ETV Bharat / state

ಭಕ್ತಿ ಇಲ್ಲದ ಜ್ಞಾನ ಅಹಂಕಾರ ಹುಟ್ಟಿಸುತ್ತದೆ: ಎಸಿಪಿಆರ್‌ ಶತಮಾನೋತ್ಸವದಲ್ಲಿ ಮೋಹನ್ ಭಾಗವತ್ - Mohan Bhagwat - MOHAN BHAGWAT

ಜ್ಞಾನ ಹಾಗೂ ಭಕ್ತಿಯ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್‌ ಮಾತನಾಡಿದ್ದಾರೆ.

Mohan Bhagwat
ಮೋಹನ್ ಭಾಗವತ್ (ETV Bharat)
author img

By ETV Bharat Karnataka Team

Published : Aug 1, 2024, 4:52 PM IST

Updated : Aug 1, 2024, 5:23 PM IST

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್‌ ಮಾತನಾಡಿದರು (ETV Bharat)

ಬೆಳಗಾವಿ: "ಬದುಕಿನಲ್ಲಿ ಪ್ರತಿಯೊಬ್ಬರಿಗೂ ಜ್ಞಾನ ಮತ್ತು ಭಕ್ತಿ ಬೇಕೇ ಬೇಕು. ರಾಮ ಮತ್ತು ರಾವಣ ಇಬ್ಬರಲ್ಲೂ ಜ್ಞಾನವಿತ್ತು. ಆದರೆ, ರಾಮನಲ್ಲಿ ಮಾತ್ರ ಭಕ್ತಿ ಇತ್ತು. ಹಾಗಾಗಿ, ಅವನನ್ನು ಪೂಜಿಸುತ್ತೇವೆ. ಭಕ್ತಿ ಇಲ್ಲದ ಜ್ಞಾನ ಅಹಂಕಾರ ಹುಟ್ಟಿಸುತ್ತದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘ ಚಾಲಕ ಮೋಹನ್ ಭಾಗವತ್‌ ಅಭಿಪ್ರಾಯಪಟ್ಟರು.

ಇಂದು ಬೆಳಗಾವಿಯ ಅಕಾಡೆಮಿ ಆಫ್‌ ಕಂಪೇರೆಟಿವ್‌ ಫಿಲಾಸಫಿ ಆ್ಯಂಡ್‌ ರಿಲಿಜನ್‌ (ಎಸಿಪಿಆರ್‌)ನ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ ಹಾಗೂ ಗುರುದೇವ ರಾನಡೆ ರಚಿಸಿದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

"ಸಂಪ್ರದಾಯ ಸರಿಯಾದ ಮಾರ್ಗದಲ್ಲಿ ನಮ್ಮನ್ನು ಕೊಂಡೊಯ್ಯುತ್ತದೆ. ಇದು ಸಾಧನೆಯ ಪಥವೂ ಹೌದು. ಮಹಾತ್ಮರ ಪ್ರವಚನಗಳು ನಮ್ಮ ಗುರಿ ತಲುಪಲು ಸಹಕಾರಿ‌ ಆಗುತ್ತವೆ. ನಾವು ಸಾಧಿಸಬೇಕಾದ ಗುರಿ ಮರೆತರೆ, ನಮ್ಮನ್ನೇ ನಾವು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಪ್ರದಾಯ ಪಾಲಿಸಿ ನಿತ್ಯಸಾಧನೆ ಮಾಡಬೇಕು. ಕರ್ಮ, ಅಕರ್ಮ ಮತ್ತು ವಿಕರ್ಮಗಳ ನಡುವಿನ ವ್ಯತ್ಯಾಸ ಸರಿಯಾಗಿ ತಿಳಿದುಕೊಳ್ಳಬೇಕು" ಎಂದು ಕಿವಿಮಾತು ಹೇಳಿದರು.

Mohan Bhagwat planted a sapling in the ACPR premises
ಎಸಿಪಿಆರ್ ಆವರಣದಲ್ಲಿ ಸಸಿ ನೆಟ್ಟ ಮೋಹನ್ ಭಾಗವತ್ (ETV Bharat)

"ಪ್ರತಿಯೊಬ್ಬರೂ ತಮ್ಮ ಅಂತರಂಗದಲ್ಲಿನ ಸತ್ಯ ಗುರುತಿಸಬೇಕು. ಆಗ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಬದುಕಿನಲ್ಲಿ ಯಶಸ್ಸು ಸಾಧಿಸಲು ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಬೇಕು" ಎಂದ ಭಾಗವತ್, "ಸನಾತನ ಧರ್ಮದ ಹಾದಿಯಲ್ಲಿ ನಾವೆಲ್ಲಾ ಸಾಗಬೇಕು. ಸನಾತನ ಧರ್ಮದಲ್ಲಿ ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ" ಎಂದರು.

‘ಫೂಟ್‌ಪ್ರಿಂಟ್ಸ್‌ ಆನ್ ದಿ ಸ್ಯಾಂಡ್ಸ್ ಆಫ್ ಟೈಮ್’ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಹೈದರಾಬಾದ್‌ನ ರಾಮಚಂದ್ರ ಮಿಷನ್‌ನ ಕಮಲೇಶ್ ಪಟೇಲ್(ದಾಜಿ), "ಭಾರತೀಯರಾದ ನಾವು ಮಾನವೀಯತೆ, ವಿನಯತೆಯನ್ನು ಎಂದಿಗೂ ಮರೆಯಬಾರದು. ದೇಶದ ಹಿತಕ್ಕಾಗಿ ಎಂಥಾ ತ್ಯಾಗವನ್ನಾದರೂ ಮಾಡಲು ಸಿದ್ಧವಿರಬೇಕು. ಆದರೆ, ದೇಶಕ್ಕೆ ಅಪಮಾನ ಮಾಡುವ ಶಕ್ತಿಗಳನ್ನು ಯಾವುದೇ ಕಾರಣಕ್ಕೂ ಸಹಿಸಬಾರದು" ಎಂದು ಹೇಳಿದರು.

ಇದಾದ ಬಳಿಕ ಎಸಿಪಿಆರ್ ಆವರಣದಲ್ಲಿ ಮೋಹನ್ ಭಾಗವತ್ ಮತ್ತು ಕಮಲೇಶ ಪಟೇಲ್ ಸಸಿ ನೆಟ್ಟರು. ಎಸಿಪಿಆರ್‌ ಅಧ್ಯಕ್ಷ ಅಶೋಕ ಪೋತದಾರ, ಕಾರ್ಯದರ್ಶಿ ಎಂ.ಬಿ.ಝಿರಲಿ ಸೇರಿದಂತೆ ಮತ್ತಿತರರು ಇದ್ದರು. ಇದಕ್ಕೂ ಮುನ್ನ, ಆರತಿ ಪೂಜೆ ಮತ್ತು ಭಜನಾ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ: ಅಲೌಕಿಕ ಶಕ್ತಿಗಳೊಂದಿಗೆ '​ದೇವ'ರಾಗಲು ಬಯಸುವ ಮನುಷ್ಯ - ಭಾಗವತ್; ಇದು ಮೋದಿಯತ್ತ ಅಗ್ನಿ ಕ್ಷಿಪಣಿ ಎಂದ ಕಾಂಗ್ರೆಸ್​ - Mohan Bhagwat

Last Updated : Aug 1, 2024, 5:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.