ETV Bharat / state

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: ಯಾವ ಭಾಗದಲ್ಲಿ ಎಷ್ಟು? ಬಿತ್ತನೆ ಸ್ಥಿತಿ ಹೇಗಿದೆ? - Karnataka Sowing Status - KARNATAKA SOWING STATUS

ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಶೇ 95ರಷ್ಟು ಬಿತ್ತನೆಯಾಗಿದೆ. ಇದರಿಂದಾಗಿ ಹೆಚ್ಚು ಆಹಾರ ಉತ್ಪಾದನೆ ನಿರೀಕ್ಷೆ ಇದೆ.

ಬಿತ್ತನೆ ಕಾರ್ಯ
ಬಿತ್ತನೆ ಕಾರ್ಯ (ಸಂಗ್ರಹ ಚಿತ್ರ ETV Bharat)
author img

By ETV Bharat Karnataka Team

Published : Sep 20, 2024, 12:28 PM IST

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದ ಕಾರಣ ಸುಮಾರು 70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಎಂಟು ಜಿಲ್ಲೆಗಳಲ್ಲಿ ಅಂದರೆ ಬೀದರ್, ಕಲಬುರಗಿ, ಬೆಳಗಾವಿ, ಗದಗ, ಕೊಪ್ಪಳ, ವಿಜಯನಗರ, ಧಾರವಾಡ ಹಾಗೂ ದಕ್ಷಿಣ ಕನ್ನಡದಲ್ಲಿ ಶೇ 100ರಷ್ಟು ಬಿತ್ತನೆ ಕೆಲಸ ಪೂರ್ಣಗೊಂಡಿದೆ. ಅದೇ ರೀತಿ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ, ಯಾದಗಿರಿ, ವಿಜಯಪುರ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶೇ.95 ಬಿತ್ತನೆಯಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅತಿ ಕಡಿಮೆ ಅಂದರೆ ಶೇ.60ರಷ್ಟು ಮಾತ್ರ ಬಿತ್ತನೆ ಕಾರ್ಯ ನಡೆದಿದೆ.

ಅಧಿಕ ಬಿತ್ತನೆ: 2024ರ ಅಗಸ್ಟ್ 30ರವರೆಗೆ 70 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಮೆಕ್ಕೆಜೋಳ, ಗೋಧಿ, ತೊಗರಿ, ಕಡಲೆ, ಹುರುಳಿ, ಉದ್ದು, ಹೆಸರು, ಅಲಸಂದೆ, ಅವರೆ, ಮಟಕಿ, ಶೇಂಗಾ, ಎಳ್ಳು, ಸೂರ್ಯಕಾಂತಿ, ಹರಳಿ, ಹುಚ್ಚೆಳ್ಳು, ಸೋಯಾ ಅವರೆ, ಅಗಸೆ, ಹತ್ತಿ, ಕಬ್ಬು ಮತ್ತು ತಂಬಾಕು ಬಿತ್ತನೆ ಮಾಡಲಾಗಿದೆ. ಇದರಿಂದಾಗಿ ಶೇ.94ರಷ್ಟು ಗುರಿ ಮುಟ್ಟಲಾಗಿದೆ.

2023ರ ಆ.30ರವರೆಗೆ 66 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 3.5 ಲಕ್ಷ ಹೆಕ್ಟೇರ್‌ಗಿಂತ ಅಧಿಕ ಪ್ರದೇಶಗಳಲ್ಲಿ ಬಿತ್ತನೆಯಾಗಿರುವುದು ಉತ್ತಮ ಬೆಳವಣಿಗೆ. 10.28 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಭತ್ತ, ಜೋಳ, ರಾಗಿ, ಮೆಕ್ಕೆಜೋಳ, ಸಜ್ಜೆ, ಗೋಧಿ ಸೇರಿ ಏಕದಳ ಧಾನ್ಯ ಬಿತ್ತನೆ ಮಾಡಿದರೆ, 11.48 ಲಕ್ಷ ಹೆಕ್ಟೇ‌ರ್ ಪ್ರದೇಶಗಳಲ್ಲಿ ತೊಗರಿ, ಕಡಲೆ, ಹುರುಳಿ, ಉದ್ದು, ಹೆಸರು, ಅಲಸಂದೆ, ಅವರೆ ಸೇರಿ ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡಲಾಗಿದೆ.

40 ಸಾವಿರ ಹೆಕ್ಟೇರ್‌ನಲ್ಲಿ ಶೇಂಗಾ, ಎಳ್ಳು, ಸೂರ್ಯಕಾಂತಿ, ಹರಳು, ಹುಚ್ಚೆಳ್ಳು, ಸಾಸಿವೆ, ಸೋಯಾ ಅವರೆ, ಕುಸುಬೆ, ಅಗಸೆ ಸೇರಿ ಇತರ ಎಣ್ಣೆಕಾಳುಗಳನ್ನು ಬಿತ್ತನೆ ಮಾಡಲಾಗಿದೆ. 8.57 ಲಕ್ಷ ಹೆಕ್ಟೇರ್‌ನಲ್ಲಿ ಹತ್ತಿ, ಕಬ್ಬು, ತಂಬಾಕು ಸೇರಿ ಇತರ ವಾಣಿಜ್ಯ ಬೆಳೆ ಬೆಳೆಯಲಾಗುತ್ತಿದೆ.

ವಾಡಿಕೆಗಿಂತ ಹೆಚ್ಚು ಮಳೆ: ಜೂನ್ 1ರಿಂದ ಸೆ.16ರವರೆಗೆ ವಾಡಿಕೆಯಂತೆ 766 ಮಿ.ಮೀ ಬದಲು 918 ಮಿ.ಮೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ 2,974 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 3,581 ಮಿ.ಮೀ ಮಳೆ ಬಿದ್ದಿದೆ. ಮಲೆನಾಡು ಜಿಲ್ಲೆಗಳಲ್ಲಿ 1,469 ಮಿ.ಮೀ ಬದಲಾಗಿ 1,694 ಮಿ.ಮೀ, ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ 397 ಮಿ.ಮೀ ಬದಲಾಗಿ 481 ಮಿ.ಮೀ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 292 ಮಿ.ಮೀ ಬದಲು 371 ಮಿ.ಮೀ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾದರೆ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಕೊಡಗಿನಲ್ಲಿ ವಾಡಿಕೆಯಷ್ಟೇ ಮಳೆ ಸುರಿದಿದೆ.

ಕಳೆದ ವರ್ಷ ಮಳೆ ಕೊರತೆಯಿಂದ ಆಹಾರ ಉತ್ಪಾದನೆ ಕುಂಠಿತವಾಗಿತ್ತು. ಈ ಬಾರಿ ಮುಂಗಾರು ಆಶಾದಾಯಕವಾಗಿರುವ ಕಾರಣ ನಿಗದಿಗಿಂತ ಹೆಚ್ಚು ಆಹಾರ ಉತ್ಪಾದನೆಯಾಗಲಿದೆ. ರೈತರಿಗೆ ಒಳ್ಳೆಯ ವರಮಾನ ಸಿಗುವ ನಿರೀಕ್ಷೆ ಇದೆ. ಏಕದಳ, ದ್ವಿದಳ ಧಾನ್ಯ ಸೇರಿ ವಾಣಿಜ್ಯ ಬೆಳೆಗಳ ಉತ್ಪಾದನೆ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಬಿತ್ತನೆ ಬೀಜ ವಿತರಿಸುವ ಕೆಲಸ ನಡೆದಿದೆ. ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಅದರಲ್ಲಿ 4.5 ಸಾವಿರ ರೂ. ಮೌಲ್ಯದ ಪರಿಕರ ಹಾಗೂ 1.5 ಸಾವಿರ ರೂ. ಹಣ ನೇರವಾಗಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಸರ್ಕಾರದ ಯೋಜನೆಗಳನ್ನು‌ ರೈತರು ಸದುಪಯೋಗಪಡಿಸಿಕೊಳ್ಳಬೇಕು" - ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇದನ್ನೂ ಓದಿ: ವಾಡಿಕೆಗಿಂತ ಶೇ 8ರಷ್ಟು ಅಧಿಕ ಮಳೆ, ಬಿತ್ತನೆ ಹೆಚ್ಚಳ: ಹಣದುಬ್ಬರ ಕಡಿಮೆಯಾಗುವ ನಿರೀಕ್ಷೆ - Rainfall In India

ETV Bharat Logo

Copyright © 2025 Ushodaya Enterprises Pvt. Ltd., All Rights Reserved.