ETV Bharat / state

ದಾಖಲೆ ಇಲ್ಲದೇ ಹಣ ಸಾಗಣೆ: ಸುಳ್ಳದ ರೋಡ್ ಕ್ರಾಸ್ ಚೆಕ್​ಪೋಸ್ಟ್​ನಲ್ಲಿ₹ 3,82,000 ವಶಕ್ಕೆ - Money seize in sullada road cross

ಹುಬ್ಬಳ್ಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಹಣ ವಶಕ್ಕೆ ಪಡೆಯಲಾಗಿದೆ.

money  seize
ದಾಖಲೆ ಇಲ್ಲದ ಹಣ ವಶ
author img

By ETV Bharat Karnataka Team

Published : Mar 18, 2024, 10:01 PM IST

ಸುಳ್ಳದ ರೋಡ್ ಕ್ರಾಸ್ ಚೆಕ್​ಪೋಸ್ಟ್​ನಲ್ಲಿ 3,82,000 ಹಣ ವಶ

ಹುಬ್ಬಳ್ಳಿ : ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ‌ ಹಣವನ್ನು ಸುಳ್ಳದ ರೋಡ್ ಕ್ರಾಸ್ ಚೆಕ್​ಪೋಸ್ಟ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ, ಎಸ್​ಎಸ್​ಟಿ ಹಾಗೂ ಎಫ್​ಎಸ್​ಟಿ 3ರ ನಾಗಾ ನಾಯ್ಕ, ಪೊಲೀಸ್ ಸಿಬ್ಬಂದಿಯೊಂದಿಗೆ ತಡೆದು ತಪಾಸಣೆ ಮಾಡಿದಾಗ ಕಾರಿನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇರದ 3,82,000 ರೂಪಾಯಿ ನಗದು ಇರುವುದು ಕಂಡುಬಂದಿದೆ.

ನಿಯಮಾನುಸಾರ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ - ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೊಲೀಸ್ ಇನ್ಸ್​ಪೆಕ್ಟರ್​ ಕಿರಣ್ ಕುಮಾರ್​, ಎ.ಎಸ್.ಐ ಆರ್ ಜಿ ನಾಯ್ಕ, ಎಎಸ್​ಐಜಿಸಿ ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ಖಜಾನೆಯಲ್ಲಿ ಡಿಪಾಜಿಟ್ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ದಾಖಲೆ ಇಲ್ಲದೇ ಹಣ ಸಾಗಾಟ.. 11 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ ವಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.