ETV Bharat / state

ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲೇ ರಾಜ್ಯ ವಿಧಾನಸಭೆ ಚುನಾವಣೆ; ನಳಿನ್ ಕುಮಾರ್ ಕಟೀಲ್ ಭವಿಷ್ಯ

ಮೋದಿಯವರ ಗೆಲುವಿಗಾಗಿ ನಾವು ಪರಿಶ್ರಮ ಪಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.

author img

By ETV Bharat Karnataka Team

Published : Mar 17, 2024, 10:35 PM IST

ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ನಮಗೆ ನೂರಕ್ಕೆ ನೂರು ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಮಂಗಳೂರಿನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳಿಂದ ಬಿಜೆಪಿಯ ಮತಗಟ್ಟೆಯ ಕಾರ್ಯಗಳು ಪ್ರಾರಂಭವಾಗಿದೆ. ಜಿಲ್ಲೆಯ ಎಲ್ಲಾ ಬೂತ್ ಮಟ್ಟದ ಸಭೆಗಳು, ಶಕ್ತಿಕೇಂದ್ರ, ಮಹಾಶಕ್ತಿ ಕೇಂದ್ರದ ಸಭೆಗಳು ಮುಗಿದಿವೆ. ನಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಅವರು ಹಿಂದಿನ ಎಲ್ಲಾ ದಾಖಲೆ ಮುರಿದು ಗೆಲ್ಲುವ ವಿಶ್ವಾಸವಿದೆ ಎಂದರು.

ಈಶ್ವರಪ್ಪ ಬಂಡಾಯ ಸರಿಯಾಗುತ್ತದೆ. ರಾಜಕೀಯ ಪಾರ್ಟಿಯಲ್ಲಿ ಇದೆಲ್ಲಾ ಇರುವಂತಹದ್ದೇ.‌ ನಮ್ಮಲ್ಲಿ ಎಲ್ಲಾ ಕಾರ್ಯಕರ್ತರ ಮನಸ್ಸು ಒಂದೇ ರೀತಿಯಿದೆ.‌ ಮೋದಿಯವರ ಗೆಲುವಿಗಾಗಿ ನಾವು ಪರಿಶ್ರಮ ಪಡುತ್ತಿದ್ದೇವೆ. ಮೂರುವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲು ಪೂರ್ಣ ಪರಿಶ್ರಮ ಹಾಕುತ್ತೇನೆ. ರಾಷ್ಟ್ರೀಯ ನಾಯಕರ ಸೂಚನೆಗೆ ಅನುಕೂಲವಾಗಿ ಕೆಲಸ ಮಾಡುತ್ತೇನೆ. ಅವರು ಹೇಳಿದ ಕಡೆಗಳಲ್ಲಿ ಪ್ರವಾಸ ಮಾಡುತ್ತೇನೆ. ಸಂಘಟನಾ ಕಾರ್ಯ ವಿಸ್ತರಣೆ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ : ಆರು ತಿಂಗಳ ಹಿಂದೆಯೇ ನನ್ನ ಬದಲಾವಣೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಒಪ್ಪಿಕೊಂಡಿದ್ದೆ: ನಳಿನ್ ಕುಮಾರ್ ಕಟೀಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.