ETV Bharat / state

ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ: ಸಿ.ಟಿ.ರವಿ ಆರೋಪ - CT RAVI ALLEGATIONS

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

c t ravi
ಸಿ.ಟಿ.ರವಿ (ETV Bharat)
author img

By ETV Bharat Karnataka Team

Published : 6 hours ago

ಬೆಳಗಾವಿ: ''ನಾನು ಕೊಟ್ಟ ದೂರನ್ನು ಸ್ವೀಕಾರ ಮಾಡದೇ, ನನ್ನನ್ನು ಬೇರೆ ಕಡೆ ಕರೆದೊಯ್ಯಲು ಯತ್ನಿಸಲಾಗುತ್ತಿದೆ. ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ'' ಎಂದು ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಖಾನಾಪುರ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಸಿ.ಟಿ.ರವಿ ವಿಡಿಯೋ ಮೂಲಕ ಆರೋಪಗಳನ್ನು ಮಾಡಿದ್ದಾರೆ.

ಕಾಂಗ್ರೆಸ್​ ಸರ್ಕಾರವೇ ಜವಾಬ್ದಾರಿ: ''ಸುಮಾರು 8 ಗಂಟೆಗೆ ನಮ್ಮನ್ನು ಖಾನಾಪುರ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನನ್ನ ಮೇಲೆ ಯಾವ ಮೊಕದ್ದಮೆ ದಾಖಲಾಗಿದೆ ಎಂಬುದನ್ನು ಹೇಳಿಲ್ಲ. ನಾನು ಕೊಟ್ಟ ದೂರಿಗೆ ಎಫ್​ಐಆರ್​ ದಾಖಲಿಸಿಲ್ಲ. ನನ್ನ ಜೀವಕ್ಕೇನಾದರೂ ಅಪಾಯವಾದರೆ ಕಾಂಗ್ರೆಸ್​ ಸರ್ಕಾರವೇ ಜವಾಬ್ದಾರಿಯಾಗಿದೆ. ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ, ಸುಳ್ಳು ದೂರು ಕೊಟ್ಟು ನನ್ನನ್ನು ಕೊಲೆ ಮಾಡುವ ಸಂಚು ಮಾಡಲಾಗಿದೆ. ಈ ಬಗ್ಗೆ ನಾನು ಸಭಾಪತಿಗಳಿಗೂ ದೂರು ನೀಡಿದ್ದೇನೆ. ಠಾಣೆಗೆ ಬಂದು ಮೂರು ಮುಕ್ಕಾಲು ಗಂಟೆಯಾದರೂ ಕೂಡ ಏನು ದೂರಿದೆ, ನಮಗೇನು ಬೇಕು ಅಂತಲೂ ಕೇಳಿಲ್ಲ. ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ'' ಎಂದು ಆಪಾದಿಸಿದರು.

ಸಿ.ಟಿ.ರವಿ (ETV Bharat)

ಎಲ್ಲವೂ ನಿಗೂಢವಾಗಿದೆ: ''ನನ್ನನ್ನು ಇಲ್ಲಿಂದ ಎಲ್ಲಿಗೆ ಕರೆದೊಯ್ಯುತ್ತಾರೆ ಎಂಬುದೂ ಕೂಡ ನನಗೆ ಸ್ಪಷ್ಟತೆ ಇಲ್ಲ. ನನ್ನ ಜೀವಕ್ಕೇನಾದರೂ ತೊಂದರೆಯಾದರೆ ಪೊಲೀಸರು, ಇಲ್ಲಿನ ಸರ್ಕಾರ, ವಿಶೇಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್​ ಹಾಗೂ ಡಿ.ಕೆ.ಶಿವಕುಮಾರ್​ ಅವರ ತಂಡವೇ ಕಾರಣವಾಗಿದೆ. ಎಲ್ಲವೂ ನಿಗೂಢವಾಗಿದೆ. ಯಾವುದೋ ಕ್ರಿಮಿನಲ್​ ರೀತಿಯಲ್ಲಿ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ಅವರ ಪ್ರತಿಯೊಂದು ನಡೆಯೂ ಅನುಮಾನಾಸ್ಪದವಾಗಿದೆ'' ಎಂದಿದ್ದಾರೆ.

''ನಾನೊಬ್ಬ ಜನಪ್ರತಿನಿಧಿ, ಮಂತ್ರಿಯಾಗಿ ಕೆಲಸ ಮಾಡಿದವನು. ಆದರೆ ನಾನು ದೂರು ಕೊಟ್ಟರೂ ಎಫ್​ಐಆರ್​ ದಾಖಲಿಸಿಕೊಳ್ಳಲು ಮೀನಮೇಷ ಎಣಿಸಲಾಗುತ್ತಿದೆ. ತುರ್ತು ಪರಿಸ್ಥಿತಿಯ ಕಾಲಘಟ್ಟದ ರೀತಿಯಲ್ಲಿ ಅವರು ನಡೆಸುಕೊಳ್ಳುತ್ತಿದ್ದಾರೆ. ಜೈ ಹಿಂದ್''​ ಎಂದು ಸಿ.ಟಿ.ರವಿ ವಿಡಿಯೋದಲ್ಲಿ ಹೇಳಿದ್ದಾರೆ.

ಖಾನಾಪುರ ಪೊಲೀಸ್ ಠಾಣೆ ಬಳಿ ಹೈಡ್ರಾಮ: ಸಿ.ಟಿ.ರವಿ ಬಂಧನದ ಬಗ್ಗೆ ತಿಳಿದ ಕೂಡಲೇ ವಿಪಕ್ಷ ನಾಯಕ ಆರ್.ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಮಾಜಿ ಸಚಿವ ಪ್ರಭು ಚೌಹಾಣ್‌ ಖಾನಾಪುರ ಪೊಲೀಸ್ ಠಾಣೆಗೆ ದೌಡಾಯಿಸಿದರು. ಆದರೆ, ಇವರನ್ನು ಠಾಣೆಯೊಳಗೆ ಬಿಡದ ಹಿನ್ನೆಲೆಯಲ್ಲಿ ಭಾರಿ ಜಟಾಪಟಿಯೇ ನಡೆಯಿತು. ಈ ವೇಳೆ ಕಾನೂನು ಸುವ್ಯವಸ್ಥೆ ಕಾರಣ ಪೊಲೀಸರು ಸಿ.ಟಿ.ರವಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಮುಂದಾದರು. ಆಗಲೂ ಭಾರಿ ಹೈಡ್ರಾಮವೇ ಸೃಷ್ಟಿಯಾಯಿತು. ತಳ್ಳಾಟ, ನೂಕಾಟದ ನಡುವೆಯೇ ಸಿ.ಟಿ.ರವಿ ಅವರನ್ನು ಪೊಲೀಸರು ಬೇರೆ ಕಡೆ ಕರೆದೊಯ್ದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.