ETV Bharat / state

ದಸರಾ ರಜೆ: ಕೆಎಸ್ಆರ್​ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ - Special Buses For Dasara

ದಸರಾ ಹಬ್ಬದ ರಜೆ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ 2000ಕ್ಕೂ ಹೆಚ್ಚು ವಿಶೇಷ ಬಸ್‌ಗಳ​ ವ್ಯವಸ್ಥೆ ಮಾಡಿದೆ.

ksrtc
ಕೆಎಸ್​ಆರ್​ಟಿಸಿ (ETV Bharat)
author img

By ETV Bharat Karnataka Team

Published : Oct 4, 2024, 7:44 PM IST

ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮ, ಪ್ರಸ್ತುತ ಕಾರ್ಯಾಚರಿಸುತ್ತಿರುವ ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ.

09/10/2024 ರಿಂದ 12/10/2024ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಈ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ನಂತರ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 13/10/2024ರಿಂದ 14/10/2024ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್. ಡಿ ಕೋಟೆ, ಚಾಮರಾಜನಗರ, ಹುಣಸೂರು. ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಪ್ಲೈ ಬಸ್ (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ..:

ಅ) ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ: ರೂ. 400/- ಮತ್ತು ಮಕ್ಕಳಿಗೆ : ರೂ. 250/)

ಆ) ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ. ಆರ್. ಎಸ್ (ಪ್ರಯಾಣ ದರ ವಯಸ್ಕರಿಗೆ: ರೂ. 450/- ಮತ್ತು ಮಕ್ಕಳಿಗೆ : ರೂ.300/)

ಇ) ದೇವದರ್ಶಿನಿ : ನಂಜನಗೂಡು, ಬಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ : ರೂ. 300/-ಮತ್ತು ಮಕ್ಕಳಿಗೆ : ರೂ. 200/-)

ಈ ಪ್ಯಾಕೇಜ್‌ಗಳನ್ನು ದಿನಾಂಕ 03/10/2024 ರಿಂದ 15/10/2024 ಅವಧಿಯಲ್ಲಿ ಕಾರ್ಯಾಚರಿಸಲಾಗುವುದು. ಈ ಪ್ಯಾಕೇಜ್ ಸಾರಿಗೆಗಳು ಬೆಳಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ. ಇ-ಟಿಕೇಟ್ ಬುಕಿಂಗ್​ನ್ನು www.ksrtc.karnataka.gov.in ವೆಬ್​ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು ಎಂದು ತಿಳಿಸಿದೆ.

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು 694 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್​ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಿದ್ದು, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣ 2/4 ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ದಸರಾ ದರ್ಶಿನಿ: ಮಂಗಳೂರು KSRTC ಟೂರ್​ ಪ್ಯಾಕೇಜ್​ಗೆ ಜನರಿಂದ ಭಾರಿ ಮೆಚ್ಚುಗೆ - Dasara Darshini Tour Package

ETV Bharat Logo

Copyright © 2024 Ushodaya Enterprises Pvt. Ltd., All Rights Reserved.