ETV Bharat / state

ಪ್ರಜ್ಞೆತಪ್ಪಿದ ಧರಣಿ ನಿರತ ಉಪನ್ಯಾಸಕಿ: ಚಿಕಿತ್ಸೆ ನೀಡಿದ ಎಂಎಲ್​ಸಿ ಧನಂಜಯ ಸರ್ಜಿ - MLC DHANANJAYA SARJI

ಪ್ರಜ್ಞೆ ತಪ್ಪಿ ಬಿದ್ದ ಧರಣಿ ನಿರತ ಉಪನ್ಯಾಸಕಿಗೆ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದರು.

dhananjaya sarji
ಉಪನ್ಯಾಸಕಿಗೆ ಚಿಕಿತ್ಸೆ ನೀಡಿದ ಎಂಎಲ್​ಸಿ (ETV Bharat)
author img

By ETV Bharat Karnataka Team

Published : Dec 18, 2024, 7:13 AM IST

ಬೆಳಗಾವಿ/ಶಿವಮೊಗ್ಗ: ಧರಣಿ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕಿಗೆ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಬೆಳಗಾವಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರು ಕರ್ತವ್ಯ ಪ್ರಜ್ಞೆಯ ಜೊತೆಗೆ ಮಾನವೀಯತೆ ಮರೆದಿದ್ದಾರೆ.

ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಮುಂಭಾಗ ಮಂಗಳವಾರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಧರಣಿ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರು ತೆರಳಿ, ಮನವಿ ಸ್ವೀಕರಿಸಿದರು.

ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಮಾಡುವಂತೆ ಈಗಾಗಲೇ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಜೊತೆ ಸಭೆ ಕೂಡ ನಡೆಸಲಾಗಿದೆ. ಸಚಿವರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಧರಣಿ ನಿರತರನ್ನು ಕುರಿತು ಮಾತನಾಡುವ ಸಂದರ್ಭದಲ್ಲಿ, ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರನೇ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಡಾ.ಧನಂಜಯ ಸರ್ಜಿ ಅವರು ಸ್ಥಳದ್ಲಲೇ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದರು.

ಇದನ್ನೂ ಓದಿ: ಬೇರೆ ಪಕ್ಷ, ಪ್ರಚೋದಿತರಿಂದ ಪಂಚಮಸಾಲಿ ಹೋರಾಟ ನಡೆಯಬಾರದು: ಲಕ್ಷ್ಮಿ ಹೆಬ್ಬಾಳ್ಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.