ETV Bharat / state

ಚುನಾವಣೆಯ ನಂತರ ಸರ್ಕಾರ ಪತನವಾಗುತ್ತೆ ಎಂದಿದ್ದೆ, ಈಗ ಅದೇ ಹಾದಿಯಲ್ಲಿ ಸಾಗುತ್ತಿದೆ : ಬೊಮ್ಮಾಯಿ - MP Basavaraj Bommai - MP BASAVARAJ BOMMAI

ಸಂಸದ ಬಸವರಾಜ ಬೊಮ್ಮಾಯಿ ಅವರು ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಚ್ಚಾಟದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಜನ ಇದನ್ನು ನೋಡುತ್ತಿದ್ದಾರೆ ಎಂದರು.

mp-basavaraj-bommai
ಬಸವರಾಜ್ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : Jun 30, 2024, 5:47 PM IST

ಸಂಸದ ಬಸವರಾಜ ಬೊಮ್ಮಾಯಿ (ETV Bharat)

ಹಾವೇರಿ : ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದೆ. ಈಗ ನೋಡಿದರೆ ಅದೇ ಹಾದಿಯಲ್ಲಿ ಸರ್ಕಾರ ಸಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುರ್ಚಿಯ ಕಚ್ಚಾಟ ನಡೆದಿದೆ. ನನಗೆ ತಿಳಿದಂತೆ ಇಷ್ಟು ಅನುಭವವಿರುವ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಸಚಿವರು ಇದ್ದು ಕುರ್ಚಿಗಾಗಿ ಕಚ್ಚಾಟ ಮಾಡುತ್ತಿರುವುದು ರಾಜ್ಯದ ಹಿತದೃಷ್ಠಿಯಿಂದಲ್ಲ. ಸ್ವಹಿತಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ರಾಜ್ಯದ ಜನ ಇದನ್ನು ಗಮನಿಸುತ್ತಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್‌ ಅವರು ಮೊದಲು ವಿಧಾನಸಭೆಯ ಸದಸ್ಯರು, ಡಿಸಿಎಂ, ಮುಖ್ಯಮಂತ್ರಿ ನಡುವೆ ಏನಾಗುತ್ತಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಲಿ ಎಂದು ಬೊಮ್ಮಾಯಿ ಟಾಂಗ್​ ಕೊಟ್ಟರು.

ಸಲೀಂ ಅಹ್ಮದ್ ಗೊತ್ತಿದ್ದೂ ಗೊತ್ತಿಲ್ಲದಂತೆ ಇದ್ದಾರೆ. ಅವರನ್ನು ನೋಡಿದರೆ ನನಗೆ ಕನಿಕರವಾಗುತ್ತದೆ. ಸಲೀಂ ಅಹ್ಮದ್ ಕಾಲು ಕೆಳಗಿನ ನೆಲ ಸರಿಯುತ್ತಿದೆ. ಅವರಿಗೆ ಗೊತ್ತಾಗುತ್ತಿಲ್ಲ. ಅದಕ್ಕೆ ನಾನೇನು ಮಾಡಲಿ ಎಂದು ಬೊಮ್ಮಾಯಿ ಪ್ರಶ್ನಿಸಿದರು.

ವಿಧಾನಸಭೆ ಸ್ಪೀಕರ್​ ಯು. ಟಿ ಖಾದರ್ ಶಾಸಕರ ಭತ್ಯೆ ನಮ್ಮ ಜೊತೆ ಬಂದವರ ಟೀಗೆ ಸಾಲುವುದಿಲ್ಲ ಎಂಬ ಹೇಳಿಕೆ ಕುರಿತಂತೆ ಮಾತನಾಡಿದ ಬೊಮ್ಮಾಯಿ ಅವರು, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ಕುರಿತಂತೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲಿ. ನಾನಂತೂ ಈಗ ಶಾಸಕನಾಗಿ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.

ಈ ಹಿಂದೆ ಕಾಲರಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳಿದ್ದಂತೆ ಈಗ ಡೆಂಗ್ಯೂ ಕಾಣಿಸಿಕೊಂಡಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಬೊಮ್ಮಾಯಿ ಆರೋಪಿಸಿದರು. ಡೆಂಗ್ಯೂ ಕಾಣಿಸಿಕೊಳ್ಳುತ್ತಿದ್ದಂತೆ, ಉಲ್ಬಣವಾಗುತ್ತಿದ್ದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡರೆ ಅದನ್ನು ನಿಯಂತ್ರಿಸಬಹುದು ಎಂದು ಬೊಮ್ಮಾಯಿ ತಿಳಿಸಿದರು.

ಹಾವೇರಿ ಜಿಲ್ಲೆಯಲ್ಲಿನ ಡೆಂಡ್ಯೂ ಪ್ರಕರಣಗಳ ಕುರಿತಂತೆ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಮಾತನಾಡುತ್ತೇನೆ. ಪ್ರಕರಣ ಇರಲಿ ಬಿಡಲಿ. ಅಧಿಕಾರಿಗಳು ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದರು. ಬಳ್ಳಾರಿ ದೇವದಾರಿ ಯೋಜನೆ ಕುರಿತಂತೆ ಕೇಳಿದ ಪ್ರಶ್ನೆಗೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ : ರಾಜ್ಯದ ಅಭಿವೃದ್ದಿಗೆ ತೈಲ ದರ ಏರಿಕೆ ಎಂಬ ಸಿಎಂ ಹೇಳಿಕೆ ವಿಪರ್ಯಾಸ: ಬೊಮ್ಮಾಯಿ - Basavaraj Bommai

ETV Bharat Logo

Copyright © 2024 Ushodaya Enterprises Pvt. Ltd., All Rights Reserved.