ETV Bharat / state

ಶಿವಮೊಗ್ಗ: ಮಂಗನ ಕಾಯಿಲೆ ತಡೆಗೆ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಆಯುಕ್ತರ ಸೂಚನೆ - ಶಿವಮೊಗ್ಗ

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡ ಹಾಗು ಚಿಕ್ಕಮಗಳೂರಿನಲ್ಲಿ ಮಂಗನ‌ ಕಾಯಿಲೆ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಅಧಿಕಾರಿಗಳಿಗೆ​ ಸೂಚಿಸಿದ್ದಾರೆ.

shivamogga
ಡಿಹೆಚ್​ಒ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಸಂದರ್ಭದ ಚಿತ್ರ
author img

By ETV Bharat Karnataka Team

Published : Feb 4, 2024, 8:58 AM IST

Updated : Feb 4, 2024, 2:11 PM IST

ಮಂಗನ ಕಾಯಿಲೆ ತಡೆಗೆ ಸಭೆ

ಶಿವಮೊಗ್ಗ: ಮಂಗನ ಕಾಯಿಲೆ(ಕೆಎಫ್​ಡಿ) ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರದಂಥ ಪ್ರಕರಣಗಳು ಕಂಡುಬಂದ ತಕ್ಷಣ ಕೆಎಫ್​ಡಿ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್​ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗನ‌ ಕಾಯಿಲೆ ಕುರಿತು ಶನಿವಾರ ಇಲ್ಲಿನ ಡಿಹೆಚ್​ಒ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳ ಪ್ರಗತಿ‌ ಪರಿಶೀಲನಾ ಸಭೆ ನಡೆಯಿತು. ನಂತರ ಮಾತನಾಡಿದ ಆಯುಕ್ತರು, "ವಾಡಿಕೆಯಂತೆ ಈ ವರ್ಷವೂ ಮೂರು ಜಿಲ್ಲೆಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಜ.1ರಿಂದ ಫೆ.2ರವರೆಗೆ ರಾಜ್ಯದಲ್ಲಿ ಒಟ್ಟು 2,288 ಕೆಎಫ್​ಡಿ ಪರೀಕ್ಷೆ ನಡೆಸಲಾಗಿದೆ. ಶಿವಮೊಗ್ಗದಲ್ಲಿ 12, ಉತ್ತರ ಕನ್ನಡ 34 ಹಾಗು ಚಿಕ್ಕಮಗಳೂರಿನಲ್ಲಿ 3 ಸೇರಿ ಒಟ್ಟು 49 ಪಾಸಿಟಿವ್​ ಪ್ರಕರಣ ವರದಿಯಾಗಿವೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಂದು ಸಾವು ಸಂಭವಿಸಿದೆ" ಎಂಬ ಮಾಹಿತಿ ನೀಡಿದರು.

"ಕೆಎಫ್​ಡಿ ಪಾಸಿಟಿವ್​ ಪ್ರಕರಣ ಪತ್ತೆಯಾದ ತಕ್ಷಣ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಬೇಕು. ರೋಗ ಪ್ರಸರಣ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್​ವರೆಗೆ ಇರುತ್ತದೆ. ತಾಲೂಕು ಆಸ್ಪತ್ರೆಗಳಾದ ತೀರ್ಥ ಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿರಿಸಬೇಕು. ಅಗತ್ಯ ಔಷಧಿಗಳ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು" ಎಂದರು.

ಸೋಂಕಿತರಿಗೆ ಎಬಿಎಆರ್​ಕೆ ಅಡಿ ರೆಫರ್​​ ಮಾಡಿ ಉಚಿತ ಚಿಕಿತ್ಸೆ ಕೊಡಿಸಬೇಕೆಂದು ವೈದ್ಯರಿಗೆ ಸೂಚಿಸಿದರಲ್ಲದೆ, ಜನರಿಗೆ ಕಾಯಿಲೆ ಕುರಿತು ಅರಿವು ಹೆಚ್ಚಿಸಲು‌ ಮಾಹಿತಿ, ಶಿಕ್ಷಣ ಸಂವಹನ ಚಟುವಟಿಕೆಗಳನ್ನು ನಡೆಸುವಂತೆ ಸೂಚನೆ ನೀಡಿದರು.

ಮಂಗನ ಕಾಯಿಲೆ ವೈರಾಣು ಸೋಂಕಿತ ಉಣ್ಣಿ ಕಚ್ಚುವುದರಿಂದ ಹರಡುವ ವೈರಲ್​ ಜ್ವರ. ಜನರು‌ ಕಾಡಿಗೆ ಹೋಗುವ ಮುನ್ನ ಸರ್ಕಾರದ ವತಿಯಿಂದ ನೀಡಲಾಗುವ ಡಿಇಪಿಎ ತೈಲ ಲೇಪಿಸಿಕೊಂಡು ಹೋಗಬೇಕು. ಪ್ರಸ್ತುತ ಜಿಲ್ಲೆಯಲ್ಲಿ 50 ಸಾವಿರ ಬಾಟಲ್​ ಲಭ್ಯವಿದೆ.‌ ವಿತರಕರ ಬಳಿ ಇರುವುದು‌ ಸೇರಿ ಒಟ್ಟು 80 ಸಾವಿರ ದಾಸ್ತಾನಿದೆ. ಒಂದು ಕುಟುಂಬಕ್ಕೆ ತಿಂಗಳಿಗೆ 4 ಬಾಟಲಿಯಂತೆ 4-5 ತಿಂಗಳಿಗೆ ನೀಡುವಂತೆ ಅವರು ತಿಳಿಸಿದರು.

"ಟೆಲಿ ಐಸಿಯು ವ್ಯವಸ್ಥೆಯಲ್ಲಿ ತಜ್ಞ ವೈದ್ಯರ ತಂಡವಿದ್ದು ಶೀಘ್ರದಲ್ಲೇ ಅದರ ಉಪಯೋಗವನ್ನು ಈ ಕಾಯಿಲೆಗೂ ನೀಡಲಾಗುವುದು. ಕೆಎಫ್​ಡಿ ಹೊಸ ಲಸಿಕೆ ಪ್ರಕ್ರಿಯೆಯಲ್ಲಿದ್ದು ಮುಂದಿನ ಅವಧಿಗೆ ಲಭ್ಯವಾಗುವ ಸಾಧ್ಯತೆ ಇದೆ" ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಪುಷ್ಪಲತಾ, ಸಿಎಂಡಿ‌ ಜಂಟಿ ನಿರ್ದೇಶಕರಾದ ಡಾ.ತ್ರಿವೇಣಿ, ವಿಡಿಎಲ್​ ಉಪ ನಿರ್ದೇಶಕ ಡಾ.ರಘುನಂದನ್, ಡಿಹೆಚ್ಒ ಡಾ.ರಾಜೇಶ್ ಸುರಗಿಹಳ್ಳಿ, ವಿಡಿಎಲ್ ಡಿಸಿಎಂಒ, ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಭೀತಿ: 21 ಮಂದಿಯಲ್ಲಿ ಸೋಂಕು ಪತ್ತೆ

Last Updated : Feb 4, 2024, 2:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.