ETV Bharat / state

ಸ್ಥಾನ ಭದ್ರಪಡಿಸಿಕೊಳ್ಳಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್. ರವಿಕುಮಾರ್ ಟೀಕೆ - MLC N Ravikumar

author img

By ETV Bharat Karnataka Team

Published : Jun 30, 2024, 3:20 PM IST

ಸಿದ್ದರಾಮಯ್ಯನವರು ಕಳೆದೊಂದು ವರ್ಷದಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಈಗ ದೆಹಲಿಯಲ್ಲಿ ವಿಪರೀತ ಚರ್ಚೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಟೀಕಿಸಿದರು.

ಎನ್.ರವಿಕುಮಾರ್
ಎನ್.ರವಿಕುಮಾರ್ (ETV bharat)

ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಯತ್ನ ನಡೆಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕಳೆದೊಂದು ವರ್ಷದಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಈಗ ದೆಹಲಿಯಲ್ಲಿ ವಿಪರೀತ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ; ಗ್ಯಾರಂಟಿಗಳನ್ನು ಸರಿಯಾಗಿ ತಲುಪಿಸುತ್ತಿಲ್ಲ, ಭ್ರಷ್ಟಾಚಾರ ಮೇರೆ ಮೀರಿದೆ ಎಂದು ವಾಗ್ದಾಳಿ ನಡೆಸಿದರು.

ಯಾರದೋ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ಸಚಿವರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆ. ಕೆಲವು ಸಚಿವರು ಡಿಸಿಎಂ ಆಗಲು ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಏನಾದರೂ ಮಾಡಿ ಮುಖ್ಯಮಂತ್ರಿ ಮಾಡಲು ಅವರ ಪರವಾಗಿ ಇರುವವರಿಂದ ಪ್ರಯತ್ನ ನಡೆದಿದೆ. ಇದೆಲ್ಲವನ್ನೂ ನೋಡಿದರೆ ರಾಜ್ಯದಲ್ಲಿ ಅಭಿವೃದ್ಧಿಗೆ ಜಾಗ ಇಲ್ಲ ಎಂಬಂತಾಗಿದೆ ಎಂದು ಆಕ್ಷೇಪಿಸಿದರು.

ರೈತರು, ಕಾರ್ಮಿಕರು, ವಿದ್ಯಾರ್ಥಿಗಳ ಗೋಳು ಗಮನಿಸುವವರು ಯಾರೂ ಇಲ್ಲ. ಖಜಾನೆ ಸಂಪೂರ್ಣ ಖಾಲಿಯಾಗಿದೆ. ಖಜಾನೆ ತುಂಬಿಸಲು ರಾಜ್ಯ ಸರ್ಕಾರವು ಹಾಲಿನ ದರ ಏರಿಸಿದೆ. ಪೆಟ್ರೋಲ್-ಡೀಸೆಲ್ ದರ ಏರಿಸಿದೆ. ಮದ್ಯದ ದರ ಹೆಚ್ಚಿಸಿದೆ, ರಿಜಿಸ್ಟ್ರೇಶನ್ ಶುಲ್ಕವನ್ನೂ ಏರಿಸಿದೆ. ಹೀಗೆ ಬೆಲೆ ಏರಿಕೆಯ ಪರ್ವವನ್ನು ಸರ್ಕಾರ ಕೈಗೊಂಡಿದೆ ಎಂದು ದೂರಿದರು. ಹಾಲು ಉತ್ಪಾದಕರ 957 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಇನ್ನೂ ನೀಡಿಲ್ಲ. ರೈತರಿಗೆ 4 ಸಾವಿರ ಕೊಡಬೇಕಾದುದನ್ನು ನಿಲ್ಲಿಸಿದೆ. ವಿದ್ಯಾರ್ಥಿಗಳ ಸ್ಕಾಲರ್‍ಶಿಪ್ ಕೂಡ ಸ್ಥಗಿತವಾಗಿದೆ. 4 ಲಕ್ಷ ಕೂಲಿ ಕಾರ್ಮಿಕರ ಮಕ್ಕಳ ಸ್ಕಾಲರ್‍ಶಿಪ್ ಕೂಡ ನೀಡಿಲ್ಲ ಎಂದು ರವಿಕುಮಾರ್​ ಆರೋಪಿಸಿದರು.

ಬೇಲಿಯೇ ಎದ್ದು ಹೊಲ ಮೇಯುವಂತಿದೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದದ್ದಲ್ ಅವರು ಹಗರಣದ ತನಿಖೆ ತೀವ್ರಗೊಳಿಸಲು ಹೇಳಿದ್ದಾರೆ. ಇದು ಒಂದು ರೀತಿ ಬೇಲಿಯೇ ಎದ್ದು ಹೊಲ ಮೇಯುವ ಸಂದರ್ಭದಂತಿದೆ. ದದ್ದಲ್ ಅವರು ಮೊದಲು ರಾಜೀನಾಮೆ ಕೊಡಬೇಕು ಎಂದು ರವಿಕುಮಾರ್ ಆಗ್ರಹಿಸಿದರು. ಹಣ ಅಕ್ರಮ ವರ್ಗಾವಣೆ ಕುರಿತು ಸಭೆ ನಡೆಸಿದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, 700 ಖಾತೆಗೆ ಹಣ ಹಾಕಿದ ಸಂಬಂಧ, 187 ಕೋಟಿ ಹಗಲುದರೋಡೆ ಆದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಜುಲೈ 3ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗದಗದಲ್ಲಿ ಸರಗಳ್ಳತನ ಮಾಡುವ ಅಮ್ಜದ್ ಅಲಿ ಎಂಬ ಆರೋಪಿಯು ತನ್ನ ಸಹಚರರ ಜೊತೆ 4 ಜನ ಪೊಲೀಸರಿಗೆ ಹಲ್ಲೆ ಮಾಡಿದ್ದು, ಇದು ಕಾನೂನು-ಸುವ್ಯವಸ್ಥೆ ಕುಸಿತದ ಸ್ಪಷ್ಟ ಉದಾಹರಣೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ತನಿಖೆ ನಡೆಸಬೇಕೆಂದು ಬಿಜೆಪಿ ಸದಸ್ಯ ರವಿಕುಮಾರ್ ಒತ್ತಾಯಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ - CM meets PM modi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.