ETV Bharat / state

ವಿಧಾನ ಪರಿಷತ್‌ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​, ಮೂರು ಕ್ಷೇತ್ರಗಳಲ್ಲಿ ಬಿಜೆಪಿ - ಜೆಡಿಎಸ್​ ಮೈತ್ರಿಗೆ ಗೆಲುವು - MLC Election Results

ವಿಧಾನ ಪರಿಷತ್​ ಚುನಾವಣೆಯ ಆರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಗಿದಿದ್ದು, ಮೂರರಲ್ಲಿ ಬಿಜೆಪಿ - ಜೆಡಿಎಸ್​ ಗೆಲುವು ಸಾಧಿಸಿದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿದೆ.

CONGRESS WINS IN TWO CONSTITUENCIES, BJP-JDS ALLIANCE WINS IN THREE CONSTITUENCIES
ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​, ಮೂರು ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್​ ಮೈತ್ರಿಗೆ ಗೆಲುವು (ETV Bharat)
author img

By ETV Bharat Karnataka Team

Published : Jun 7, 2024, 12:13 PM IST

Updated : Jun 7, 2024, 2:32 PM IST

ಸಂಭ್ರಮಾಚರಣೆ (ETV Bharat)

ಬೆಂಗಳೂರು/ಮೈಸೂರು/ಕಲಬುರಗಿ: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರ ಸೇರಿ ಎರಡೂ ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು ಲಭಿಸಿದೆ. ಗುರುವಾರ ತಡರಾತ್ರಿವರೆಗೂ ನಗರದ ಆರ್ಟ್ಸ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಯಿತು.

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ 24,888 ಮತ ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ 36,729 ಮತ ಪಡೆದು ಹಾಲಿ ಸದಸ್ಯ ದೇವೇಗೌಡರ ವಿರುದ್ಧ ಗೆಲುವಿನ ನಗೆ ಬೀರಿದರು. ಇಲ್ಲಿ ಚಲಾವಣೆಯಾದ 80,080 ಮತಗಳ ಎಣಿಕೆ ಆರು ಸುತ್ತುಗಳಲ್ಲಿ ನಡೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 8,482 ಮತಗಳು ಅಸಿಂಧುಗೊಂಡಿವೆ.

ತ್ರಿಕೋನ ಸ್ಪರ್ಧೆ ಏರ್ಪಟ್ಟ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ 8,909 ಮತಗಳಿಂದ ಗೆದ್ದಿದ್ದು ಹಾಲಿ ಸದಸ್ಯ ನಾರಾಯಣಸ್ವಾಮಿಗೆ ಸೋಲಾಗಿದೆ‌. ಇಲ್ಲಿ ಚಲಾವಣೆಯಾದ 24,106 ಮತಗಳ ಎಣಿಕೆ ಏಳು ಸುತ್ತುಗಳಲ್ಲಿ ನಡೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಗೆಲುವು ಸಾಧಿಸಿದ್ದಾರೆ. 704 ಮತಗಳು ತಿರಸ್ಕೃತಗೊಂಡಿವೆ. ಈ ಎರಡೂ ಕ್ಷೇತ್ರಗಳು ಬಿಜೆಪಿಯ ತೆಕ್ಕೆಯಲ್ಲಿದ್ದವು. ಇದೀಗ ಈ ಎರಡೂ ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿದ್ದು ಕಾಂಗ್ರೆಸ್ ಪಾಲಾಗಿವೆ. ಬಿಜೆಪಿ ಅಭ್ಯರ್ಥಿ ವೈ.ಎ ನಾರಾಯಣಸ್ವಾಮಿ 7,142 ಮತ ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ, ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 6,894 ಮತ ಪಡೆದಿದ್ದಾರೆ.

Winning Candidate
ಗೆದ್ದ ಅಭ್ಯರ್ಥಿಗಳು (ETV Bharat)

ಈಶಾನ್ಯದಲ್ಲೂ ಕಾಂಗ್ರೆಸ್​: ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದಕ್ಕೆ ಐದು ಸ್ಥಾನಗಳನ್ನು ಗೆದ್ದು ಬೀಗಿದ ಕೈಪಾಳಯ ಇದೀಗ ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಭರ್ಜರಿ‌ ಜಯಬೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ. ಕೈ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಸತತ ಎರಡನೇ ಭಾರಿಗೆ ಗೆಲುವಿನ ನಗೆ ಬಿರಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಗುರುವಾರ ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ಕಲಬುರಗಿ ನಗರದ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆದಿದ್ದು, ಸಂಜೆ 4 ಗಂಟೆವರೆಗೆ ಬ್ಯಾಲೇಟ್ ಪೇಪರ್ ಜೋಡಿಕೆ ಮಾಡಿ ನಂತರ ಮತಗಳ ಎಣಿಕೆ ಕೈಗೊಳ್ಳಲಾಗಿದೆ. ಇಡಿ ರಾತ್ರಿ ಮತಗಳ ಎಣಿಕೆ ನಡೆದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪ್ರಥಮ ಪ್ರಾಶಸ್ತ್ಯದ ಅಂತಿಮ ಎಂಟನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಪ್ರಥಮ ಪ್ರಾಶಸ್ತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ 39,496 ಮತಗಳು ಪಡೆದು 4,446 ಮತಗಳಿಂದ ಪ್ರತಿಸ್ಪರ್ಧಿ ಬಿ.ಜೆ.ಪಿಯ ಅಮರನಾಥ ಪಾಟೀಲ್ ಗಿಂತ ಮುನ್ನಡೆ ಸಾಧಿಸಿದ್ದರು.‌ ಆದರೆ ವಿನ್ನಿಂಗ್ ಕೋಟಾ 48,260 ಫಿಕ್ಸ್ ಮಾಡಿದ್ದರಿಂದ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ಮಾಡಲಾಯಿತು. ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಭರ್ಜರಿ ಜಯಗಳಿಸಿದ್ದಾರೆ.

ಮೈಸೂರಿನಲ್ಲಿ 3 ಕ್ಷೇತ್ರಗಳ ಮತ ಎಣಿಕೆ: ವಿಧಾನಷರಿಷತ್​ನ ಮೂರು ಕ್ಷೇತ್ರಗಳ ಮತ ಎಣಿಕೆ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿ ಮಧ್ಯರಾತ್ರಿಯವರೆಗೆ ಮತ ಎಣಿಕೆ ನಡೆಯಿತು. ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ - ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಸಂಭ್ರಮಾಚರಣೆ (ETV Bharat)

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿವೇಕಾನಂದ ಗೆಲುವು ಸಾಧಿಸಿದರೇ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬೋಜೇಗೌಡ ಗೆಲುವು ಸಾಧಿಸಿದ್ದಾರೆ. ನಂತರ ಮಧ್ಯರಾತ್ರಿಯವರೆಗೆ ನಡೆದ ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿ ಧನಂಜಯ್‌ ಸರ್ಜಿ ಜಯಗಳಿದರು.

ಅಭ್ಯರ್ಥಿಗಳ ಗೆಲುವಿನ ಅಂತರ: ಕೆ.ವಿವೇಕಾನಂದ 10,823 ಮತಗಳನ್ನು ಪಡೆದರೆ, ಇವರ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮರೀತಿಬ್ಬೇಗೌಡ 6,201 ಮತಗಳನ್ನು ಪಡೆದು 4,622 ಮತಗಳ ಅಂತರದಿಂದ ಸೋಲನುಭವಿಸಿದರು. ವಿವೇಕಾನಂದ ಮೊದಲ ಪ್ರಾಶಸ್ತ್ಯ ಮತಗಳಿಂದ 4 ಬಾರೀ ಗೆದ್ದಿದ್ದ ಮರಿತಿಬ್ಬೇಗೌಡ ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾದರು.

ಬೋಜೇಗೌಡ ಸಹ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆಯುವ ಮೂಲಕ 2ನೇ ಬಾರಿಗೆ ವಿಧಾನಪರಿಷತ್​ಗೆ ಆಯ್ಕೆಯಾದರು. ಅವರು 9,829 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ್‌ 4,562 ಮತಗಳನ್ನು ಪಡೆದಿದ್ದಾರೆ. ಬೋಜೇಗೌಡ 5,267 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದರು.

ಮಧ್ಯರಾತ್ರಿವರೆಗೆ ನಡೆದ ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯಲ್ಲಿ ಡಾ. ಧನಂಜಯ ಸರ್ಜೀ, ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಡಾ. ಧನಂಜಯ ಸರ್ಜಿ 37,627 ಮತ ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ 13,516 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ 7,039 ಮತ ಪಡೆದು ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ 6,935 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಕುಲಗೆಟ್ಟ ಮತಗಳು: ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಸರಿಯಾಗಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಿದ್ದರು. ಕುಲಗೆಟ್ಟ ಮತಗಳು ಸಹ ಹೆಚ್ಚಾಗಿ ಚಲಾವಣೆಗೊಂಡಿರುವುದು ಕಂಡು ಬಂದಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 1049, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 821, ಹಾಗೂ ನೈರುತ್ಯ ಪದವೀಧರ ಕ್ಷೇತ್ರದಲ್ಲಿ 5,115 ಕುಲಗೆಟ್ಟ ಮತಗಳು ಚಲಾವಣೆಗೊಂಡಿವೆ.

ಮೂರು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯ ಮತಗಳಿಂದ ಜಯ: ಮೂವರು ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯ ಮತದಲ್ಲೇ ಜಯಗಳಿಸುವ ಮೂಲಕ ಮೊದಲ ಬಾರಿಗೆ ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆದ್ದ ದಾಖಲೆಯನ್ನು ನಿರ್ಮಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಗಳು: ದಕ್ಷಿಣ ಶಿಕ್ಷಕ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು, ಹಾಸನ, ಚಾಮರಾಜನಗರ, ಹಾಗೂ ಮಂಡ್ಯ ಜಿಲ್ಲೆಗಳು ವ್ಯಾಪ್ತಿಯಲ್ಲಿ ಬರಲಿದ್ದು, ಈ ಕ್ಷೇತ್ರ ವ್ಯಾಪ್ತಿಯಲ್ಲಿ 20,549 ಶಿಕ್ಷಕ ಮತದಾರರಿದ್ದು, ಅದರಲ್ಲಿ 18,989 ಮತಗಳು ಚಲಾವಣೆಗೊಂಡಿದ್ದವು.

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರಗಳು: ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ 6 ಜಿಲ್ಲೆಗಳು ಈ ಕ್ಷೇತ್ರ ವ್ಯಾಪ್ತಿಯಲ್ಲಿ ಬರಲಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 23,402 ಮತದಾರರಿದ್ದು, ಅವುಗಳ ಪೈಕಿ 19,320 ಮತಗಳು ಚಲಾವಣೆಗೊಂಡಿದ್ದವು. ಇನ್ನೂ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 85,089 ಮತಗಳಿದ್ದು, ಅವುಗಳಲ್ಲಿ 66,529 ಮತಗಳು ಚಲಾವಣೆಗೊಂಡಿದ್ದವು.

ಇದನ್ನೂ ಓದಿ: ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ: ಬಿಜೆಪಿಯ ಧನಂಜಯ್ ಸರ್ಜಿ ಜಯಭೇರಿ; 3ನೇ ಸ್ಥಾನಕ್ಕೆ ಕುಸಿದ ಬಂಡಾಯ ಅಭ್ಯರ್ಥಿ ರಘುಪತಿ ಭಟ್​ - Dhananjaya Sarji Wins

Last Updated : Jun 7, 2024, 2:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.