ETV Bharat / state

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - HEAVY RAIN ALERT - HEAVY RAIN ALERT

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

MONSOON EFFECT  HEAVY RAIN IN KARNATAKA  BENGALURU  COASTAL DISTRICTS
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (ETV Bharat)
author img

By ETV Bharat Karnataka Team

Published : Jun 17, 2024, 5:11 PM IST

Updated : Jun 17, 2024, 5:47 PM IST

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಕ್ಷೀಣಗೊಂಡಿತ್ತು. ಈಗ ಮತ್ತೆ ಮಾರುತಗಳು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್​ 21, 22, 23 ರಂದು ಕೂಡ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮತ್ತೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಅಲ್ಲಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 9 ಸೆಂಟಿ ಮೀಟರ್​ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೇಸೊಪ್ಪದಲ್ಲಿ, ಗೋಕರ್ಣ ಮತ್ತು ಅಂಕೋಲಾದಲ್ಲಿ ಮತ್ತು ಗದಗದಲ್ಲಿ ತಲಾ 5 ಸೆಂ.ಮೀ ಮಳೆ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿ, ಹಳಿಯಾಳ, ಶಿರಾಲಿ, ಬೆಳಗಾವಿ ಜಿಲ್ಲೆಯ ಸಂಕೇಶ್ವರ, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನೈಋತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿದ್ದು ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ನಿನ್ನೆ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.

ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: ಬಿತ್ತನೆ ಕಾರ್ಯ ಚುರುಕು! - Farmers preparing for sowing

Last Updated : Jun 17, 2024, 5:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.