ETV Bharat / state

14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧ: ಸಿ.ಟಿ.ರವಿ ಆಕ್ಷೇಪ - CT RAVI SLAMS

ಬಿಪಿಎಲ್ ಕಾರ್ಡ್ ರದ್ದು ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಇದೊಂದು ಘೋರ ಅಪರಾಧ ಎಂದಿದ್ದಾರೆ.

CT RAVI SLAMS
ಸಂವಿಧಾನದ ಸಮ್ಮಾನ ಅಭಿಯಾನಕ್ಕೆ ಚಾಲನೆ (ETV Bharat)
author img

By ETV Bharat Karnataka Team

Published : Nov 19, 2024, 7:28 PM IST

ಬೆಂಗಳೂರು: ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರ್ಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಡವರ ಅನ್ನಕ್ಕೂ ಕನ್ನ ಹಾಕುವ ಪರಮ ಅನ್ಯಾಯ ಇದಾಗಿದೆ ಎಂದು ಟೀಕಿಸಿದರು.

ಜಾತಿ ಹುಡುಕಿ ಕಾರ್ಡ್ ರದ್ದು ಮಾಡಿದ್ದನ್ನು ಸೋಷಿಯಲ್ ಮೀಡಿಯದಲ್ಲಿ ನೋಡಿದ್ದೇನೆ. ಬಡವರ ಅನ್ನಕ್ಕೂ ಕನ್ನ ಹಾಕುವ ಸರ್ಕಾರ ಇದೆಂದು ಆರೋಪಿಸಿದ ಅವರು, ಎಐಸಿಸಿ ಅಧ್ಯಕ್ಷ ಖರ್ಗೆಯವರು ನಿನ್ನೆ ಆರ್​ಎಸ್​ಎಸ್​, ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಅನುಭವ ಪಕ್ವತೆ ಪಡೆದುಕೊಳ್ಳಬೇಕು. ಹಿರಿತನಕ್ಕೆ ತಕ್ಕ ಮಾತು ಅದಲ್ಲ; ಅವರ ಮಾತುಗಳು ಹುಚ್ಚುನಾಯಿ ಕಡಿತಕ್ಕೆ ಒಳಗಾದವರು ಆಡುವ ಥರ ಮಾತಿನಂತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ಆ ಮಾತನಾಡಿದ್ದಾರೋ ಅಥವಾ ಕಾಂಗ್ರೆಸ್ಸಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಖರ್ಗೆಯವರ ಮೂಲಕ ಈ ಮಾತನ್ನಾಡಿಸಿದ್ದಾರೋ ಗೊತ್ತಿಲ್ಲ. ಆದರೆ, ನಿಮ್ಮ ಮಾತು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಮಾತಲ್ಲ. ಹೊಡಿ, ಬಡಿ ಕೊಲ್ಲು ಎಂಬ ತಾಲಿಬಾನಿಗಳ ಮಾತಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಸಂವಿಧಾನದ ಸಮ್ಮಾನ ಅಭಿಯಾನ: ಸಂವಿಧಾನ ಗೌರವ ದಿವಸ ಆಚರಿಸಲು ಪ್ರಧಾನಿ ಮೋದಿಜೀ ಅವರು ಕ್ರಮ ಕೈಗೊಂಡಿದ್ದಾರೆ. ಡಾ.ಅಂಬೇಡ್ಕರ್​ ಅವರು ಸತ್ತಾಗಲೂ ಕಾಂಗ್ರೆಸ್ ಸರ್ಕಾರ ಅವಮಾನ ಮಾಡಿದ್ದನ್ನು, ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದನ್ನು ಹಾಗೂ ಕಾಂಗ್ರೆಸ್ ಪಕ್ಷವು ಅವರ ಹೆಸರನ್ನು ಭಾರತ ರತ್ನಕ್ಕೆ ಪರಿಗಣಿಸದೇ ಇರುವುದನ್ನು ಜನರಿಗೆ ತಿಳಿಸುತ್ತೇವೆ. ಸಂವಿಧಾನ ಸಂರಕ್ಷಣೆ, ಸಂವಿಧಾನದ ಸಮ್ಮಾನದ ಅಭಿಯಾನ ಕೈಗೆತ್ತಿಕೊಂಡಿದ್ದು, ಈ ಎಲ್ಲ ಸಂಗತಿಗಳನ್ನು ಜನರ ಮುಂದಿಡಲಿದ್ದೇವೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಕುರಿತು ನಿಜವಾದ ಪ್ರೀತಿ ಇಲ್ಲ; ನಾಟಕ ಮಾಡುತ್ತ ಬಂದಿದೆ. ಆಡಳಿತದಲ್ಲಿ ಇದ್ದಾಗ ಕೂಡ ಅದು ಸಂವಿಧಾನಕ್ಕೆ ಮತ್ತು ಅಂಬೇಡ್ಕರರಿಗೆ ಗೌರವ ಕೊಟ್ಟಿಲ್ಲ ಎಂದು ಟೀಕಿಸಿದರು.

ನಕ್ಸಲಿಸಂ ಎಂದರೆ ಹಿಂಸೆ ಪ್ರಚೋದಿಸುವುದು ಮತ್ತು ಅದು ಪ್ರಜಾಪ್ರಭುತ್ವ ವಿರೋಧಿ. ನಕ್ಸಲರ ಬಗ್ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಗಳು ಮಾತ್ರ ಕರುಣೆ ತೋರಲು ಸಾಧ್ಯ; ನಕ್ಸಲರು ನಕ್ಸಲರೇ; ಅವರ ಬಗ್ಗೆ ಯಾವ ಸಿಂಪಥಿಯೂ ಇಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು. ನಕ್ಸಲರು ಎಡಪಂಥೀಯ ಭಯೋತ್ಪಾದಕರಷ್ಟೇ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಅಭಿವೃದ್ಧಿಗೆ ಅನುದಾನ ಕೇಳಿದರೆ, ಮುಖ್ಯಮಂತ್ರಿಗಳು ಎಲ್ಲಿಂದ ದುಡ್ಡು ತರೋದು; ಸ್ವಲ್ಪ ತಡ್ಕೊಳ್ಳಿ ಎನ್ನುತ್ತಾರೆ. ಹಾಗಾಗಿ ಇದು ಹೊಸದೇನಲ್ಲ; ಅದಕ್ಕಾಗಿ ಬಡವರ ಅನ್ನವನ್ನೂ ಬಿಪಿಎಲ್ ಕಾರ್ಡ್ ರದ್ದು ಮಾಡುವ ಮೂಲಕ ಕಿತ್ತುಕೊಳ್ಳಲು ಹೊರಟಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.