ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ಇಬ್ಬರೂ ನೀರಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಬೈತಖೋಲ್ ಗ್ರಾಮದಲ್ಲಿ ಬುಧವಾರ ನಡೆದಿದೆ.
ಬೈತಖೋಲದ ರೇಣುಕಾ ಹಾಗೂ ಸುಜಾತ ಮೃತ ತಾಯಿ - ಮಗಳಾಗಿದ್ದಾರೆ. ಮುಂಜಾನೆ ಕಾಳಿ ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ನದಿಯಲ್ಲಿ ಇಳಿದಾಗ ಈ ದುರ್ಘಟನೆ ಸಂಭವಿಸಿದೆ. ಮೃತದೇಹಗಳನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಹುಡುಕಿ ದಡಕ್ಕೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಮನಗರ: ಒಬ್ಬರನ್ನು ಕಾಪಾಡಲು ಹೋಗಿ ಪ್ರಾಣ ಕಳೆದುಕೊಂಡ ಐವರು ವಿದ್ಯಾರ್ಥಿಗಳು - Five Students Died