ETV Bharat / state

ಮಹಾತ್ಮ ಗಾಂಧಿ ಕಾಂಗ್ರೆಸ್​ಗೂ, ಇಂದಿನ ಕಾಂಗ್ರೆಸ್​ಗೂ ಬಹಳ ವ್ಯತ್ಯಾಸ ಇದೆ : ಬಸವರಾಜ ಬೊಮ್ಮಾಯಿ - MP BASAVARAJ BOMMAI

ಸಂಸದ ಬಸವರಾಜ ಬೊಮ್ಮಾಯಿ ಅವರು ಮಹಾತ್ಮ ಗಾಂಧಿ ಕಾಂಗ್ರೆಸ್​ಗೂ, ಇಂದಿನ ಕಾಂಗ್ರೆಸ್​ಗೂ ಬಹಳ ವ್ಯತ್ಯಾಸ ಇದೆ ಎಂದಿದ್ದಾರೆ.

mp-basavaraj-bommai
ಸಂಸದ ಬಸವರಾಜ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : 14 hours ago

Updated : 13 hours ago

ಹಾವೇರಿ : ಮಹಾತ್ಮ ಗಾಂಧಿ ಕಾಂಗ್ರೆಸ್​ಗೂ ಇಂದಿನ ಕಾಂಗ್ರೆಸ್​ಗೂ ಬಹಳ ವ್ಯತ್ಯಾಸ ಇದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಈ ಕುರಿತು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಅಸಲಿ ಕಾಂಗ್ರೆಸ್, ಇದು ನಕಲಿ ಕಾಂಗ್ರೆಸ್. ಎರಡಕ್ಕೂ ವ್ಯತ್ಯಾಸ ಇದೆ ಎಂದು ವ್ಯಂಗ್ಯವಾಡಿದರು.

ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು (ETV Bharat)

ಮಹಾತ್ಮ ಗಾಂಧಿಯವರ ತತ್ವ ಆದರ್ಶಗಳಿಗೆ ತದ್ವಿರುದ್ಧವಾಗಿ ಕಾಂಗ್ರೆಸ್​ನವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ರೀತಿ ಆಡಳಿತವೇ ಇಲ್ಲ. ಎಲ್ಲಾ ಇಲಾಖೆಗಳು, ನಿಗಮಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬೊಮ್ಮಾಯಿ ಆರೋಪಿಸಿದರು.

ದೀನ ದಲಿತರ ಅನುದಾನದಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಗಾಂಧಿಜೀಯವರ ಸ್ವರಾಜ್ಯಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ದೂರಿದರು.

ಕಾಂಗ್ರೆಸ್ ಅಧಿವೇಶನಕ್ಕೆ ಸರ್ಕಾರದ ಹಣ ಬಳಸ್ತಿರೋದು ಎಷ್ಟು ಸರಿ? ಇದು ಯಾವ ಕಾನೂನಿನಲ್ಲಿದೆ? ರಾಜಕೀಯ ಸಮ್ಮೇಳನಗಳಿಗೆ ಸರ್ಕಾರದ ಹಣ ಬಳಸೋದು ಎಷ್ಟರ ಮಟ್ಟಿಗೆ ಸರಿ ಎಂದು ಮಾಜಿ ಸಿಎಂ ಪ್ರಶ್ನಿಸಿದರು.

ಗಾಂಧೀಜಿಯವರನ್ನು ಮುಂದಿಟ್ಟುಕೊಂಡು ತಮ್ಮ ಬ್ಯಾನರ್ ಇಟ್ಟುಕೊಂಡು ಅಧಿವೇಶನ ಮಾಡುತ್ತಿದ್ದಾರೆ. ಅಸಲಿ ಗಾಂಧಿ ಹೆಸರಲ್ಲಿ ನಕಲಿ ಅಧಿವೇಶನ ಎಂದು ಅವರು ಟೀಕಿಸಿದರು.

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಕುರಿತಂತೆ ಮಾತನಾಡಿದ ಬೊಮ್ಮಾಯಿ, ಅಧಿಕಾರದ ಮದ, ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ವಿರೋದ ಪಕ್ಷಗಳನ್ನು ದಮನ ಮಾಡಲು ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ. ಇಂಥ ಪ್ರಕರಣಗಳು ಸಾಕಷ್ಟು ನಡೆದಿವೆ. ಆದರೆ ಇನ್ನೂ ಕೆಲವು ಪ್ರಕರಣಗಳು ಬೆಳಕಿಗೆ ಬಂದಿಲ್ಲ ಎಂದು ಹೇಳಿದರು.

ಸರ್ಕಾರ ಪೊಲೀಸ್ ಸ್ಟೇಷನ್​ಗಳಲ್ಲಿ ಡೀಲ್ ವ್ಯವಸ್ಥೆ ಮಾಡುತ್ತಿದೆ. ಗೃಹ ಸಚಿವರು ಏನೂ ನಡೆದಿದೆ ಗೊತ್ತಿಲ್ಲ ಎಂಬ ರೀತಿ ಮಾತನಾಡುತ್ತಾರೆ. ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ಘಟನೆಗಳು ತುರ್ತು ಪರಿಸ್ಥಿತಿ ನೆನಪಿಸುತ್ತಿವೆ ಎಂದು ಬೊಮ್ಮಾಯಿ ಆರೋಪಿಸಿದರು.

ಮುನಿರತ್ನ ಮೇಲೆ ಆರೋಪ ಇದೆ, ಅದನ್ನು ಕೋರ್ಟ್​ನಲ್ಲಿ ಅವರು ಎದುರಿಸುತ್ತಿದ್ದಾರೆ. ಅವರ ಮೇಲೆ ಮೊಟ್ಟೆ ಒಗೆಯುತ್ತಾರೆ ಅಂದರೆ ಯಾವ ಮಟ್ಟಕ್ಕೆ ಸರ್ಕಾರ ಇಳಿದಿದೆ? ಜನ ಪ್ರತಿನಿಧಿಗಳು ನಿರ್ಭೀತಿ, ನಿರ್ಭಯದಿಂದ ಕೆಲಸ ಮಾಡೋಕೆ ಹೇಗೆ ಸಾಧ್ಯ? ಎಂದು ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಮುನಿರತ್ನ ನಾಟಕ‌ ಮಾಡುತ್ತಿದ್ದಾರೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರ ಕುರಿತಂತೆ ಮಾತನಾಡಿದ ಅವರು, ಯಾರಾದರೂ ಆ ರೀತಿ ಮಾಡಿಕೊಳ್ಳುವುದು ಉಂಟಾ? ನಮ್ ಮೇಲೆ ನಾವೇ ಮೊಟ್ಟೆ ಹಾಕಿಸಿಕೊಂಡು ಅವಮಾನ ಮಾಡಿಸಿಕೊಳ್ಳೋಕೆ ಆಗುತ್ತಾ? ಎಂದು ಬೊಮ್ಮಾಯಿ ಪ್ರಶ್ನಿಸಿದರು.

ಸಿ.ಟಿ ರವಿಗೆ ಧರ್ಮಸ್ಥಳಕ್ಕೆ ಬರಲಿ ಎಂಬ ಸಚಿವೆ ಹೆಬ್ಬಾಳ್ಕರ್ ಸವಾಲು ವಿಚಾರ ಕುರಿತಂತೆ ಮಾತನಾಡಿದ ಸಂಸದರು, ಅದು ಅವರವರಿಗೆ ಬಿಟ್ಟಿದ್ದು. ದೇವರ ನಂಬಿಕೆ ಅವರವರ ವೈಯಕ್ತಿಕ ವಿಚಾರ ಎಂದು ತಿಳಿಸಿದರು.

ಸಿ. ಟಿ ರವಿ ಹಾಗೂ ಹೆಬ್ಬಾಳ್ಕರ್ ಇಬ್ರೂ ಕಂಪ್ಲೇಂಟ್ ಕೊಟ್ಟಿದ್ದಾರೆ. ಒಂದು ಕಡೆ ಕಂಪ್ಲೇಂಟ್​ಗೆ ಕೂಡಲೇ ರಿಯಾಕ್ಟ್ ಮಾಡುತ್ತೀರಿ. ಆದರೆ ಸಿ ಟಿ ರವಿ ಕಂಪ್ಲೇಂಟ್ ಕೊಟ್ಟಿರೋದನ್ನ ಎಫ್​ಐಆರ್ ಮಾಡೇ ಇಲ್ಲ. ಹೈಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸಿ. ಟಿ ರವಿ ಅವರ ಪರಿಸ್ಥಿತಿ ಏನು ಆಗ್ತಿತ್ತೋ ಗೊತ್ತಿಲ್ಲ? ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದಿಂದ ಹಾಲಿನ ದರ ಹೆಚ್ಚಳ ವಿಚಾರ ಕುರಿತಂತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ಪರ್ವ ನಡೆದಿದೆ. ಸ್ಟಾಂಪ್ ಡ್ಯೂಟಿ, ಎಕ್ಸೈಜ್ ಡ್ಯೂಟಿ ಸೇರಿದಂತೆ ಎಲ್ಲದರ ತೆರಿಗೆ ಹೆಚ್ಚಿಸಿದ್ದಾರೆ. 15,000 ಕೋಟಿ ರೂಪಾಯಿ ಹೊಸ ತೆರಿಗೆ ಹಾಕಿದ್ದಾರೆ. ಹಾಲಿನ ದರ, ನೀರಿನ ದರ ಎಲ್ಲದರಲ್ಲೂ ತೆರಿಗೆ ಹೆಚ್ಚಿಗೆ ಮಾಡುತ್ತಿದ್ದಾರೆ. ಜನ ಸಾಮಾನ್ಯರು ಬಳಕೆ‌ ಮಾಡುವಂತ ಎಲ್ಲಾ ವಸ್ತುಗಳ ದರ ಹೆಚ್ಚಳ ಮಾಡಿದ್ದಾರೆ ಎಂದರು.

ಗಾಳಿಗೂ ಟ್ಯಾಕ್ಸ್ ಹಾಕೋ ಕಾಲ ದೂರ ಇಲ್ಲ : ಮುಂಬರುವ ದಿನಗಳಲ್ಲಿ ಮರಳು, ಕಡಿ‌ ಕೂಡ ಇನ್ನಷ್ಟು ತುಟ್ಟಿ ಆಗಲಿದೆ. ಪ್ರತಿ ಆರ್ಥಿಕ ಚಟುವಟಿಕೆ ಮೇಲೆ ಟ್ಯಾಕ್ಸ್ ಹಾಕುತ್ತಿದ್ದಾರೆ. ಮುಂದೆ ಇವರು ಗಾಳಿಗೂ ಟ್ಯಾಕ್ಸ್ ಹಾಕೋ ಕಾಲ ದೂರ ಇಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ : ಉತ್ತರ ಕರ್ನಾಟಕದ ಅಭಿವೃದ್ಧಿ ಚರ್ಚೆ ಇಲ್ಲದೆ ಕಾಟಾಚಾರಕ್ಕೆ ಬೆಳಗಾವಿ ಅಧಿವೇಶನ : ಬಸವರಾಜ ಬೊಮ್ಮಾಯಿ - BASAVARAJ BOMMAI

Last Updated : 13 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.