ETV Bharat / state

ರಾಜಕೀಯ ಷಡ್ಯಂತ್ರ, ಸತ್ಯಾಸತ್ಯತೆ ಹೊರಬರಲಿದೆ: ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸೂರಜ್ ರೇವಣ್ಣ ಪ್ರತಿಕ್ರಿಯೆ - MLC Suraj Revanna - MLC SURAJ REVANNA

ಲೈಂಗಿಕ ದೌರ್ಜನ್ಯ ಆರೋಪವನ್ನು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ತಿರಸ್ಕರಿಸಿದ್ದಾರೆ.

ಸೂರಜ್ ರೇವಣ್ಣ
ಸೂರಜ್ ರೇವಣ್ಣ (ETV Bharat)
author img

By ETV Bharat Karnataka Team

Published : Jun 22, 2024, 10:15 PM IST

ಸೂರಜ್ ರೇವಣ್ಣ ಪ್ರತಿಕ್ರಿಯೆ (ETV Bharat)

ಹಾಸನ: ನನ್ನ ಮೇಲಿನ ಆರೋಪ ಸುಳ್ಳು. ನನಗೆ ಈ ನಾಡಿನ ಕಾನೂನಿನ ಮೇಲೆ ವಿಶ್ವಾಸವಿದೆ. ಪೊಲೀಸರ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಹೇಳಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯದ ಬಗ್ಗೆ ಅರಲಗೂಡು ಮೂಲದ ಯುವಕ ಮಾಡಿರುವ ಆರೋಪವನ್ನು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ತಿರಸ್ಕರಿಸಿದರು. ಪ್ರಕರಣ ಸಂಬಂಧ ದಾಖಲೆ ನೀಡಲು ಹಾಸನ ಸೆನ್ ಪೊಲೀಸ್ ಠಾಣೆಗೆ ಸೂರಜ್ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದರು.

ರಾಜಕೀಯ ಷಡ್ಯಂತ್ರ ಮಾಡಿ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ ನನ್ನ ಮೇಲಿನ ಆರೋಪವನ್ನು ತಿರಸ್ಕರಿಸುತ್ತೇನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನನಗೆ ಕಾನೂನಿನ ಮೇಲೆ ವಿಶ್ವಾಸವಿದ್ದು, ಸತ್ಯಾಸತ್ಯತೆ ಹೊರಬರಲಿದೆ. ಪ್ರಕರಣ ಸಂಬಂಧ ಈಗಾಗಲೇ ಎಫ್​ಐಆರ್ ಆಗಿದೆ ಎಂದು ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದರು.

ನನ್ನ ವಿರುದ್ಧ ಯಾರು ಷಡ್ಯಂತ್ರ ಮಾಡಿದ್ದಾರೆ ಎಂಬುದನ್ನು ನಾನು ಈಗ ಚರ್ಚಿಸಲು ಹೋಗಲ್ಲ. ತನಿಖೆ ಪ್ರಗತಿಯಲ್ಲಿದೆ. ಎಲ್ಲವೂ ಹೊರಬರಲಿದ್ದು, ಅದನ್ನು ರಾಜ್ಯದ ಜನರು ನೋಡಲಿದ್ದಾರೆ ಎಂದು ಸೂರಜ್ ರೇವಣ್ಣ ತಿಳಿಸಿದರು.

ಗನ್ನಿಕಡ ತೋಟದಿಂದ ಹಾಸನದ ಎನ್‌. ಆರ್ ವೃತ್ತದಲ್ಲಿರುವ ಸೈಬರ್ ಕ್ರೈಂ ಠಾಣೆಗೆ ಸೂರಜ್ ರೇವಣ್ಣ ಅವರು ಆಗಮಿಸಿ, ಪ್ರಕರಣ ಕುರಿತು ದಾಖಲೆ ಮತ್ತು ಮಾಹಿತಿ ನೀಡಿದರು. ಜೊತೆಗೆ ಯುವಕ ಮಾಡಿರುವ ಫೋನ್ ಕರೆ, ಮೆಸೇಜ್ ಮತ್ತು ಆಡಿಯೋಗಳನ್ನು ಪೊಲೀಸರಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಣಕ್ಕಾಗಿ ಯುವಕ ಬ್ಲ್ಯಾಕ್ ಮೇಲ್​ ಮಾಡಿದ್ದಾನೆ ಎಂದು ಹೊಳೆನರಸೀಪುರ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಶುಕ್ರವಾರ ಎಫ್​ಐಆರ್ ದಾಖಲಿಸಿದ್ದಾರೆ. ಹಣ ನೀಡದಿದ್ದರೆ ಸೂರಜ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸುಳ್ಳು ಕೇಸ್ ದಾಖಲಿಸುವುದಾಗಿ ಯುವಕ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇನ್ನು ಯುವಕ ಕೂಡ ದೂರು ನೀಡಿದ್ದು, ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 'ಹಣಕ್ಕಾಗಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ': ಯುವಕನ ವಿರುದ್ಧ ಎಫ್​ಐಆರ್ - Suraj Revanna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.