ETV Bharat / state

ದಕ್ಷಿಣ ಕನ್ನಡ: ಖೋಟಾ ನೋಟು ಪ್ರಕರಣದ ಆರೋಪಿಗಳಿಂದ ಮತ್ತಷ್ಟು ಮಾಹಿತಿ, ಲಕ್ಷಾಂತರ ರೂ. ಮೌಲ್ಯದ ಹಣ ಜಪ್ತಿ - Fake Note

ಖೋಟಾ ನೋಟು ಪ್ರಕರಣದಲ್ಲಿ ಜೈಲಿನಲ್ಲಿರುವ ಆರೋಪಿಗಳನ್ನು ಮತ್ತಷ್ಟು ತನಿಖೆಗೆ ಒಳಪಡಿಸಿದಾಗ ಮತ್ತೆ ಲಕ್ಷಾಂತರ ರೂ. ಖೋಟಾ ನೋಟು ದೊರಕಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ.

ಜಪ್ತಿ ಖೋಟಾ ಹಣ ಹಾಗೂ ಆರೋಪಿಗಳು
ಜಪ್ತಿ ಖೋಟಾ ಹಣ ಹಾಗೂ ಆರೋಪಿಗಳು (ETV Bharat)
author img

By ETV Bharat Karnataka Team

Published : May 19, 2024, 10:52 AM IST

ಬಂಟ್ವಾಳ(ದಕ್ಷಿಣ ಕನ್ನಡ): ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಬಂದು ಖೋಟಾ ನೋಟುಗಳನ್ನು ಅಸಲಿ ನೋಟುಗಳಾಗಿ ಪರಿವರ್ತಿಸುವ ಸಮಯದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಆರೋಪಿಗಳಿಂದ ಇದೀಗ ಮತ್ತೆ ಲಕ್ಷಾಂತರ ರೂ. ಹಣವನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಖೋಟಾ ನೋಟು ಜಾಲದ ಪತ್ತೆಗಾಗಿ ಪೊಲೀಸ್ ತಂಡ ಕೇರಳಕ್ಕೆ ತೆರಳಿದೆ.

ಕೇರಳ ರಾಜ್ಯದ ಕಾಸರಗೋಡು ತಾಲೂಕು ಕೂಡ್ಲು ಗ್ರಾಮದ ಚೂರಿ ಎಂಬಲ್ಲಿನ ಮೊಹಮ್ಮದ್​ ಸಿ.ಎ. ಹಾಗೂ ಕಮರುನ್ನೀಸಾ ಎಂಬವರನ್ನು ಕಳೆದ ಮೂರು ನಾಲ್ಕು ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು. ಆರೋಪಿಗಳು ವಿನಿಮಯಕ್ಕಾಗಿ ಸ್ವಾಧೀನದಲ್ಲಿಟ್ಟುಕೊಂಡಿದ್ದ 23 ಸಾವಿರ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದರು.

ಬಂಟ್ವಾಳ ನಗರ ಠಾಣಾ ಪೊಲೀಸರು ಮೇ 10 ರಂದು ಕೇರಳ ರಾಜ್ಯದ ಕಾಸರಗೋಡು ತಾಲೂಕು ಕೂಡ್ಲು ಗ್ರಾಮದ ಚೂರಿ ಎಂಬಲ್ಲಿನ ಮೊಹಮ್ಮದ್​ ಸಿ. ಎ. ಹಾಗೂ ಕಮರುನ್ನೀಸಾ ಎಂಬವರು KL 14-T-777ನೇ ಕಾರಿನಲ್ಲಿ ಸ್ವಾಧೀನದಲ್ಲಿಟ್ಟುಕೊಂಡಿದ್ದ 500/- ರೂಪಾಯಿ ಮುಖಬೆಲೆಯ 46 ನೋಟುಗಳು ಸೇರಿ ಒಟ್ಟು 23 ಸಾವಿರ ಹಣವನ್ನು ಸ್ವಾಧೀನಪಡಿಸಿಕೊಂಡು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದರು.

ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆದರೆ, ಆರೋಪಿಗಳನ್ನು ಹೆಚ್ಚಿನ ತನಿಖೆ ನಡೆಸುವ ಉದ್ದೇಶದಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ನಡೆಸಿದ್ದರು. ಆರೋಪಿಗಳು ಅಸಲಿ ನೋಟುಗಳನ್ನಾಗಿ ಮಾಡಲು ಕೇರಳದಲ್ಲಿ ಸ್ವಾಧೀನದಲ್ಲಿಟ್ಟುಕೊಂಡಿದ್ದ ಒಟ್ಟು 2,30,000/- ರೂಪಾಯಿ ಮೌಲ್ಯದ 500/- ರೂಪಾಯಿಯ 460 ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಬಂಧಿಸಿದ ದಿನ ವಶಪಡಿಸಿಕೊಂಡ 23 ಸಾವಿರ ರೂ. ಹೀಗೆ ಒಟ್ಟು 2,53,000/- ರೂಪಾಯಿ ಮೌಲ್ಯದ 500/- ರೂಪಾಯಿ ಮುಖಬೆಲೆಯ 506 ಖೋಟಾ ನೋಟುಗಳನ್ನು ಹಾಗೂ 6 ಲಕ್ಷ ಮೌಲ್ಯದ ಕಾರನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಮತ್ತು ರಾಜೇಂದ್ರ ಕೆ.ವಿ., ಬಂಟ್ವಾಳ ಉಪಾಧೀಕ್ಷಕ ವಿಜಯ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ಹಾಗೂ ರಾಮಕೃಷ್ಣ, ಸಿಬ್ಬಂದಿಗಳಾದ ರಾಜೇಶ್ ಎಸ್, ಇರ್ಷಾದ್ ಪಿ, ಮನೋಹರ, ಗಣೇಶ್, ಮೋಹನ್, ಬಸವರಾಜ್ ಕಮ್ಮಾರ್, ರಂಗನಾಥ್, ಕುಮಾರಿ ಅರ್ಪಿತಾ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು.

ಇದನ್ನೂ ಓದಿ: 15 ಲಕ್ಷ ಮೌಲ್ಯದ ಕೃಷಿ ಉಪಕರಣ ಕಳವು ಪ್ರಕರಣ: ಮೂವರು ಅಪ್ರಾಪ್ತರು ಪರಿವೀಕ್ಷಣಾಲಯಕ್ಕೆ - DAVANAGERE CRIME

ETV Bharat Logo

Copyright © 2024 Ushodaya Enterprises Pvt. Ltd., All Rights Reserved.