ETV Bharat / state

ಅನಧಿಕೃತ ಫ್ಲೆಕ್ಸ್, ಬ್ಯಾನರ್ ವಿರುದ್ಧ ಬಿಬಿಎಂಪಿ ಸಮರ: 142 ಎಫ್‌ಐಆರ್‌ ದಾಖಲು, ಫ್ಲೆಕ್ಸ್‌ ಕಂಡ್ರೆ ಫೋಟೋ ಸಮೇತ ದೂರು ನೀಡಿ - unauthorized flex removed

author img

By ETV Bharat Karnataka Team

Published : Jul 22, 2024, 10:23 PM IST

ಅನಧಿಕೃತ ಫ್ಲೆಕ್ಸ್‌ಗಳ ವಿರುದ್ಧ ಬಿಬಿಎಂಪಿ ಸಮರ ಸಾರಿದೆ. ಇದುವರೆಗೂ 8,362 ಕ್ಕೂ ಅಧಿಕ ಫ್ಲೆಕ್ಸ್‌ ಬ್ಯಾನರ್‌ಗಳನ್ನು ತೆರವು ಮಾಡಿದೆ. ಸದ್ಯ ಫ್ಲೆಕ್ಸ್‌ ಕಂಡರೆ ದೂರು ನೀಡುವಂತೆ ಬಿಬಿಎಂಪಿ ಜನರಿಗೆ ಮನವಿ ಮಾಡಿದೆ.

ಅನಧಿಕೃತ ಫ್ಲೆಕ್ಸ್, ಬ್ಯಾನರ್ ವಿರುದ್ಧ ಬಿಬಿಎಂಪಿ ಸಮರ
ಅನಧಿಕೃತ ಫ್ಲೆಕ್ಸ್, ಬ್ಯಾನರ್ ವಿರುದ್ಧ ಬಿಬಿಎಂಪಿ ಸಮರ (ETV Bharat)

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದುವರೆಗೂ 8,362ಕ್ಕೂ ಅಧಿಕ ಫ್ಲೆಕ್ಸ್ ತೆರವುಗೊಳಿಸಿ 142 ಎಫ್‌ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್​​, ಬ್ಯಾನರ್‌ಗಳನ್ನು ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, 8,362ಕ್ಕೂ ಅಧಿಕ ಫ್ಲೆಕ್ಸ್​ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ 267 ದೂರುಗಳ ಪೈಕಿ 142 ಎಫ್‌ಐಆರ್​​ ದಾಖಲಾಗಿದೆ.

ಅನಧಿಕೃತ  ಫೆಕ್ಸ್‌ ಬ್ಯಾನರ್‌ಗಳನ್ನು ತೆರವು
ಅನಧಿಕೃತ ಫೆಕ್ಸ್‌ ಬ್ಯಾನರ್‌ಗಳನ್ನು ತೆರವು (ETV Bharat)

ನಗರದಲ್ಲಿ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳಿರದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲ ವಲಯದಲ್ಲೂ ಅನಧಿಕೃತ ಜಾಹೀರಾತುಗಳು ಇರದಂತೆ ನೋಡಿಕೊಳ್ಳಲು ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಹೇಳಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ವಲಯ ಹಿರಿಯ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿ ವರದಿ ಪಡೆಯುತ್ತಾರೆ. ಜೂನ್ 1 ರಿಂದ ಇದುವರೆಗೂ 8,362 ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ 267 ದೂರುಗಳನ್ನು ದಾಖಲಿಸಲಾಗಿದೆ. ಅದರ ಆಧಾರದಲ್ಲಿ 142 ಎಫ್‌ಐಆರ್‌ ದಾಖಲಾಗಿ 1 ಲಕ್ಷ 3 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದಿದ್ದಾರೆ.

ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಜಾಹೀರಾತುಗಳು ಅಳಡಿಸುವುದರಿಂದ ನಾಗರಿಕರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಎಲ್ಲೆಂದರಲ್ಲಿ ಜಾಹೀರಾತು ಫಲಕಗಳು ಅಳವಡಿಸುವುದರಿಂದ ಪ್ರಾಣ ಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಈ ಸಂಬಂಧ ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಗರದ ಪ್ರಮುಖ ರಸ್ತೆೆಗಳ ಬದಿ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯಗಳ ಫ್ಲೆಕ್ಸ್ ಗಳನ್ನು ಹೆಚ್ಚು ಅಳವಡಿಸಲಾಗುತ್ತಿದೆ. ಈ ಸಂಬಂಧ ಯಾವುದೇ ಶುಭಾಶಯಗಳ ಕುರಿತ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸದಂತೆ ನಾಗರಿಕರಿಗೆ ಸೂಚನೆ ನೀಡಲಾಗುತ್ತಿದೆ, ರಸ್ತೆ ಬದಿ, ಪಾದಚಾರಿ ಮಾರ್ಗ, ಜಂಕ್ಷನ್ ಗಳು, ಮೇಲ್ಸೇತುವೆಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಗರದಲ್ಲಿ ಅನಧಿಕೃತ ಜಾಹೀರಾತುಗಳ ತೆರವು ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ಸಹ ಪಾಲಿಕೆಯ ಜತೆ ಕೈ ಜೋಡಿಸಿ ಅನಧಿಕೃತ ಜಾಹೀರಾತುಗಳ ತೆರವು ಕಾರ್ಯಾಚರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ. ದೂರವಾಣಿ 1533ಗೆ ಕರೆ ಮಾಡಿ ಅಥವಾ ವಾಟ್ಸ್ ಆ್ಯಪ್​ ಸಂಖ್ಯೆ 9480683939 ಗೆ ಛಾಯಾಚಿತ್ರದ ಸಮೇತ ದೂರು ಸಾರ್ವಜನಿಕರು ದೂರು ನೀಡಿಬೇಕು ಎಂದು ಮನವಿ ಮಾಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆೆಯಾದ 1533 ಅಥವಾ ಜಾಹೀರಾತು ವಿಭಾಗದ ವಾಟ್ಸ್ ಆ್ಯಪ್ ಸಂಖ್ಯೆೆ 9480683939 ಗೆ ಛಾಯಾಚಿತ್ರ ಅಥವಾ ವಿಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮದ್ಯ ಸೇವನೆ, ವ್ಹೀಲಿಂಗ್, ಪದೇ ಪದೆ ಸಂಚಾರ ನಿಯಮ ಉಲ್ಲಂಘನೆ; ಈ ವರ್ಷ ರದ್ದಾದ ಡ್ರೈವಿಂಗ್ ಲೈಸೆನ್ಸ್ ಎಷ್ಟು? - driving licence cancelled

ETV Bharat Logo

Copyright © 2024 Ushodaya Enterprises Pvt. Ltd., All Rights Reserved.