ETV Bharat / state

3 ವರ್ಷದ ಬಳಿಕ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ - More rainfall in the state - MORE RAINFALL IN THE STATE

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಅಂಕಿ- ಅಂಶ ನೀಡಿದೆ.

more-than-usual-rainfall-in-the-state-after-3-years
3 ವರ್ಷದ ಬಳಿಕ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ (ETV Bharat)
author img

By ETV Bharat Karnataka Team

Published : Sep 18, 2024, 9:43 PM IST

ಬೆಂಗಳೂರು: ಮುಂಗಾರು ಮುಗಿಯಲು 2 ವಾರ ಬಾಕಿ ಇದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಈ ಮೂಲಕ 3 ವರ್ಷದ ಬಳಿಕ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿರುವುದು ಗಮನಾರ್ಹವಾಗಿದೆ.

more-than-usual-rainfall-in-the-state-after-3-years
ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ (ETV Bharat)

ಜೂ 1ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಾಡಿಕೆಯಂತೆ ರಾಜ್ಯದಲ್ಲಿ 766 ಮಿಮೀ ಮಳೆಯಾಗುವ ಬದಲು 918 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.20 ಅಧಿಕವಾಗಿ ಮಳೆಯಾಗಿದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ 2,974 ಮಿಮೀ ಮಳೆಯಾಗಬೇಕಿತ್ತು. ಆದರೆ, 3,581 ಮಿಮೀ ಸುರಿದಿದ್ದು, ವಾಡಿಕೆಗಿಂತ ಶೇ.20 ಹೆಚ್ಚು ಬಿದ್ದಿದೆ. ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ 1,469 ಮಿಮೀ ಮಳೆ ಬದಲಾಗಿ 1,694 ಸುರಿದಿದ್ದು, ವಾಡಿಕೆಗಿಂತ ಶೇ.15 ಅಧಿಕ ಮಳೆಯಾಗಿದೆ. ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಡಿಕೆಯಂತೆ 397 ಮಿಮೀ ಮಳೆ ಸುರಿಯಬೇಕಿತ್ತು. ಆದರೆ, 481 ಮಿಮೀ ಬಿದ್ದಿದ್ದು, ಶೇ.21 ಅಧಿಕ ವರ್ಷಧಾರೆಯಾಗಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 292 ಮಿಮೀ ಮಳೆಯಾಗುವ ಬದಲು 371 ಮಿಮೀ ಸುರಿದಿದ್ದು, ಶೇ.27 ಗಿಂತ ಅಧಿಕ ವರ್ಷಧಾರೆಯಾಗಿದೆ.

ಜೂ 1ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಾಡಿಕೆಯಂತೆ ರಾಜ್ಯದಲ್ಲಿ 766 ಮಿಮೀ ಮಳೆಯಾಗುವ ಬದಲು 918 ಮಿಮೀ ಮಳೆ (ETV Bharat)
ಹವಾಮಾನ ಇಲಾಖೆ ಹೇಳಿದ್ದೇನು?: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾದರೆ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೀದರ್​, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಕೊಡಗಿನಲ್ಲಿ ವಾಡಿಕೆಯಷ್ಟೇ ವರ್ಷಧಾರೆಯಾಗಿದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ.ಬಹುತೇಕ ಜಿಲ್ಲೆಗಳಲ್ಲಿ ಈ ತಿಂಗಳು ಮಳೆ ಕುಸಿತ: ಮುಂಗಾರು ಕೊನೆಗೊಳ್ಳಲು ಒಂದೆರಡು ಬಾಕಿ ಇರುವಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ವಾತಾವರಣದಲ್ಲಿ ತೇವಾಂಶ ಕೊರತೆ ಇರುವುದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಅಥವಾ ವಾಯುಭಾರ ಕುಸಿತ ಇಲ್ಲದಿರುವುದೂ ಸೇರಿ ಇತರೆ ಕಾರಣಗಳಿಂದ ಸದ್ಯ ಮುಂಗಾರು ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23ರವರೆಗೆ ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕ ಸೇರಿ ರಾಜ್ಯದಲ್ಲಿ ಮಳೆ ಬೀಳುವ ಲಕ್ಷಣಗಳಿಲ್ಲ. ಸೆಪ್ಟೆಂಬರ್ 24ರಿಂದ ರಾಜ್ಯದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಮೂರು ತಿಂಗಳಿಂದ ಉತ್ತಮ ಮಳೆ: ಮೂರು ತಿಂಗಳಿಂದ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದಲ್ಲಿ ಪ್ರಸಕ್ತ ತಿಂಗಳು ಮಳೆ ಕೊರತೆ ಎದುರಾಗಿದೆ. ಈ ತಿಂಗಳು ಇಲ್ಲಿಯವರೆಗೆ ರಾಜ್ಯಾದ್ಯಂತ 88 ಮಿಮೀ ಮಳೆಯಾಗಬೇಕಿತ್ತು. ಆದರೆ, 73 ಮಿಮೀ ಮಳೆಯಾಗಿದ್ದು, ಶೇ.17 ರಷ್ಟು ವಾಡಿಕೆಗಿಂತ ಕಡಿಮೆ ಸುರಿದಿದೆ. ಕರಾವಳಿ, ಮಲೆನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಡಿಕೆಯಷ್ಟೂ ಮಳೆ ಸುರಿದಿದೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಶೇ. 77, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೇ.31ರಷ್ಟು ಮಳೆ ಕೊರತೆ ಉಂಟಾಗಿದೆ. ಒಟ್ಟು 21 ಜಿಲ್ಲೆಗಳಲ್ಲಿ ಶೇ.90ರಷ್ಟು ಮಳೆ ಕೊರತೆಯಾಗಿದೆ ಎಂದು ಸಿ. ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ:' ಒಂದು ರಾಷ್ಟ್ರ, ಒಂದು ಚುನಾವಣೆ‘ ವರದಿಗೆ ಕೇಂದ್ರ ಅನುಮೋದನೆ: ಖರ್ಗೆ ವಿರೋಧ - One Nation One Election

ETV Bharat Logo

Copyright © 2025 Ushodaya Enterprises Pvt. Ltd., All Rights Reserved.