ETV Bharat / state

ಚಾಮರಾಜನಗರ: ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು - Mother And 2 Children Died

ಜಲಾಶಯದಲ್ಲಿ ಬಟ್ಟೆ ಒಗೆಯುತ್ತಿದ್ದ ತಾಯಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಪ್ರಾಣ ರಕ್ಷಣೆ ಧಾವಿಸಿದ ಇಬ್ಬರು ಮಕ್ಕಳೂ ಕೂಡಾ ಸಾವನ್ನಪ್ಪಿದ್ದಾರೆ.

ತಾಯಿ ಸೇರಿ ಎರಡು ಮಕ್ಕಳು ಸಾವು
ತಾಯಿ ಸೇರಿ ಎರಡು ಮಕ್ಕಳು ಸಾವು
author img

By ETV Bharat Karnataka Team

Published : Apr 5, 2024, 3:26 PM IST

ಚಾಮರಾಜನಗರ: ಬಟ್ಟೆ ಒಗೆಯುತ್ತಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಗೋಪಿನಾಥಂ ಸಮೀಪದ ಪುದೂರು ಗ್ರಾಮದ ನಿವಾಸಿಗಳಾದ ಮೀನಾ (34), ಪವಿತ್ರಾ (14) ಹಾಗು ಕೀರ್ತಿ (11) ಮೃತರೆಂದು ತಿಳಿದುಬಂದಿದೆ.

ಮೀನಾ ಅವರು ತಮ್ಮ ಮಕ್ಕಳೊಂದಿಗೆ ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದರು. ಬಟ್ಟೆ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋದ ಮೀನಾ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ತಕ್ಷಣ ಇಬ್ಬರು ಹೆಣ್ಣು ಮಕ್ಕಳು ತಾಯಿಯನ್ನು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಸ್ಥಳದಲ್ಲಿದ್ದ ಮಗ ಸುರೇಂದ್ರ ತಂದೆಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರೂ ಅಸುನೀಗಿದ್ದಾರೆ.

ಗ್ರಾಮಸ್ಥರ ಸಹಾಯದಿಂದ ಶವ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮಲೆಮಹದೇಶ್ವರ ಬೆಟ್ಟ ಆಸ್ಪತ್ರೆಗೆ ಕಳುಹಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

ಇದನ್ನೂ ಓದಿ: ತಂದೆಗೆ ಬೆಂಕಿ ಹಚ್ಚಿ, ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಮಗ - son killed his father

ETV Bharat Logo

Copyright © 2024 Ushodaya Enterprises Pvt. Ltd., All Rights Reserved.