ETV Bharat / state

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ - Suicide Case - SUICIDE CASE

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

suicide
ಘಟನಾ ಸ್ಥಳ (ETV Bharat)
author img

By ETV Bharat Karnataka Team

Published : Aug 9, 2024, 1:45 PM IST

Updated : Aug 9, 2024, 3:08 PM IST

ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.

ಚಂಪಕಾಪುರ ಗ್ರಾಮದ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಕೌಟಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಬಾವಿಗೆ ಬಿದ್ದಿದ್ದ ಮೂವರನ್ನೂ ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರು. ಆದರೆ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಬಾವಿಯಿಂದ ಹೊರ ತೆಗೆಯುವಷ್ಟರಲ್ಲಿ ಮೂವರೂ ಮೃತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾಣಿ ಪತಿ ರಾಜೇಶ್ ಮತ್ತಿಕೈ ಗ್ರಾಮದಲ್ಲಿ ಟಿವಿ ರಿಪೇರಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ತಾಯಿ, ಮಕ್ಕಳಿಬ್ಬರ ಸಾವಿನ ಕುರಿತು ಮಾತನಾಡಿರುವ ಸ್ಥಳೀಯರಾದ ಸುಬ್ರಮಣ್ಯ ಅವರು, ಚಂಪಕಪುರದ ರಾಜೇಶ್ ಅವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಅಚ್ಚರಿ ತಂದಿದೆ. ರಾಜೇಶ್ ಟಿವಿ ರಿಪೇರಿ‌ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಆತ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ಆದರೆ ಇವರ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ತನಿಖೆ ಬಳಿಕವೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.

ಇದನ್ನೂ ಓದಿ: 'ತಂದೆ - ತಾಯಿ ಮತ್ತು ನಾನು ಮಾತ್ರ ದುಡಿಯಬೇಕೆ?' ಎಂದ ತಮ್ಮನ ಎದೆಗೆ ಚಾಕು ಇರಿತ: ಅಣ್ಣನ ಬಂಧನ - stabbed to death

Last Updated : Aug 9, 2024, 3:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.