ETV Bharat / state

ಬುಡಕಟ್ಟು ಜನರಿಗಾಗಿ ಪ್ರಧಾನಿಯಿಂದ 6 ಸಾವಿರ ಕೋಟಿ ರೂ.ಗಳ ಕಾರ್ಯಕ್ರಮ ಘೋಷಣೆ: ಸಚಿವ ಹೆಚ್​ಡಿಕೆ ಹೇಳಿಕೆ - JANJATIYA GAURAV DIVAS

ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಸುಮಾರು ₹6,650 ಕೋಟಿ ಮೊತ್ತದ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಘೋಷಣೆ ಮಾಡಿದ್ದಾರೆ ಎಂದು ಹೆಚ್​ಡಿಕೆ ತಿಳಿಸಿದ್ದಾರೆ.

ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನ ಕಾರ್ಯಕ್ರಮ
ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನ ಕಾರ್ಯಕ್ರಮ (ETV Bharat)
author img

By ETV Bharat Karnataka Team

Published : Nov 15, 2024, 5:28 PM IST

ಮೈಸೂರು: "ಬುಡಕಟ್ಟು ಜನರ ಕಲ್ಯಾಣ, ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರಕಾರ ಕಟಿಬದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ದಿನ ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಸುಮಾರು ₹6,650 ಕೋಟಿ ಮೊತ್ತದ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ" ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಜಮುಯಿ​ನಿಂದ ಮಾತನಾಡಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೈಸೂರಿನಿಂದ ಪಾಲ್ಗೊಂಡಿದ್ದರು.

ಬುಡಕಟ್ಟು ಜನರಿಗಾಗಿ ಪ್ರಧಾನಿಯಿಂದ 6 ಸಾವಿರಕ್ಕೂ ಅಧಿಕ ಕೋಟಿ ಕಾರ್ಯಕ್ರಮ ಘೋಷಣೆ
ಬುಡಕಟ್ಟು ಜನರಿಗಾಗಿ ಪ್ರಧಾನಿಯಿಂದ 6 ಸಾವಿರಕ್ಕೂ ಅಧಿಕ ಕೋಟಿ ಕಾರ್ಯಕ್ರಮ ಘೋಷಣೆ (ETV Bharat)

"ಶಿಕ್ಷಣ, ವಸತಿ, ಆರೋಗ್ಯ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಿ ಬುಡಕಟ್ಟು ಸಮುದಾಯಗಳ ಹಾಡಿಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರಧಾನಿಗಳು ಇಷ್ಟು ಬೃಹತ್ ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳನ್ನು ಬುಡಕಟ್ಟು ಜನರು ಅತ್ಯಂತ ಉತ್ತಮವಾಗಿ ಬಳಕೆ ಮಾಡಿಕೊಳ್ಳಬೇಕು" ಎಂದು ಅವರು ಕರೆ ನೀಡಿದರು.

"ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರಬೇಕು ಎನ್ನುವ ಮಹಾ ಸಂಕಲ್ಪದೊಂದಿಗೆ ಪ್ರಧಾನಿಗಳು ಕೆಲಸ ಮಾಡುತ್ತಿದ್ದಾರೆ. ಕೇವಲ ನೂರೇ ಜನರು ವಾಸವಿದ್ದರೂ ಅಂಥ ಹಾಡಿಗಳಿಗೆ ನೇರ ರಸ್ತೆ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ. ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ, ಟೆಲಿಕಾಂ ಸಂಪರ್ಕ, ಮಕ್ಕಳು ಮಹಿಳೆಯರಿಗೆ ಪೌಷ್ಟಿಕ ಆಹಾರ ಪೂರೈಕೆ, ಮೊಬೈಲ್ ಮೆಡಿಕಲ್ ಸೆಂಟರ್​ಗಳು, ಅಂಗನವಾಡಿ ಕೇಂದ್ರಗಳ ಸ್ಥಾಪನೆ ಹಾಗೂ ಏಕಲವ್ಯ ಮಾದರಿ ಶಾಲೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸ್ಥಾಪನೆ ಮಾಡಿ ಬುಡಕಟ್ಟು ಜನರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಇದನ್ನು ಮೋದಿ ಅವರು ಇನ್ನೂ ದೊಡ್ಡ ಪ್ರಮಾಣದಲ್ಲಿ ಮುಂದುವರಿಸಿಕೊಂಡು ಹೋಗಲು ನಿರ್ಧರಿಸಿದ್ದಾರೆ" ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಧಿಕಾರಿಗಳಿಗೆ ಸಚಿವರ ಸೂಚನೆ: "ಅರಣ್ಯದಲ್ಲಿ ಅಥವಾ ಅರಣ್ಯದ ಅಂಚಿನಲ್ಲಿ ವಾಸ ಮಾಡುವ ಬುಡಕಟ್ಟು ಜನರಿಗೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು ಹಾಗೂ ಆ ಬಗ್ಗೆ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅವರು ವಾಸ ಮಾಡುವ ಹಾಡಿಗಳಿಗೆ ಭೇಟಿ ಕೊಡಬೇಕು. ಕೊನೆಯ ಪಕ್ಷ ವಾರಕ್ಕೆ ಒಮ್ಮೆ ಅಥವಾ ಹದಿನೈದು ದಿನಕ್ಕೆ ಒಮ್ಮೆ ಭೇಟಿ ಕೊಟ್ಟರೆ ಅವರಿಗೆ ಹೆಚ್ಚು ಅನುಕೂಲ ಆಗುತ್ತದೆ" ಎಂದು ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಅಲ್ಲದೇ "ಜನರ ಜತೆ ಬೆರೆಯಬೇಕು. ಮೋದಿ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಅವರಿಗೆ ಮುಟ್ಟಿಸಬೇಕು" ಎಂದು ಅವರು ಹೇಳಿದರು.

"ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಬುಡಕಟ್ಟು ಸಮುದಾಯಗಳ ಹಾಡಿಗಳಿಗೆ ಭೇಟಿ ನೀಡಿದ್ದೆ. ಅವರ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದೆ. ಅವರ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಈ ಅನುಭವದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಈ ಮಾತು ಹೇಳುತ್ತಿದ್ದೇನೆ" ಎಂದು ಅವರು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಾಸಕ ಶ್ರೀವತ್ಸ, ವಿಧಾನ ಪರಿಷತ್​ ಸದಸ್ಯ ಸಿ.ಎನ್. ಮಂಜೇಗೌಡ ಹಾಗೂ ಕೇಂದ್ರ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿ ಕುಮಾರ್ ಮುಂತಾದವರು ಸಭೆಯಲ್ಲಿದ್ದರು.

ಇದನ್ನೂ ಓದಿ: ಪ್ರಚೋದ‌ನಕಾರಿ ಹೇಳಿಕೆ: ಕೆ.ಎಸ್.ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.