ETV Bharat / state

ಪ್ರವಾಸೋದ್ಯಮ ಅಭಿವೃದ್ಧಿಗೆ ಸಾವಿರ ಕೋಟಿಗಿಂತ ಹೆಚ್ಚು ಅನುದಾನ: ಸಿಎಂ ಸಿದ್ದರಾಮಯ್ಯ - CM SIDDARAMAIAH

ಕರ್ನಾಟಕ ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಗುರುತಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

More than a thousand crores in grants for tourism development says cm siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Feb 26, 2025, 10:26 PM IST

ಬೆಂಗಳೂರು: ಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ-2024-2029 ಜಾರಿಗೆ ತರಲಾಗುತ್ತಿದೆ. ಇದರಿಂದ 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಪಾಲಿಸಿಯಿಂದ ಅನುಕೂಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ಸಂಜೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಎರಡನೇ ಆವೃತ್ತಿಯ "ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ-2025" ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸಾವಿರ ಕೋಟಿಗಿಂತ ಹೆಚ್ಚಿನ ಅನುದಾನ ಒದಗಿಸಲು ಯೋಜಿಸಲಾಗಿದೆ ಎಂದರು.

ಇಂದು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಕರ್ನಾಟಕ ಗುರುತಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಕರ್ನಾಟಕವನ್ನು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಗುರುತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬಂತೆ ರಾಜ್ಯ ಎಲ್ಲಾ ರೀತಿಯ ಪ್ರವಾಸಿ ತಾಣಗಳನ್ನು ಹೊಂದಿದೆ, ಹಲವು ಜಗತ್ತು ಒಂದು ರಾಜ್ಯ ನಮ್ಮದು ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.

ಕರ್ನಾಟಕದ ಕಾಡುಗಳು, ಐತಿಹಾಸಿಕ ತಾಣಗಳು, ಸಂಸ್ಕೃತಿ, ಕಲೆ, ಜನಪದ ಹೀಗೆ ರಾಜ್ಯದ ಪ್ರತಿಮೂಲೆ ಸಹ ಪ್ರವಾಸಿ ತಾಣವಾಗಿದೆ. ವಿಮಾನಯಾನ, ರಸ್ತೆ, ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ಪ್ರವಾಸಿತಾಣಗಳ ಅಭಿವೃದ್ಧಿಗಾಗಿ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯಕ್ಕೆ ಜಾಗತಿಕವಾಗಿ ಪ್ರವಾಸಿಗಳನ್ನು ಸೆಳೆಯಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ನಮ್ಮ ರಾಜ್ಯವು ನಾಲ್ಕು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳು, 35ಕ್ಕೂ ಹೆಚ್ಚು ರಾಷ್ಟ್ರೀಯ ಉದ್ಯಾನವನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳು, ಪ್ರಾಚೀನ ಗಿರಿಧಾಮಗಳು, ಆಧ್ಯಾತ್ಮಿಕ ಕೇಂದ್ರಗಳು, ಸಾಹಸ ತಾಣಗಳು ಮತ್ತು ದೇಶದ ಕೆಲವು ಅತ್ಯುತ್ತಮ ಸ್ವಾಸ್ಥ್ಯ ಹಿಮ್ಮೆಟ್ಟುವಿಕೆಗಳಿಗೆ ನೆಲೆಯಾಗಿದೆ. ಕರ್ನಾಟಕವು ಪ್ರಾಚೀನ ದೇವಾಲಯಗಳು, ಜೈನ ಬಸದಿಗಳು ಮತ್ತು ನಮ್ಮ ವೈವಿಧ್ಯಮಯ ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ಸೂಫಿ ದೇವಾಲಯಗಳಿಂದ ಆಶೀರ್ವದಿಸಲ್ಪಟ್ಟಿದೆ. ಪಶ್ಚಿಮ ಘಟ್ಟಗಳು ರೋಮಾಂಚನಕಾರಿ ತಪ್ಪಿಸಿಕೊಳ್ಳುವಿಕೆಯನ್ನು ಒದಗಿಸುತ್ತವೆ ಮತ್ತು ನಮ್ಮ ರೋಮಾಂಚಕ ಕರಾವಳಿಗಳು ಪ್ರಶಾಂತತೆ ಮತ್ತು ಜಲ ಕ್ರೀಡೆಗಳನ್ನು ಬಯಸುವವರನ್ನು ಸ್ವಾಗತಿಸುತ್ತವೆ. ಕರ್ನಾಟಕವು ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸತತವಾಗಿ ಸ್ಥಾನ ಪಡೆದಿದೆ ಎಂದು ಹೇಳಿದರು.

More than a thousand crores in grants for tourism development says cm siddaramaiah
ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ-2025 ಸಮಾವೇಶ (ETV Bharat)

ಪ್ರವಾಸೋದ್ಯಮ ಬೆಳವಣಿಗೆಗೆ ಖಾಸಗಿಯವರಿಗೆ ಬಂಡವಾಳ ಹೂಡಿಕೆಗೆ ಅಗತ್ಯವಾದ ಸಹಾಯವನ್ನು ನೀಡಲು ಸರ್ಕಾರ ಹರ್ಷಿಸುತ್ತದೆ, ಬಂಡವಾಳ ಹಾಗೂ ಮಾರುಕಟ್ಟೆ ವಿಸ್ತರಣೆ ಮೂಲಕ ರಾಜ್ಯವನ್ನು ದೇಶದ ಹಾಗೂ ಜಗತ್ತಿನ ಅತ್ಯುತ್ತಮ ಪ್ರವಾಸಿ ತಾಣವನ್ನಾಗಿ ಮಾಡಿ, ನಮ್ಮ ಕರ್ನಾಟಕ ನಮ್ಮ ಹೆಮ್ಮೆ ಎಂದು ಕರೆ ನೀಡಿದರು.

ಪ್ರವಾಸೋದ್ಯಮ ಸಚಿವ ಹೆಚ್‌.ಕೆ.ಪಾಟೀಲ್ ಮಾತನಾಡಿ, ಜಾಗತಿಕವಾಗಿ ಕರ್ನಾಟಕದ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಅವಕಾಶಕ್ಕಾಗಿ ಹೆಮ್ಮೆ ಎನಿಸುತ್ತದೆ. ಕರ್ನಾಟಕ ಸಾಂಸ್ಕೃತಿಕವಾಗಿ, ಐತಿಹಾಸಿಕ, ಪರಿಸರ ಸೇರಿದಂತೆ ಧಾರ್ಮಿಕವಾಗಿ ಸಹ ಅತಿ ಮುಖ್ಯವಾದ ಪ್ರವಾಸಿ ತಾಣಗಳನ್ನು ಹೊಂದಿದೆ ಎಂದು ಹೇಳಿದರು.

ಇಲ್ಲಿನ‌ ಜನಪದ ಕಲೆಗಳು ದೇಶದ್ಯಾಂತ ಹೆಸರುವಾಸಿಯಾಗಿದೆ. ಕರ್ನಾಟಕ ರಾಜ್ಯ ಅತ್ಯಂತ ಸಾಂಸ್ಕೃತಿಕವಾಗಿ ಶ್ರೀಮಂತ ಹಾಗೂ ಪ್ರಸ್ತುತ ಜಾಗತಿಕ ಬೆಳವಣಿಗೆಯಲ್ಲಿ ಗುರುತಿಸಿಕೊಂಡಿರುವ ರಾಜ್ಯವಾಗಿದೆ. ಶಕ್ತಿ ಯೋಜನೆಯಿಂದ ರಾಜ್ಯದ ಪ್ರವಾಸೋದ್ಯಮ ಬೆಳವಣಿಗೆಯಾಗಿದೆ. ಭವಿಷ್ಯದಲ್ಲಿ ಖಾಸಗಿಯವರ ಸಹಭಾಗಿತ್ವದಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ನಿರಂತರವಾಗಿದೆ. ರಾಜ್ಯದ ಐತಿಹಾಸಿಕ ಸ್ಥಳಗಳನ್ನು ಖಾಸಗಿಯವರು ಸಹ ದತ್ತು ಪಡೆಯುವ ಯೋಜನೆ ಯಶಸ್ವಿಯಾಗಿದೆ, ಇಲ್ಲಿಯವರೆಗೆ 20 ಸ್ಥಳಗಳನ್ನು ಖಾಸಗಿಯವರಿಗೆ ದತ್ತು ನೀಡಲಾಗಿದೆ ಎಂದು ವಿವರಿಸಿದರು.

ಪ್ರವಾಸೋದ್ಯಮ ರಾಜ್ಯದ ಮುಖ್ಯ ಆರ್ಥಿಕ ಶಕ್ತಿಯಲ್ಲಿ ಒಂದಾಗಿದೆ. ವಿವಿಧ ಪ್ರವಾಸೋದ್ಯಮ ಗಳನ್ನು ಪ್ರೋತ್ಸಾಹಿಸಲು ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗಿದೆ, ಇದರಲ್ಲಿ ಅನೇಕ ಹೊಸ ಪಾಲಿಸಿಗಳನ್ನು ಜಾರಿಗೆ ತರಲಾಗಿದೆ. ಪ್ರವಾಸೋದ್ಯಮ ಬೆಳವಣಿಗೆಗೆ ಸರ್ಕಾರ ಬದ್ದವಾಗಿದ್ದು, ರಾಜ್ಯದ ಪ್ರವಾಸೋದ್ಯಮ ವನ್ನು ಜಾಗತಿಕವಾಗಿ ಬೆಳೆಸಲು ಉದ್ದೇಶಿಸಲಾಗಿದೆ. ಇದಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅದರ ಪ್ರತಿಯಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಎನ್.ಎಸ್.ಬೋಸರಾಜು, ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ಸ್ಪಷ್ಟಪಡಿಸಲಿ- ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.