ETV Bharat / state

ಜೂನ್ 6ಕ್ಕೆ ಕರ್ನಾಟಕಕ್ಕೆ ಮುಂಗಾರು ಎಂಟ್ರಿ: ಈ ಬಾರಿ ರಾಜ್ಯದಲ್ಲಿ ಹೇಗಿರಲಿದೆ ಮಳೆ? - KARNATAKA RAIN FORECAST

ರಾಜ್ಯದಲ್ಲಿ ಮುಂಗಾರು ಮಳೆ ಜೂನ್ 6 ಅಥವಾ 7ರಂದು ಪ್ರಾರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

monsoon
ಮುಂಗಾರು ಮಾರುತ (ETV Bharat)
author img

By ETV Bharat Karnataka Team

Published : May 29, 2024, 5:03 PM IST

Updated : May 29, 2024, 7:39 PM IST

ಬೆಂಗಳೂರು : ಮುಂಗಾರು ಮಾರುತಗಳು ಕೇರಳ ಕರಾವಳಿಗೆ ಲಗ್ಗೆ ಇಟ್ಟಿದ್ದು, ಅಲ್ಲಿ ಭಾರಿ ವರ್ಷಧಾರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಪ್ರತಿ ವರ್ಷದಂತೆ ರಾಜ್ಯದಲ್ಲಿ ಮುಂಗಾರು ಮಳೆ ಜೂನ್ 6 ಅಥವಾ 7 ರಂದು ಪ್ರಾರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಏಳು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಪೂರ್ವ ಮುಂಗಾರು ಮಳೆಯಾಗಲಿದೆ. ಹಾಸನ, ಕೊಡಗು, ಮೈಸೂರು, ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಮೇಲ್ಮೈ ಮಾರುತಗಳ ಪರಿಣಾಮ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಉಳಿದಂತೆ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ 30 ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಂತರ ರಾಜ್ಯಾದ್ಯಂತ 2 ರಿಂದ 3 ಡಿಗ್ರಿ ಕ್ರಮೇಣ ಕುಸಿಯಲಿದೆ ಎಂದು ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲ್ಮೈ ಗಾಳಿ ಪ್ರಬಲವಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿಗ್ರಿ ಮತ್ತು 22 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

''ಮುಂದಿನ 24 ಗಂಟೆಗಳ ಅವಧಿಯಲ್ಲಿ ಕೇರಳದ ಮೇಲೆ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗಿವೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳಿಗೆ ಮಾರುತಗಳು ಮತ್ತಷ್ಟು ಹೆಚ್ಚಾಗುತ್ತಿವೆ. ಲಕ್ಷದ್ವೀಪ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗ ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾದ ಸಮಯದಲ್ಲಿ ಪ್ರಾರಂಭವಾಗಲಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್ ಪುವಿಯರಸನ್ ಹೇಳಿದ್ದಾರೆ.

ರಾಜ್ಯದಲ್ಲಿ ಉತ್ತಮ ಪೂರ್ವ ಮುಂಗಾರು ಮಳೆ: ಈ ಬಾರಿ ವಾಡಿಕೆಗಿಂತ ಹೆಚ್ಚು ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಆಗಿದೆ. ಮಾರ್ಚ್ 1 ರಿಂದ ಮೇ ಅಂತ್ಯದವರೆಗೆ ಹಲವು ಕಡೆ ವಾಡಿಕೆಯ ಶೇಕಡಾ 50 ಕ್ಕಿಂತ ಹೆಚ್ಚು ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅತಿ ಹೆಚ್ಚು ಮಂಗಳೂರಿನ ಪಣಂಬೂರಿನಲ್ಲಿ 366 ಎಂ. ಎಂ, ಚಿಕ್ಕಮಗಳೂರಿನಲ್ಲಿ 363 ಎಂ. ಎಂ ದಾಖಲೆ ಮಳೆ ಸುರಿದಿದೆ. ನಂತರದ ಸ್ಥಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಪ್ರದೇಶ 282 ಎಂ. ಎಂ ಮತ್ತು ಆಗುಂಬೆ 279 ಎಂ.ಎಂ ದಾಖಲಿಸಿವೆ. ಕಾರವಾರ ಮತ್ತು ಕೊಪ್ಪಳದಲ್ಲಿ ಅತಿ ಕಡಿಮೆ ಮಳೆ ಸುರಿದಿದೆ.

ಬೆಂಗಳೂರು ಜಿಲ್ಲೆಯ ವ್ಯಾಪ್ತಿಯಲ್ಲೂ ಪೂರ್ವ ಮುಂಗಾರು ಉತ್ತಮವಾಗಿದೆ. ಬೆಂಗಳೂರು ನಗರದಲ್ಲಿ ಪೂರ್ವ ಮುಂಗಾರು ಮಳೆ 181 ಎಂ. ಎಂ ದಾಖಲಾಗಿದೆ. ಹೆಚ್.ಎ.ಎಲ್ ವಿಮಾನ ನಿಲ್ದಾಣದ ಸುತ್ತಮುತ್ತ 157 ಎಂ. ಎಂ ಮತ್ತು ಜಿಕೆವಿಕೆ ಸುತ್ತಲೂ 191 ಎಂ. ಎಂ ಮಳೆ ಸುರಿದಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಇನ್ನೂ ಏಳು ದಿನಗಳ ಕಾಲ ಮುಂದುವರಿಯಲಿದೆ ಪೂರ್ವ ಮುಂಗಾರು ಮಳೆ: ಎಲ್ಲೆಲ್ಲಿ ಆಗಲಿದೆ ರೇನ್​! - Karnataka Rain Forecast

Last Updated : May 29, 2024, 7:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.