ETV Bharat / state

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಪಾರು - BMTC bus caught fire - BMTC BUS CAUGHT FIRE

ಚಲಿಸುತ್ತಿದ್ದ ಬಿಎಂಟಿಸಿ ಬಸ್​ಗೆ ಬೆಂಕಿ ತಗುಲಿರುವ ಘಟನೆ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಡೆಯಿತು.

ಬಿಎಂಟಿಸಿ ಬಸ್ ಬೆಂಕಿಗಾಹುತಿ
ಬಿಎಂಟಿಸಿ ಬಸ್ ಬೆಂಕಿಗಾಹುತಿ (ETV Bharat)
author img

By ETV Bharat Karnataka Team

Published : Jul 9, 2024, 10:53 AM IST

Updated : Jul 9, 2024, 12:10 PM IST

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ (ETV Bharat)

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್​ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಗ್ಗೆ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಸಮೀಪ ನಡೆದಿದೆ. ಇಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಕೂಡಲೇ ಎಚ್ಚೆತ್ತ ಬಸ್ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಬಸ್ ಆವರಿಸಿಕೊಂಡಿತು.

ಎಂ.ಜಿ.ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹತೋಟಿಗೆ ತಂದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಒಂದು ವಾರದಲ್ಲಿ ದಾಖಲೆಯ 96 ಇಂಚು ಮಳೆ: ಮಂಗಗಳಿಗೂ ಸಂಕಷ್ಟ - Chikkamagaluru Rain

Last Updated : Jul 9, 2024, 12:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.