ETV Bharat / state

ಬಿಜೆಪಿ, ಎನ್‌ಡಿಎ ಸೋಲು ಮೋದಿ ಅವರಿಗೆ ಗೊತ್ತಿದ್ದೂ ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ - CM Siddaramaiah

''ಬಿಜೆಪಿ, ಎನ್‌ಡಿಎ ಸೋಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಗೊತ್ತಿದ್ದು, ಅವರು ಹತಾಶೆಯಿಂದ ಮಾತನಾಡುತ್ತಿದ್ದಾರೆ'' ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Prime Minister Narendra Modi  CM Siddaramaiah  BJP  NDA
ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯ ಭಾಗಿ (ETV Bharat)
author img

By ETV Bharat Karnataka Team

Published : May 27, 2024, 2:49 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ''ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್​ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಆದ್ದರಿಂದ ಅವರು ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ'' ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ''ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿ ಅವರನ್ನು ಇಷ್ಟರ ಮಟ್ಟಕ್ಕೆ ಮಾಡಿಟ್ಟಿದೆ'' ಎಂದು ವ್ಯಂಗ್ಯವಾಡಿದರು.

''ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು, ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ. ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರು, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು, ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

''ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು, ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರು ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರು ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ'' ಎಂದು ತಿಳಿಸಿದರು.

''ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 28 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28ಕ್ಕೆ 28 ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ'' ಎಂದು ಹೇಳಿದರು.

ಭಾರತವನ್ನು ಸದೃಢ ಪ್ರಜಾಪ್ರಭುತ್ವ ದೇಶವಾಗಿಸಿದ್ದು ನೆಹರು - ಸಿದ್ದರಾಮಯ್ಯ: ''ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರು'' ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

''ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರು. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತ ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು'' ಎಂದು ವಿವರಿಸಿದರು.

''ನೆಹರು ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರು ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದ ಉದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದರು'' ಎಂದು ತಿಳಿಸಿದರು.

''ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು, ನೆಹರು ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲಿ ಸ್ಥಾಪಿಸಲಿಲ್ಲ. ಅವರಿಗೆ ನೆಹರು ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ? ನೆಹರು ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್​ಎಸ್ಎಸ್ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ'' ಎಂದರು.

ಡಿಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಾಗಲಕೋಟೆ: ಹುಲ್ಲೇಶ್ವರ ಜಾತ್ರೆಯಲ್ಲಿ ಮರವೇರಿ ಮಳಿಯಪ್ಪಜ್ಜನ ಮಳೆ-ಬೆಳೆ ಭವಿಷ್ಯ - Hulleshwar Temple Jatra

ETV Bharat Logo

Copyright © 2024 Ushodaya Enterprises Pvt. Ltd., All Rights Reserved.