರೂ ನನ್ನನ್ನು ಭೇಟಿ ಮಾಡಿಲ್ಲ. ಸ್ಪರ್ಧೆ ಮಾಡುವಂತೆ ಒತ್ತಡವಿದೆ. ಮುಂದೆ ನೋಡ್ತಿನಿ. ರಾಜಕಾರಣದಲ್ಲಿ ನಾವು-ನೀವು ಯಾರೂ ಊಹೆ ಮಾಡದ ಘಟನೆಗಳು ನಡೆಯುತ್ತಿವೆ. ಪಕ್ಷಾಂತರ ಮಾಡುವ ಯಾವುದೇ ಆಲೋಚನೆ ಇಲ್ಲ" ಎಂದರು.

ವಿಧಾನ ಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್​ (ETV Bharat)

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, "ಕಾನೂನು ಪ್ರಕ್ರಿಯೆ ಪ್ರಾರಂಭವಾಗಿದೆ. ಕಾನೂನು ಹೋರಾಟ ಮಾಡ್ತಿದ್ದಾರೆ. ನನಗೆ ಸ್ಪಷ್ಟ ಚಿತ್ರಣ ಇಲ್ಲ. ಮುಖ್ಯಮಂತ್ರಿಗಳು ಬಹಳ ಸೂಕ್ಷ್ಮಮತಿಯಿಂದ ಇದ್ದಾರೆ, ನೋಡೋಣ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಕೇಂದ್ರ ಸಚಿವರ ಮೇಲೆ FIR ವಿಚಾರ ಇದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ನೋಡಿಲ್ಲ" ಎಂದು ತಿಳಿಸಿದರು.

ಚನ್ನಪಟ್ಟಣ ಚುನಾವಣಾ ಸ್ಪರ್ಧೆ ವಿಚಾರದ ಕುರಿತು ಮಾತನಾಡಿ, "ಚುನಾವಣೆ ದಿನಾಂಕ ಮುಂದಿನ ತಿಂಗಳು 10 ರಂದು ಘೋಷಣೆಯಾಗುವ ಸಾಧ್ಯತೆಯಿದೆ. ಬಿಜೆಪಿ-ಜೆಡಿಎಸ್ ರಾಷ್ಟ್ರಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ನಮ್ಮ ವರಿಷ್ಠರ ತೀರ್ಮಾನ ಕಾದು ನೋಡೋಣ. ಚುನಾವಣೆ ಸ್ಪರ್ಧೆಗೆ ಜನರ ಒತ್ತಾಯ ಇದೆ. ನಾನು ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಮಾತನ್ನು ಕೇಳಬೇಕು" ಎಂದರು.

ಚನ್ನಪಟ್ಟಣಕ್ಕೆ ಡಿಸಿಎಂ ಡಿಕೆಶಿ ಪದೇ ಪದೆ ಭೇಟಿ ಕುರಿತು ಮಾತನಾಡಿ, "ಚುನಾವಣೆಗಳು ಬಂದ ಸಂದರ್ಭದಲ್ಲಿ ಭೇಟಿ ನೀಡೋದು ಸಹಜ‌. ಉಪಚುನಾವಣೆ ಬಂದಾಗ ಘೋಷಣೆ ಮಾಡೋದು ಸಾಮಾನ್ಯ. ಬಜೆಟ್​ಗೂ ಉಪ ಚುನಾವಣೆ ಘೋಷಣೆಗೂ ವ್ಯತ್ಯಾಸ ಇದೆ. ಇಂತಹ ಕಾರ್ಯಕ್ರಮಗಳಿಗೆ ಅಷ್ಟೊಂದು ಮಹತ್ವ ಇಲ್ಲ" ಎಂದು ಯೋಗೇಶ್ವರ್​ ಹೇಳಿದ್ರು.

ಇದನ್ನೂ ಓದಿ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ - H D Kumaraswamy

Last Updated : Sep 29, 2024, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.