ETV Bharat / state

ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಮೃತ: ಡಿಜಿಪಿ ರೂಪಾ - NAXAL VIKRAM GOWDA

ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ರೂಪಾ ಡಿ ನಕ್ಸಲ್​ ವಿಕ್ರಂ ಗೌಡ ಎನ್​ಕೌಂಟರ್​ನಲ್ಲಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ.

Anti-Naxal Force
ನಕ್ಸಲ್‌ ನಿಗ್ರಹ ಪಡೆ (ETV Bharat)
author img

By ETV Bharat Karnataka Team

Published : Nov 19, 2024, 6:48 PM IST

ಉಡುಪಿ : ಹೆಬ್ರಿ ತಾಲೂಕಿನ ಕಬ್ಬಿನಾಲೆ ಸಮೀಪದ ಪೀತಬೈಲು ಎಂಬಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೋಸ್ಟ್​ ವಾಂಟೆಡ್ ನಕ್ಸಲ್ ವಿಕ್ರಂ ಗೌಡ(46) ಮೃತಪಟ್ಟಿದ್ದಾರೆ ಎಂದು ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ರೂಪಾ ಡಿ ತಿಳಿಸಿದ್ದಾರೆ.

ಮಂಗಳವಾರ ಎನ್‌ಕೌಂಟರ್‌ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ. ವಿಕ್ರಂ ಗೌಡ ವಿರುದ್ದ ಕೇರಳದಲ್ಲಿ 19 ಸೇರಿದಂತೆ, ಕೊಲೆ, ಸುಲಿಗೆ ಸಂಬಂಧ ಒಟ್ಟು 61 ಪ್ರಕರಣಗಳು ದಾಖಲಾಗಿವೆ. ನಕ್ಸಲ್‌ ನಿಗ್ರಹ ಪಡೆ ಈ ಕಾರ್ಯಾಚರಣೆ ‌ನಡೆಸಿದೆ‌ ಎಂದಿದ್ದಾರೆ.

ಡಿಜಿಪಿ ರೂಪಾ ಅವರಿಂದ ಮಾಹಿತಿ (ETV Bharat)

ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕ ಜಿತೇಂದ್ರ ದಯಾಮಾ ನೇತೃತ್ವದಲ್ಲಿ ಅರಣ್ಯದಲ್ಲಿ ಸತತ 10 ದಿನಗಳಿಂದ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ನ‌. 10 ರಿಂದ ನಿರಂತರ ಪ್ರಯತ್ನ ಜಾರಿಯಲ್ಲಿತ್ತು. ನಕ್ಸಲರ ಬಗ್ಗೆ ಮಾಹಿತಿ ಕಲೆ ಹಾಕಿ ಯಶಸ್ವಿ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಎಎನ್‌ಎಫ್‌ನ ಮುಕುಟಕ್ಕೆ ದೊರೆತ ಗರಿ: ನಮ್ಮ ಆಂತರಿಕ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಇತ್ತೀಚೆಗೆ ಅರಣ್ಯದಲ್ಲಿ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದ್ದರು. ಈ ಕಾರ್ಯಾಚರಣೆ ಗುಪ್ತಚರ ವಿಭಾಗ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ನಡೆದಿದೆ. ಇದು ಎಎನ್‌ಎಫ್‌ನ ಮುಕುಟಕ್ಕೆ ದೊರೆತ ಗರಿ ಎಂದು ಅವರು ತಿಳಿಸಿದ್ದಾರೆ.

ಎಎನ್‌ಎಫ್ 2005 ಮೇ ತಿಂಗಳಿನಲ್ಲಿ ಸ್ಥಾಪನೆಗೊಂಡಿದ್ದು, ಆ ಬಳಿಕ ನಡೆದ ನಾಲ್ಕನೇ ಎನ್‌ಕೌಂಟರ್ ಇದಾಗಿದೆ. ವಿಕ್ರಂ ಗೌಡ ಜತೆಗೆ ಇನ್ನೂ ಐದಾರು ಮಂದಿ ಇದ್ದಾರೆ. ಅವರು ಹೇಗೆ ಮುಂದೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ನಮ್ಮ ಕೂಂಬಿಂಗ್ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕಬಾನಿ ದಳಂ 2 ತಂಡ ಮುನ್ನಡೆಸುತ್ತಿದ್ದರು: ಈ ಕಾರ್ಯಾಚರಣೆಗೆ ಬೆಂಗಳೂರಿನ ಕೆ‌ಎಸ್‌ಐಎಸ್‌ಎಫ್​ನ 75 ಮತ್ತು ಶಿವಮೊಗ್ಗದಿಂದ 25 ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ವಿಕ್ರಂ ಗೌಡ ನಕ್ಸಲರ ಕಬಾನಿ ದಳಂ 2 ಎಂಬ ತಂಡವನ್ನು ಮುನ್ನಡೆಸುತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ನಕ್ಸಲ್ ವಿಕ್ರಂ ಗೌಡ ಎನ್​ಕೌಂಟರ್: ಕಾರ್ಯಾಚರಣೆ ಮಾಹಿತಿ ಬಿಚ್ಚಿಟ್ಟ ಸಚಿವ ಜಿ.ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.