ETV Bharat / state

ಮುಡಾ ಹಗರಣ: ಇ.ಡಿ.ವಿಚಾರಣೆ ಮುಗಿಸಿ ಹೊರಬಂದ ಸಂಸದ ಕುಮಾರ್ ನಾಯ್ಕ್ - MP KUMAR NAIK

ವಿಚಾರಣೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಗೌರವದಿಂದ ವಿಚಾರಣೆಗೆ ಹಾಜರಾಗಿದ್ದೇನೆ. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದೇನೆ ಎಂದು ಸಂಸದ ಕುಮಾರ್ ನಾಯ್ಕ್ ತಿಳಿಸಿದರು.

ಸಂಸದ ಕುಮಾರ್ ನಾಯ್ಕ್
ಸಂಸದ ಕುಮಾರ್ ನಾಯ್ಕ್ (ETV Bharat)
author img

By ETV Bharat Karnataka Team

Published : Nov 13, 2024, 8:10 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ಮುಂದೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಜಿ.ಕುಮಾರ್ ನಾಯ್ಕ್ ಇಂದು ಹಾಜರಾಗಿ ವಿಚಾರಣೆ ಎದುರಿಸಿದರು.

ಶಾಂತಿನಗರದಲ್ಲಿರುವ ಜಾರಿ ನಿರ್ದೇಶಾನಾಲಯ ಕಚೇರಿಗೆ ಆಗಮಿಸಿದ ಕುಮಾರ್ ನಾಯ್ಕ್ ಅವರನ್ನು ಇಂದು ಆರೂವರೆ ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. 2002ರಿಂದ 2005ರವರೆಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಕುಮಾರ್ ನಾಯ್ಕ್ ಅವರು ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಕೃಷಿ ಭೂಮಿಯನ್ನ ಕೃಷಿಯೇತರ ಭೂಮಿಯಾಗಿ ಪರಿವರ್ತಿಸಿದ್ದರು. ಈ ಸಂಬಂಧ ವಿಚಾರಣೆ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದರು.

ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರ್ ನಾಯ್ಕ್ ಅವರು, ವಿಚಾರಣೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಗೌರವದಿಂದ ವಿಚಾರಣೆಗೆ ಹಾಜರಾಗಿದ್ದೇನೆ. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದೇನೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಕೃಷಿ ಭೂಮಿಯನ್ನ ಯಾವ ರೀತಿ ಕೃಷಿಯೇತರ ಭೂಮಿಯಾಗಿ ಪರಿವರ್ತಿಸಿದ್ದೇನೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇನೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ವಿಚಾರಣೆ ಕರೆದರೆ ಮತ್ತೆ ಹಾಜರಾಗುವೆ ಎಂದರು.

ಇದನ್ನೂ ಓದಿ: ಮೈಸೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.