ಬೆಳಗಾವಿ: ಕೇಂದ್ರದ ಮಾಜಿ ಸಚಿವ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಬ್ರೇನ್ ಹ್ಯಾಮರೇಜ್ ಆಗಿದ್ದು, ನಿನ್ನೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಮೇಶ್ ಜಿಗಜಿಣಗಿ ಅವರಿಗೆ ನರರೋಗ ತಜ್ಞರ ನೇತೃತ್ವದಲ್ಲಿ ಯಶಸ್ವಿ ಚಿಕಿತ್ಸೆ ಕೂಡ ಮಾಡಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಧ್ಯಮಗಳಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾಹಿತಿ ನೀಡಿದ್ದು, "ಮೆದುಳು ರಕ್ತಸ್ರಾವದಿಂದ ಬಳಲುತ್ತಿರುವ ಜಿಗಜಿಣಗಿ ಅವರಿಗೆ ಕೆಎಲ್ಇ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಒಳಗಡೆ ಬಿಟ್ಟಿಲ್ಲ. ಇಂದು ಮತ್ತೆ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇವೆ. ಈ ಬಗ್ಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೂ ಮಾಹಿತಿ ನೀಡಿದ್ದೇವೆ" ಎಂದು ತಿಳಿಸಿದರು.
ಇದನ್ನೂ ಓದಿ: 'ಅಮ್ಮನಿಂದ ನಿತ್ಯ ಹಲ್ಲೆ': ಅಕ್ಕಪಕ್ಕದ ಮನೆಯವರಲ್ಲಿ ಪುಟ್ಟ ಕಂದನ ಅಳಲು